ಧರ್ಮದ ಹೆಸರನಲ್ಲಿ ಬಿಜೆಪಿ ಸರ್ಕಾರ ರಾಜಕೀಯ: ಬಿ.ಕೆ. ಹರಿಪ್ರಸಾದ್‌

By Kannadaprabha News  |  First Published Feb 6, 2023, 11:28 AM IST

ಬಿಜೆಪಿ ಸರ್ಕಾರಕ್ಕೆ ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ. ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಉದ್ಯೋಗವಕಾಶ ನೀಡುತ್ತಿಲ್ಲ. ಕಾರ್ಮಿಕರ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕೇವಲ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಹೇಳಿದರು.


ಸುಳ್ಯ (ಫೆ.6) : ಬಿಜೆಪಿ ಸರ್ಕಾರಕ್ಕೆ ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ. ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಉದ್ಯೋಗವಕಾಶ ನೀಡುತ್ತಿಲ್ಲ. ಕಾರ್ಮಿಕರ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕೇವಲ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ಭಾನುವಾರ ಆರಂಭಗೊಂಡ ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೆಳ್ಳಾರೆ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

Tap to resize

Latest Videos

ಜನರು ಶಾಂತಿ,ನೆಮ್ಮದಿಯಿಂದ ಇರಲು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸನ್ನು ಗೆಲ್ಲಿಸಬೇಕು. ತಾರತಮ್ಯ ಮಾಡುವ ಸರ್ಕಾರವನ್ನು ಕಿತ್ತೊಗೆಯಬೇಕು. ಮಕ್ಕಳ ಭವಿಷ್ಯ ಉತ್ತಮವಾಗಬೇಕಾದರೆ ಬಿಜೆಪಿ ಆಡಳಿತದವರನ್ನು ಮನೆಗೆ ಕಳುಹಿಸಿ ಎಂದು ಅವರು ಹೇಳಿದರು.

ಫೆಬ್ರವರಿ ಕೊನೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಬಿ ಕೆ ಹರಿಪ್ರಸಾದ್

ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಮಾತನಾಡಿ ಯುವಶಕ್ತಿಗೆ ಉತ್ತೇಜನ ಕೊಡಬೇಕು. ಸಮಾಜದಲ್ಲಿ ಜನರು ನೆಮ್ಮದಿಯಿಂದ ಇಲ್ಲ ಈಗ ಹಲವಾರು ಸಮಸ್ಯೆಗಳಿಂದ ಜನರು ತೊಂದರೆಗೀಡಾಗಿದ್ದಾರೆ. ಬಿಜೆಪಿಯ ಪೊಳ್ಳು ಭರವಸೆಗಳು ಮಾತ್ರ. ಹಿಂದುತ್ವದ ಪ್ರಣಾಳಿಕೆ ಮಾಡಿ ಚುನಾವಣೆ ಗೆಲ್ಲುತ್ತಾರೆ. ಅಭಿವೃದ್ಧಿ ಇಲ್ಲ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಮಾತನಾಡಿ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡಿ ನೈತಿಕತೆ ಕಳೆದುಕೊಂಡಿದ್ದಾರೆ ನಾಲ್ಕು ವರ್ಷದಲ್ಲಿ ಭರವಸೆಗಳನ್ನು ಮಾತ್ರ ನೀಡಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಮಧು ಬಂಗಾರಪ್ಪ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ. ಹರೀಶ್‌ ಕುಮಾರ್‌, ಶಾಸಕ ಯು.ಟಿ. ಖಾದರ್‌, ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಿ.ಸಿ. ಜಯರಾಂ, ಪ್ರಧಾನ ಕಾರ್ಯದರ್ಶಿ ಪಿ.ಎಸ್‌. ಗಂಗಾಧರ್‌, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಹೇಮನಾಥ ಶೆಟ್ಟಿಕಾವು, ಎಂ.ಎಸ್‌. ಮಹಮ್ಮದ್‌, ಕಡಬ ಬ್ಲಾಕ್‌ ಅಧ್ಯಕ್ಷ ಸುಧೀರ್‌ ಶೆಟ್ಟಿ, ಕೆ.ಪಿ.ಸಿ.ಸಿ. ಮಾಜಿ ಸಂಯೋಜಕ ಪ್ರದೀಪ್‌ ರೈ, ಮಹಿಳಾ ಕಾಂಗ್ರೆಸ್‌ ಉಪಾಧ್ಯಕ್ಷೆ ಪ್ರವೀಣ ರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರಾಜೀವಿ ಆರ್‌. ರೈ, ಸರಸ್ವತಿ ಕಾಮತ್‌, ಚಂದ್ರಶೇಖರ ಕಾಮತ್‌, ಚಂದ್ರಲಿಂಗಂ, ರಾಜ್ಯ ವಕ್ತಾರ ಟಿ.ಎಂ. ಶಹೀದ್‌, ಎಸ್‌. ಸಂಶುದ್ದೀನ್‌, ಪೆರುವಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗನ್ನಾಥ ಪೂಜಾರಿ, ಕಲ್ಮಡ್ಕ ಗ್ರಾ.ಪಂ. ಅಧ್ಯಕ್ಷೆ ಹಾಜಿರಾ, ವಿಶ್ವನಾಥ ರೈ ಕಳಂಜ, ಶ್ಯಾಮಸುಂದರ ರೈ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಬಿ.ಕೆ.ಹರಿಪ್ರಸಾದ ಕೊತ್ವಾಲ ರಾಮಚಂದ್ರನ ಶಿಷ್ಯ; ಪ್ರತಿಪಕ್ಷ ನಾಯಕನ ಜನ್ಮ ಜಾಲಾಡಿದ ಸಚಿವ

ಅಶೋಕ್‌ ಚೂಂತಾರು, ಬಶೀರ್‌ ನೇಲ್ಯಮಜಲು, ದಿನೇಶ್‌ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಿ.ಸಿ. ಜಯರಾಮ, ಬೆಳ್ಳಾರೆ ಸಹಕಾರಿ ಸಂಘದ ಅಧ್ಯಕ್ಷ ಅನಿಲ್‌ ರೈ ಸ್ವಾಗತಿಸಿದರು. ಅಬ್ದುಲ್‌ ಗಫäರ್‌ ಕಲ್ಮಡ್ಕ ವಂದಿಸಿದರು.

click me!