ಮುಡಾ ಹಗರಣ: ಸಿದ್ದು ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲ್ಯಾನ್‌..!

By Kannadaprabha News  |  First Published Jul 5, 2024, 11:30 AM IST

ಮುಡಾ ಹಗರಣ ಸಂಬಂಧ ರಾಜೀನಾಮೆ ಅಥವಾ ಭಂಡತನದಿಂದ ಸಮರ್ಥನೆ ಮಾಡುವುದಷ್ಟೇ ಮುಖ್ಯಮಂತ್ರಿಗಳ ಮುಂದಿರುವ ಆಯ್ಕೆ. ಸಾರ್ವಜನಿಕವಾಗಿ ಬೆತ್ತಲಾದರೂ ಅದಕ್ಕೂ ಸಮರ್ಥನೆ ಕೊಡುವುದಾದರೆ ಇನ್ನೇನು ಹೇಳಲು ಸಾಧ್ಯ ಎಂದು ಹೇಳಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ 


ಬೆಂಗಳೂರು(ಜು.05):  ಮೈಸೂರಿನ ಮುಡಾ ಹಗರಣ ಸೇರಿದಂತೆ ವಾಲ್ಮೀಕಿ ನಿಗಮದ ಹಗರಣ, ಬೆಲೆ ಏರಿಕೆ ಬಗ್ಗೆ ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷ ಬಿಜೆಪಿ ತೀರ್ಮಾನಿಸಿದೆ. ಗುರುವಾರ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಿಣಿಯ ಬಳಿಕ ನಡೆದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಮುಡಾ ಹಗರಣ ಸಂಬಂಧ ರಾಜೀನಾಮೆ ಅಥವಾ ಭಂಡತನದಿಂದ ಸಮರ್ಥನೆ ಮಾಡುವುದಷ್ಟೇ ಮುಖ್ಯಮಂ ತ್ರಿಗಳ ಮುಂದಿರುವ ಆಯ್ಕೆ. ಸಾರ್ವಜನಿಕವಾಗಿ ಬೆತ್ತಲಾ ದರೂ ಅದಕ್ಕೂ ಸಮರ್ಥನೆ ಕೊಡುವುದಾದರೆ ಇನ್ನೇನು ಹೇಳಲು ಸಾಧ್ಯ ಎಂದು ಹೇಳಿದರು.

Tap to resize

Latest Videos

ಪಾರ್ವತಿ ಸಿದ್ದರಾಮಯ್ಯಗೆ 14 ಸೈಟು ಕೊಟ್ಟ ಮೂಡಾ ನಿಯಮಗಳ ಮಾಹಿತಿ ಬಿಚ್ಚಿಟ್ಟ ಸಿಎಂ ಆಪ್ತ ಎಂ. ಲಕ್ಷ್ಮಣ್!

224 ಕ್ಷೇತ್ರಗಳಲ್ಲಿ ಸಂಘಟನೆ ಬಲಪಡಿಸುವುದು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಕೆಳಹಂತದ ಸಿದ್ಧತೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಗಾಗಿ ಬಿಜೆಪಿ ತಂಡ ರಚನೆ

ಬೆಂಗಳೂರು: ಮುಂಬರುವ ಮೂರು ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆ ಸಂಬಂಧ ಅಭ್ಯ ರ್ಥಿಗಳ ಆಯ್ಕೆಗೆ ಬಿಜೆಪಿಯು ತಂಡಗಳನ್ನು ರಚಿಸಿದೆ. ಗುರುವಾರ ನಡೆದ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ಕಮಿಟಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಚನ್ನಪಟ್ಟಣ ಕ್ಷೇತ್ರಕ್ಕೆ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಶಿಗ್ಗಾವಿ ಕ್ಷೇತ್ರಕ್ಕೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಡೂರು ಕ್ಷೇತ್ರಕ್ಕೆ ಶಾಸಕ ಸಿ.ಟಿ.ರವಿ, ಸಂಸದ ಗೋವಿಂದ ಕಾರಜೋಳ, ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ತಂಡಗಳನ್ನು ರಚಿಸಲಾಗಿದೆ.

click me!