
ಬೆಂಗಳೂರು(ಮಾ.17): ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬಳ್ಳಾರಿ ಜಿಲ್ಲೆಯ ತೋರಣಗಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವ ನಡ್ಡಾ ಅವರು ಮಧ್ಯಾಹ್ನ 3ಗಂಟೆಯಿಂದ ಚಳ್ಳಕೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.20ಕ್ಕೆ ಮೊಳಕಾಲ್ಮೂರಿನಲ್ಲಿ ಬೈಕ್ ರಾರಯಲಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರದಂದು ಬೆಳಗ್ಗೆ 11ಗಂಟೆಯಿಂದ ತಿಪಟೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಚಿಕ್ಕನಾಯಕನಹಳ್ಳಿಯಲ್ಲಿ ರೋಡ್ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು: ಜೆ.ಪಿ.ನಡ್ಡಾ ಟೀಕಾ ಪ್ರಹಾರ
ಚುನಾವಣಾ ಪ್ರಚಾರ ಸಮಿತಿ ಸಭೆ:
ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸುವ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಪಕ್ಷದ ಚುನಾವಣಾ ಪ್ರಚಾರ ಸಮಿತಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಾತ್ರಿ ಭೋಜನ ಸ್ವೀಕರಿಸಿ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.