ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಕ್ಷೇತ್ರದ ಜನತೆ ಸಹ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ.
ಬೆಂಗಳೂರು (ನ.24): ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಕ್ಷೇತ್ರದ ಜನತೆ ಸಹ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಕ್ಕೆ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು. ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ.
ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋಲನುಭವಿಸಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂದು ಹೇಳಿದರು. ಸಂಡೂರು ಕ್ಷೇತ್ರದಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋಲನುಭವಿಸಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು.
undefined
ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ. ಅಧಿಕಾರಿಗಳು, ಗುತ್ತಿಗೆದಾರರು ಸರ್ಕಾರದ ಪರವಾಗಿ ಕೆಲಸ ಮಾಡಿದ್ದಾರೆ. ಅಧಿಕಾರವಿದ್ದಾಗ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಮತ ಹಾಕುತ್ತಾರೆ ಎಂದು ತಿಳಿಸಿದರು. ಈ ಫಲಿತಾಂಶದ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹಿಂಜರಿಯಬೇಕಿಲ್ಲ.
ಜನವರಿಯೊಳಗೆ ಕಾಂಗ್ರೆಸ್ ಸರ್ಕಾರ ಪತನ: ಎಚ್.ಡಿ.ದೇವೇಗೌಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಪಕ್ಷ ಗೆಲ್ಲಲಿದೆ. ಕಾಂಗ್ರೆಸ್‌ನ ಪಾಪದ ಕೊಡ ಬಹುತೇಕ ತುಂಬಿದೆ. ಪೂರ್ತಿ ತುಂಬಿದ ಬಳಿಕ ಪಕ್ಷ ಅವನತಿಗೆ ಹೋಗಲಿದೆ. ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಇನ್ನಷ್ಟು ಬಯಲಿಗೆಳೆಯುವ ಕೆಲಸವನ್ನು ಬಿಜೆಪಿ ಮಾಡಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿಕೊಂಡು ಗೆದ್ದಿದೆ. ಇದು ಸಾಮಾನ್ಯವಾದ ಫಲಿತಾಂಶವಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಬೀಗಬೇಕಿಲ್ಲ. ಇದರಲ್ಲಿ ಚಮತ್ಕಾರವೇನೂ ಇಲ್ಲ ಎಂದು ಟೀಕಿಸಿದರು.