ಬಿಜೆಪಿ ಪಕ್ಷ ಸಂಘಟಿಸುವುದರಲ್ಲಿ ಬಳ್ಳಾರಿ ವಿಭಾಗದಲ್ಲಿ ಮಸ್ಕಿ ಕ್ಷೇತ್ರ ಮುಂಚೂಣಿ!

Published : Mar 03, 2023, 08:15 AM IST
ಬಿಜೆಪಿ ಪಕ್ಷ ಸಂಘಟಿಸುವುದರಲ್ಲಿ ಬಳ್ಳಾರಿ ವಿಭಾಗದಲ್ಲಿ ಮಸ್ಕಿ ಕ್ಷೇತ್ರ ಮುಂಚೂಣಿ!

ಸಾರಾಂಶ

ಬಿಜೆಪಿ ಪಕ್ಷ ಸಂಘಟನೆಯಲ್ಲಿ ಬಳ್ಳಾರಿ ವಿಭಾಗ ಮಟ್ಟದಲ್ಲಿ ಮಸ್ಕಿ ಕ್ಷೇತ್ರದಲ್ಲಿ ಮುಂಚೂಣಿ ಸ್ಥಾನ ಪಡೆದುಕೊಂಡಿದೆ ಎನ್ನಲಾಗುತ್ತಿದೆ. ಇದು ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸಿದೆ.

ಮಸ್ಕಿ (ಮಾ.3) : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಪಕ್ಷದ ವತಿಯಿಂದ ವಿಜಯ ಸಂಕಲ್ಪ ಯಾತ್ರೆ ಸೇರಿದಂತೆ ವಿವಿಧ ಕಾರ್ಯಕ್ರಗಳನ್ನು ಆಯೋಜನೆ ಮಾಡಿ ರಾಜ್ಯಾದ್ಯಂತ ಬಿಡುವಿಲ್ಲದ ಪ್ರವಾಸ ನಡೆಸುತ್ತಿದ್ದಾರೆ. ಆದರೆ, ಪಕ್ಷ ಸಂಘಟನೆಯಲ್ಲಿ ಬಳ್ಳಾರಿ ವಿಭಾಗ ಮಟ್ಟದಲ್ಲಿ ಮಸ್ಕಿ ಕ್ಷೇತ್ರದಲ್ಲಿ ಮುಂಚೂಣಿ ಸ್ಥಾನ ಪಡೆದುಕೊಂಡಿದೆ ಎನ್ನಲಾಗುತ್ತಿದೆ. ಇದು ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸಿದೆ.

ವಿಭಾಗ ಮಟ್ಟದಲ್ಲಿ ಮುಂಚೂಣಿ:

ರಾಜ್ಯ ಬಿಜೆಪಿ ಘಟಕದಿಂದ ಪಕ್ಷ ಸಂಘಟನೆ ಬೂತ್‌ ಮಟ್ಟದಿಂದ ಬಲಪಡಿಸಲು ಕಾಲಕಾಲಕ್ಕೆ ನೀಡುವ ಜವಬ್ದಾರಿಯನ್ನು ನಿಭಾಯಿಸಿ ಮಸ್ಕಿ ಕ್ಷೇತ್ರದಲ್ಲಿ ಬೂತ್‌ ಪೇಜ್‌, ವಿಜಯ ಸಂಕಲ್ಪ ಅಭಿಯಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಕಾರ್ಯಕರ್ತರಿಗೆ ತಲುಪಿಸುವಲ್ಲಿ ಹೆಚ್ಚಿನ ಶ್ರಮ ವಹಿಸಿ ಪಕ್ಷಕ್ಕೆ ನೂತನ ಸದಸ್ಯರನ್ನು ನೊಂದಣಿ ಮಾಡಿಸಲಾಗಿದೆ. ಇದರಲ್ಲಿ ಬಳ್ಳಾರಿ ವಿಭಾಗ ಮಟ್ಟದಲ್ಲಿಯೇ ಮುಂಚೂಣಿಯಲಿದೆ ಎಂದು ಬಿಜೆಪಿಯ ಮೂಲಗಳಿಂದ ತಿಳಿದು ಬಂದಿದೆ.

ಹೋಳಿ ಹಬ್ಬಕ್ಕೂ ಮೊದಲೇ ರಾಯಚೂರು ಜಿಲ್ಲೆಯಲ್ಲಿ ರಾಜಕೀಯ ರಂಗಿನಾಟ

ಬಳ್ಳಾರಿ ವಿಭಾಗ ಮಟ್ಟದಲ್ಲಿ ಬಿಜೆಪಿ ಪಕ್ಷದ ಸಂಘಟನೆಯನ್ನು ಬಲಿಷ್ಠಗೊಳಿಸಲಾಗಿದೆ. ಮಸ್ಕಿ ಕ್ಷೇತ್ರದಲ್ಲಿನ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಪಕ್ಷವನ್ನು ಬೂತ್‌ ಮಟ್ಟದಿಂದ ಗಟ್ಟಿಗೊಳಿಸಿದ್ದಾರೆ. ಮುಂಬರುವ ವಿಧಾಸಭೆ ಚುನಾವಣೆಯಲ್ಲಿ ಬಳ್ಳಾರಿ ವಿಭಾಗದಲ್ಲಿ ಅತಿ ಹೆಚ್ಚಿನ ಕ್ಷೇತ್ರಗಳನ್ನು ಬಿಜೆಪಿ ಪಕ್ಷ ಗೆಲ್ಲಲಿದೆ.

-ಚಂದ್ರಶೇಖರ್‌ ಪಾಟೀಲ್‌ ಬಿಜೆಪಿ ಪಕ್ಷದ ಬಳ್ಳಾರಿ ವಿಭಾಗ ಉಸ್ತುವಾರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?