Latest Videos

ಸ್ವಸಾಮರ್ಥ್ಯದಿಂದ ವಿಜಯೇಂಗೆ ರಾಜ್ಯಾಧ್ಯಕ್ಷ ಹುದ್ದೆ: ಜೆ.ಪಿ.ನಡ್ಡಾ

By Kannadaprabha NewsFirst Published Nov 16, 2023, 4:11 AM IST
Highlights

ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದ ಮೂಲಕ ಈ ನಾಯಕತ್ವವನ್ನು ಗಳಿಸಿದ್ದಾರೆ ಎನ್ನುವುದೇ ಅದರ ಮೊದಲ ಸಂದೇಶ. ಪಕ್ಷ ಸಂಘಟನೆಗೆ ಸಾಕಷ್ಟು ಸಮಯವನ್ನು ಮೀಸಲಿಟ್ಟಿದ್ದಲ್ಲದೆ, ಅವರ ಕಾರ್ಯನಿರ್ವಹಣೆಯಿಂದ ಬಿಜೆಪಿಗೆ ಲಾಭವಾಗಿದೆ. ಯುವ ನಾಯಕರಾಗಿರುವ ವಿಜಯೇಂದ್ರ ಅವರ ನೇಮಕವು ಬಿಜೆಪಿಯು ಶ್ರಮಶೀಲ ಯುವಶಕ್ತಿಯನ್ನು ಗೌರವಿಸುತ್ತದೆ ಮತ್ತು ಪ್ರೋತ್ಸಾಹಿಸುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ 

ಬೆಂಗಳೂರು(ನ.16):  ಬಿ.ವೈ.ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದಿಂದಾಗಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರು ಪಕ್ಷದ ಆಸ್ತಿ ಎನ್ನುವುದನ್ನು ಅವರು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

‘ದೈನಿಕ್ ಜಾಗರಣ್’ ಹಿಂದಿ ದಿನಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುತ್ರ ವಿಜಯೇಂದ್ರ ನೇಮಕದ ಹಿಂದೆ ಯಾವ ಸಂದೇಶ ಅಡಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದ ಮೂಲಕ ಈ ನಾಯಕತ್ವವನ್ನು ಗಳಿಸಿದ್ದಾರೆ ಎನ್ನುವುದೇ ಅದರ ಮೊದಲ ಸಂದೇಶ. ಪಕ್ಷ ಸಂಘಟನೆಗೆ ಸಾಕಷ್ಟು ಸಮಯವನ್ನು ಮೀಸಲಿಟ್ಟಿದ್ದಲ್ಲದೆ, ಅವರ ಕಾರ್ಯನಿರ್ವಹಣೆಯಿಂದ ಬಿಜೆಪಿಗೆ ಲಾಭವಾಗಿದೆ. ಯುವ ನಾಯಕರಾಗಿರುವ ವಿಜಯೇಂದ್ರ ಅವರ ನೇಮಕವು ಬಿಜೆಪಿಯು ಶ್ರಮಶೀಲ ಯುವಶಕ್ತಿಯನ್ನು ಗೌರವಿಸುತ್ತದೆ ಮತ್ತು ಪ್ರೋತ್ಸಾಹಿಸುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ತಿಳಿಸಿದ್ದಾರೆ.

ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

ನಾವು ಯಾವಾಗಲೂ ಧನಾತ್ಮಕ ಬದಲಾವಣೆ ಮತ್ತು ಸುಧಾರಣೆಯನ್ನು ಪ್ರತಿಪಾದಿಸಿದ್ದೇವೆ. ಈ ನೇಮಕಾತಿಯು ಸಕಾರಾತ್ಮಕ ಬೆಳವಣಿಗೆಗಳನ್ನು ಉತ್ತೇಜಿಸುವ ನಮ್ಮ ಬದ್ಧತೆಯನ್ನು ಸೂಚಿಸುತ್ತದೆ ಮತ್ತು ನೀವು ಪಕ್ಷದ ಕರ್ನಾಟಕ ಘಟಕದಲ್ಲಿ ಗಮನಾರ್ಹ ಬದಲಾವಣೆಗಳನ್ನು ನಿರೀಕ್ಷಿಸಬಹುದು ಎಂದೂ ನಡ್ಡಾ ಹೇಳಿದ್ದಾರೆ.

click me!