
ಮಂಗಳೂರು(ಡಿ.27): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಬಿಜೆಪಿ ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ ನ್ಯಾಯಾಂಗ ತನಿಖೆಗೆ ಮನವಿ ಮಾಡಿದೆ. ಹೀಗಾಗಿ ಸರ್ಕಾರದ ನಡೆ ನೋಡಿಕೊಂಡು ಬಿಜೆಪಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಎರಡು ಬಣಗಳು ಪ್ರತ್ಯೇಕವಾಗಿ ವಕ್ಫ್ ಹೋರಾಟ ಕೈಗೊತ್ತಿಕೊಳ್ಳುವ ಬಗ್ಗೆ ಸಭೆ ನಡೆಸಿರುವ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವನ್ನು ಕೆಲವೇ ದಿನಗಳಲ್ಲಿ ವರಿಷ್ಠರು ಬಗೆಹರಿಸುತ್ತಾರೆ. ಮುಂದೆ ಎಲ್ಲವೂ ಸರಿಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಸಕುಟುಂಬ ಸಮೇತ ಉಡುಪಿ, ಕೊಲ್ಲೂರಿಗೆ ಭೇಟಿ ನೀಡಿದ ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್!
ಗಾಂಧಿ ವಿಚಾರಕ್ಕೂ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೂ ಯಾವುದೇ ಸಂಬಂಧವೇ ಇಲ್ಲ. ಕಾಂಗ್ರೆಸ್ ತನ್ನ ಅಸ್ತಿತ್ವಕ್ಕಾಗಿ ಅಧಿವೇಶನ ನಡೆಸುತ್ತಿದೆ ಎಂದು ಅವರು ಆರೋಪಿಸಿದರು. ಮಹಾತ್ಮಾ ಗಾಂಧಿ ಅಸಲಿ, ಈಗಿನವರು ನಕಲಿ ವಿಚಾರವಾದಿಗಳು, ಆಗಿನವರು ಅಸಲಿ ವಿಚಾರವಾದಿಗಳು. ಇದರ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ಗೆ ನೈತಿಕತೆ ಇಲ್ಲ. ಅಹಿಂಸೆ, ಸ್ವದೇಶಿ, ಗೋಹತ್ಯೆ ನಿಷೇಧ, ಸ್ವಚ್ಛಭಾರತ ಮುಂತಾದ ಗಾಂಧಿ ವಿಚಾರಗಳನ್ನು ಗಾಳಿಗೆ ತೂರಿದ ಕಾಂಗ್ರೆಸ್‌ಗೆ ಅವುಗಳ ಬಗ್ಗೆ ಚರ್ಚಿಸಲು ನೈತಿಕತೆ ಇಲ್ಲ. ಬೆಳಗಾವಿಯ ಆಗಿನ ಕಾಂಗ್ರೆಸ್ ಅಧಿವೇಶನಕ್ಕೆ ಕಾಂಗ್ರೆಸೇತರರೂ ಆಗಮಿಸಿದ್ದರು. ಅದು ಕಾಂಗ್ರೆಸ್ ಪಕ್ಷದ ಸ್ವತ್ತಲ್ಲದ ಕಾರಣ ಈ ಬಗ್ಗೆ ಸರ್ವಪಕ್ಷಗಳ ಸಭೆ ಕರೆದು ಚರ್ಚೆ ನಡೆಸಬೇಕಿತ್ತು. ಅದು ಬಿಟ್ಟು ಕಾಂಗ್ರೆಸ್ ಶತಮಾನೋತ್ಸವ ಸಂಭ್ರಮ ಎಂದು ಹೇಳುತ್ತಿರುವುದು ಸರಿಯಲ್ಲ ಎಂದರು.
ಪ್ರಿಯಾಂಕ್ ಖರ್ಗೆ ರಾಜಿನಾಮೆ ನೀಡಲಿ:
1 ಕೋಟಿ ರು. ಮೊತ್ತಕ್ಕೆ ಬೇಡಿಕೆ ಇರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಅಪರಾವತಾರ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕು. ಹಾಗಾದಾಗ ಮಾತ್ರ ಗಾಂಧಿ ಚಿಂತನೆಯ ಕಾಂಗ್ರೆಸ್ ಅಧಿವೇಶನಕ್ಕೆ ಅರ್ಥ ಬರುತ್ತದೆ ಎಂದರು. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮುಖಂಡರಾದ ಸತೀಶ್, ಮಹೇಶ್ ಜೋಗಿ, ರಾಜೇಶ್ ಕೊಟ್ಟಾರಿ, ವಸಂತ್ ಜೆ.ಪೂಜಾರಿ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.