ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಭೇಟಿ ಮಾಡಿದ ಉಮೇಶ್ ಜಾಧವ

By Kannadaprabha News  |  First Published Apr 21, 2024, 3:38 PM IST

ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ ಭೇಟಿ ಮಾಡಿದ ಉಮೇಶ್ ಜಾಧವ,   ತನಿಖೆಗೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು


ಕಲಬುರಗಿ (ಏ.21): ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜೊತೆಗೆ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಆ ಕುರಿತು ಸ್ವತಃ ಅವರೇ ಫೋಟೋ ಹಂಚಿಕೊಂಡಿದ್ದಾರೆ‌. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸಲ್ಲಿಸಿದೆ.

ಕೆಪಿಸಿಸಿ ಕಾನೂನು ವಿಭಾಗದ ಉಪಾಧ್ಯಕ್ಷ ಎನ್ ದಿವಾಕರ್, ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಯೋಗ ಬೆಂಗಳೂರಿನ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ.

Latest Videos

undefined

ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲಿಸಿ ಚನ್ನಪಟ್ಟಣಕ್ಕೆ ವಾಪಸ್ ಕಳಿಸಿ: ಸಿಎಂ ಸಿದ್ದರಾಮಯ್ಯ

ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ದಿವ್ಯಾಹಾಗರಗಿ ವಿರುದ್ಧ ತನಿಖೆ ನಡೆಯುತ್ತಿದ್ದು ಹಲವಾರು ಷರತ್ತುಗಳ ಮೇಲೆ ಜಾಮೀನು ಪಡೆದು ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಹೀಗಿರುವಾಗ ಬಿಜೆಪಿ ಅಭ್ಯರ್ಥಿ ಆರೋಪಿ ಭೇಟಿಯಾಗಿ ಅವರೊಂದಿನ ಫೋಟೋ ಹಂಚಿಕೊಂಡಿದ್ದು ನ್ಯಾಯಾಲಯದ ಷರತ್ತುಗಳ ಉಲ್ಲಂಘನೆ ಮಾಡಿರುವುದರ ಜೊತೆಗೆ ಪ್ರಭಾವ ಬಳಸಿಕೊಂಡು ತನಿಖೆಗೆ ಸಂಬಂಧಿಸಿದ ಸಾಕ್ಷ್ಯ ನಾಶಪಡಿಸುವ ಬಗ್ಗೆ ಕಾಂಗ್ರೆಸ್‌ಗೆ ಶಂಕೆ ವ್ಯಕ್ತವಾಗಿದೆ.

ಮೋದಿ ಅವರ 10 ವರ್ಷದ ಆಡಳಿತದಲ್ಲಿ ಕ್ರಾಂತಿಕಾರಿ ಯೋಜನೆ ಅನುಷ್ಠಾನ: ತೇಜಸ್ವಿ ಸೂರ್ಯ

ಆರೋಪಿ ಭೇಟಿ ಮಾಡಿ ಬೆಂಬಲ ಕೇಳುವ ಬಿಜೆಪಿ ಅಭ್ಯರ್ಥಿ ನಡುವಳಿಕೆಗಳು ಕಾನೂನಿನ ಪಾವಿತ್ರ್ಯತೆ ಹಾಳುಮಾಡುವುದು ಮಾತ್ರವಲ್ಲ ಜೊತೆಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆ ಹಾಳುಮಾಡುತ್ತದೆ. ಆಯೋಗ ಕೂಡಲೇ ಮಧ್ಯೆ ಪ್ರವೇಶಿಸಿ ಕಾನೂನು‌ ವ್ಯವಸ್ಥೆ ಪಾವಿತ್ರ್ಯತೆ ಮತ್ತು ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

click me!