ಬಜೆಟ್‌ ಬಗ್ಗೆ ಬಿಜೆಪಿಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಶಾಸಕ ಲಕ್ಷ್ಮಣ ಸವದಿ

By Kannadaprabha News  |  First Published Jul 9, 2023, 8:35 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ರೀತಿಯಲ್ಲಿ ಬಜೆಟ್‌ ಮಂಡನೆ ಮಾಡಿದ್ದಾರೆ. ಅಲ್ಲದೆ ಗ್ಯಾರಂಟಿ ಯೋಜನೆಗಳನ್ನ ಹಂತ ಹಂತವಾಗಿ ಅನುಷ್ಠಾನ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ವಿನಾಕಾರಣ ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ತಾವು ಮಾಡಿದ ಸ್ವಯಂ ಅಪರಾಧಗಳಿಂದಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ: ಲಕ್ಷ್ಮಣ ಸವದಿ 


ಅಥಣಿ(ಜು.09): ರಾಜ್ಯದ ಬಿಜೆಪಿ ನಾಯಕರಲ್ಲಿ ಒಗ್ಗಟ್ಟಿನ ಕೊರತೆ ಇದೆ. ಪ್ರತಿಪಕ್ಷದ ನಾಯಕರನ್ನ ಆಯ್ಕೆ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮತ್ತು ಬಜೆಟ್‌ ವಿಚಾರವಾಗಿ ಮಾತನಾಡುವ ನೈತಿಕ ಹಕ್ಕು ಅವರಿಗಿಲ್ಲ ಎಂದು ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ರೀತಿಯಲ್ಲಿ ಬಜೆಟ್‌ ಮಂಡನೆ ಮಾಡಿದ್ದಾರೆ. ಅಲ್ಲದೆ ಗ್ಯಾರಂಟಿ ಯೋಜನೆಗಳನ್ನ ಹಂತ ಹಂತವಾಗಿ ಅನುಷ್ಠಾನ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ವಿನಾಕಾರಣ ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ತಾವು ಮಾಡಿದ ಸ್ವಯಂ ಅಪರಾಧಗಳಿಂದಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ. ತಾವು ಮೊದಲು ಒಗ್ಗಟ್ಟಾಗಿ ಪ್ರತಿಪಕ್ಷದ ನಾಯಕನನ್ನ ಆಯ್ಕೆ ಮಾಡಲಿ, ಆಮೇಲೆ ಸರ್ಕಾರದ ವಿರುದ್ಧ ಟೀಕೆ ಮಾಡಲಿ. ರಾಜ್ಯದಲ್ಲಿ ಸರ್ಕಾರ ರಚನೆಯಾದ ನಂತರ ಮುಖ್ಯಮಂತ್ರಿಗಳ ಆಯ್ಕೆ ವಿಚಾರದಲ್ಲಿ ಸ್ವಲ್ಪ ತಡವಾದಾಗ ಟೀಕೆ ಮಾಡುತ್ತಿದ್ದ ಬಿಜೆಪಿ ನಾಯಕರು ಇಂದು ತಮ್ಮ ಆತ್ಮವಲೋಕನ ಮಾಡಿಕೊಳ್ಳಬೇಕು. ಮೊದಲು ಪ್ರತಿಪಕ್ಷದ ನಾಯಕನನ್ನ ಆಯ್ಕೆ ಮಾಡಿಕೊಳ್ಳಿ, ಸದನದಲ್ಲಿ ರಚನಾತ್ಮಕ ಮತ್ತು ಪ್ರಗತಿಪರ ವಾದಗಳನ್ನು ಮಂಡಿಸಿ, ಅದನ್ನು ಬಿಟ್ಟು ರಾಜಕೀಯ ಉದ್ದೇಶಕ್ಕಾಗಿ ಮಾಡುವ ವಾದ ಅನಾವಶ್ಯಕ ಎಂದು ಬಿಜೆಪಿ ನಾಯಕರ ವಿರುದ್ಧ ಚಾಟಿ ಬೀಸಿದರು.

Latest Videos

undefined

Karnataka Budget 2023: ಆಶಾದಾಯಕ, ಜನಪರ, ಜನಸ್ನೇಹಿ ಬಜೆಟ್‌: ಸತೀಶ್‌ ಜಾರಕಿಹೊಳಿ

ಸರ್ವರಿಗೂ ಸಮಬಾಳು ಸಮಪಾಲು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‌ ಎಲ್ಲ ವರ್ಗದ ಜನರಿಗೂ ನ್ಯಾಯ ಒದಗಿಸಿದ್ದಾರೆ. ಬಡವರು, ಮಧ್ಯಮ ಹಾಗೂ ರೈತಾಪಿ ಜನರಿಗೆ ವಿಶೇಷ ಯೋಜನೆಗಳನ್ನು ಒದಗಿಸುವ ಮೂಲಕ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ನಿಟ್ಟಿನಲ್ಲಿ ಬಜೆಟ್‌ ಮಂಡಿಸಿದ್ದಾರೆ. ಸರ್ವರ ಹಿತ ಬಯಸುವ ಈ ಬಜೆಟ್‌ನಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದ ಸಾಲ ಸೌಲಭ್ಯವನ್ನು ಹೆಚ್ಚಿಸಿದ್ದಾರೆ. ಚಿಕ್ಕ, ಮಧ್ಯಮ ಮತ್ತು ದೊಡ್ಡ ಹಿಡುವಳಿ ರೈತರು ಗರಿಷ್ಠ .10 ಲಕ್ಷ ಪಡೆದುಕೊಳ್ಳುತ್ತಿದ್ದ ಸಾಲ ಸೌಲಭ್ಯವನ್ನು .15 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ 35 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ. ಈ ಸಾಲು ಸೌಲಭ್ಯಕ್ಕಾಗಿ ಸರ್ಕಾರ .30 ಸಾವಿರ ಕೋಟಿ ಬೆಳೆ ಸಾಲ ನೀಡುವ ಗುರಿ ಹೊಂದಿದೆ ಅಂತ ಅಥಣಿ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.  

click me!