ಕರ್ನಾಟಕದಲ್ಲಿ 28ಕ್ಕೆ 28 ಸೀಟುಗಳನ್ನೂ ಗೆಲ್ಲುತ್ತೇವೆ. ಕಾಂಗ್ರೆಸ್ ಬಳಿ ಖರ್ಚು ಮಾಡಲು ಸಾಕಷ್ಟು ಹಣವಿದೆ. ಅವರು ಈ ಬಾರಿ ₹500 ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡಬಹುದು. ಆದರೂ, ಸೋಲು ಅನುಭವಿಸಲಿದ್ದಾರೆ. ಕಾಂಗ್ರೆಸ್ ಮೇಲೆ ಜನತೆಗೆ ಭರವಸೆಯೇ ಇಲ್ಲದ ಕಾರಣ ಇಡಿ ದೇಶದಲ್ಲಿ ಕಾಂಗ್ರೆಸ್ 40ರಿಂದ 45 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಲೇವಡಿ ಮಾಡಿದ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನದಾಸ್ ಅಗರವಾಲ್
ವಿಜಯಪುರ(ಏ.18): ಈಶ್ವರಪ್ಪನವರು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಅವರ ದುಃಖವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಈಶ್ವರಪ್ಪನವರಿಗೆ ಭಗವಂತ ಒಳ್ಳೆಯ ಬುದ್ಧಿ ಕೊಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನದಾಸ್ ಅಗರವಾಲ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಅವರ ಬಗ್ಗೆ ಹೆಚ್ಚಿಗೆ ಏನನ್ನೂ ಮಾತನಾಡಲು ಇಷ್ಟ ಪಡಲ್ಲ. ಅವರ ಬಗ್ಗೆ ನನಗೆ ದುಃಖವಿದೆ ಎಂದಷ್ಟೇ ಹೇಳಿದರು.
ಈಶ್ವರಪ್ಪ ಎಂಬ ವ್ಯಕ್ತಿ ನನಗೆ ಗೊತ್ತಿಲ್ಲ: ರಾಧಾಮೋಹನ್ ಅಗರವಾಲ್
ಕರ್ನಾಟಕದಲ್ಲಿ 28ಕ್ಕೆ 28 ಸೀಟುಗಳನ್ನೂ ಗೆಲ್ಲುತ್ತೇವೆ. ಕಾಂಗ್ರೆಸ್ ಬಳಿ ಖರ್ಚು ಮಾಡಲು ಸಾಕಷ್ಟು ಹಣವಿದೆ. ಅವರು ಈ ಬಾರಿ ₹500 ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡಬಹುದು. ಆದರೂ, ಸೋಲು ಅನುಭವಿಸಲಿದ್ದಾರೆ. ಕಾಂಗ್ರೆಸ್ ಮೇಲೆ ಜನತೆಗೆ ಭರವಸೆಯೇ ಇಲ್ಲದ ಕಾರಣ ಇಡಿ ದೇಶದಲ್ಲಿ ಕಾಂಗ್ರೆಸ್ 40ರಿಂದ 45 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಲೇವಡಿ ಮಾಡಿದರು.