ಕಳ್ಳನಿಗೆ ಪಿಳ್ಳೆನೆವ ಎಂಬಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾಗಿರುವ ಶಕ್ತಿ ಯೋಜನೆ ರದ್ದುಪಡಿಸಲು ಕಾರಣ ನೀಡುತ್ತಿದೆ ಎಂದು ವಿಧಾನ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.
ಬೆಂಗಳೂರು (ನ.02): ಕಳ್ಳನಿಗೆ ಪಿಳ್ಳೆನೆವ ಎಂಬಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾಗಿರುವ ಶಕ್ತಿ ಯೋಜನೆ ರದ್ದುಪಡಿಸಲು ಕಾರಣ ನೀಡುತ್ತಿದೆ ಎಂದು ವಿಧಾನ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಇರಲ್ಲ ಎಂದು ನಾವು ಹೇಳಿದ್ದೆವು. ಈಗ ಅದರ ಮೊದಲ ಹೆಜ್ಜೆಯನ್ನು ಸರ್ಕಾರ ಇರಿಸಿದೆ ಎಂದೂ ಅವರು ತಿಳಿಸಿದ್ದಾರೆ. ಗುರುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಸರ್ಕಾರ ತುಘಲಕ್ ಆಡಳಿತ ನೀಡಿ ನಗೆಪಾಟಲಿಗೀಡಾಗಿದೆ. ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಯೋಜನೆಗಳು ಟುಸ್ ಪಟಾಕಿಯಾಗಲಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಹಿಳೆಯರು ಫೋನ್ ಕರೆ ಮಾಡಿ ಯೋಜನೆ ಬೇಡವೆಂದು ತಿಳಿಸಿದ್ದಾರಂತೆ.
ಯೋಜನೆ ರದ್ದುಪಡಿಸಲು ಈ ರೀತಿ ಕಾರಣ ಹೇಳುತ್ತಿದ್ದಾರೆ ಎಂದರು. ಇದರ ಜೊತೆಗೆ ಪಡಿತರ ಚೀಟಿ ರದ್ದು ಮಾಡಲು ಎಲ್ಲ ಬಗೆಯ ಷರತ್ತುಗಳನ್ನು ವಿಧಿಸುತ್ತಿದ್ದಾರೆ. ಅಧಿಕಾರಕ್ಕೆ ಬಂದ ನಂತರ ಏನು ಬೇಕಾದರೂ ಮಾಡಬಹುದು ಎಂಬಂತೆ ವರ್ತಿಸುತ್ತಿದ್ದಾರೆ. ಸಾರಿಗೆ ಇಲಾಖೆ ನಷ್ಟದಲ್ಲಿದೆ. ಸರ್ಕಾರವೇ ಸಾರಿಗೆ ಇಲಾಖೆಗೆ ಕೋಟ್ಯಂತರ ರೂಪಾಯಿ ಹಣ ನೀಡಬೇಕಿದೆ. ಸರ್ಕಾರದ ಖಜಾನೆ ಪೂರ್ಣ ಖಾಲಿಯಾಗಿದೆ. ಇಷ್ಟಾದರೂ ಯಾವ ಮುಖ ಇಟ್ಟುಕೊಂಡು ಉಪಚುನಾವಣೆ ಎದುರಿಸಲು ಮುಂದಾಗಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಲೇವಡಿ ಮಾಡಿದರು.
undefined
ಕಾಂಗ್ರೆಸ್ ಸೇರಿ ಯೋಗೇಶ್ವರ್ ಭವಿಷ್ಯ ಹಾಳು: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರುವ ಮುಖಾಂತರ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ಗೆಲ್ಲಲು ಸಾಧ್ಯವೇ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರು ಅವರ ಕಾರ್ಯಕರ್ತರನ್ನು ಒಪ್ಪಿಸಿ ಯೋಗೇಶ್ವರ್‌ಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನೀಡಲು ತಯಾರಾಗಿದ್ದರು. ನಾನು ಸೇರಿ ಬಿಜೆಪಿಯ ಎಲ್ಲಾ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್ ಸಿಗಲು ಎಲ್ಲಾ ಪ್ರಯತ್ನ ಮಾಡಿದ್ದೆವು. ಆದರೆ, ಅವರು ಪಕ್ಷ ತೊರೆದು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಅವರು ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಲೀಡ್ ಸಿಗುವುದಿಲ್ಲ ಎಂದರು.
ಕಾಂಗ್ರೆಸ್‌ನ ಚುನಾವಣಾ ವಾಗ್ದಾನ ಪಂಚ ಗ್ಯಾರಂಟಿಗಳು ನಿಲ್ಲಲ್ಲ: ಡಿಸಿಎಂ ಡಿಕೆಶಿ ಲೇಖನ
ಕಾಂಗ್ರೆಸ್‌ನ ಕೊನೇ ಸಾಲಲ್ಲಿ ಸಿಪಿವೈ: ಎನ್‌ಡಿಎ ಮೈತ್ರಿಯಲ್ಲಿ ಯೋಗೇಶ್ವರ್‌ಗೆ ಹಿರಿತನವಿತ್ತು. ಈಗ ಕಾಂಗ್ರೆಸ್ ಸೇರಿ ಕೊನೆ ಸಾಲಿನಲ್ಲಿ ನಿಂತಿದ್ದಾರೆ. ಅವರು ಕಾಂಗ್ರೆಸ್ ಸೇರಿದಾಕ್ಷಣ ಕೂಡಲೇ ಮಣೆ ಹಾಕಿ ಕೂರಿಸುವುದಿಲ್ಲ. ಡಿ.ಕೆ.ಶಿವಕುಮಾರ್ ಅವರು ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆಸಿಕೊಂಡು ಕೆಡಿಸಿದ್ದಾರೆ. ಇನ್ನು ಮುಂದೆ ಅವರನ್ನು ಹೇಗೆ ತುಳಿಯಬೇಕು ಎಂದು ಅವರೇ ಯೋಜನೆ ರೂಪಿಸುತ್ತಾರೆ. ಯೋಗೇಶ್ವರ್‌ಗೆ ಕಾಂಗ್ರೆಸ್‌ನಲ್ಲಿ ಮುಂದೆ ಬರಲು ಯಾರೂ ಬಿಡುವುದಿಲ್ಲ ಎಂದು ಹೇಳಿದರು.