ಕರ್ನಾಟಕದಲ್ಲಿ ಫೆ. 24 ರಿಂದ ಬಿಜೆಪಿ ಪ್ರಗತಿ ರಥಯಾತ್ರೆ

Published : Feb 22, 2023, 06:00 AM IST
ಕರ್ನಾಟಕದಲ್ಲಿ ಫೆ. 24 ರಿಂದ ಬಿಜೆಪಿ ಪ್ರಗತಿ ರಥಯಾತ್ರೆ

ಸಾರಾಂಶ

ಸರ್ಕಾರದ ಸಾಧನೆ ಪ್ರತಿ ಹಳ್ಳಿ, ಬೂತ್‌ಗೆ ತಲುಪಿಸುವ ಉದ್ದೇಶ, ಎಲ್‌ಇಡಿ ಸ್ಕ್ರೀನ್‌ ಇರುವ 135 ವಾಹನ ರಾಜ್ಯಾದ್ಯಂತ ಸಂಚಾರ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ 58000 ಬೂತ್‌ಗಳಲ್ಲಿ ಯಾತ್ರೆ ಸಂಚಾರ, ಸರ್ಕಾರದ ಸಾಧನೆಗಳ ವಿಡಿಯೋ ಪ್ರದರ್ಶನ, ಸಭೆ, ಭಾಷಣಕ್ಕೆ ಸಕಲ ವ್ಯವಸ್ಥೆ. 

ಬೆಂಗಳೂರು(ಫೆ.22):  ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳ ಸಾಧನೆಯನ್ನು ಪ್ರತಿ ಗ್ರಾಮ ಮತ್ತು ಬೂತ್‌ಗೆ ತಲುಪಿಸುವ ಉದ್ದೇಶದಿಂದ ಇದೇ ತಿಂಗಳ 24 ರಿಂದ (ಶುಕ್ರವಾರ) ‘ಪ್ರಗತಿ ರಥ’ಗಳು ರಾಜ್ಯಾದ್ಯಂತ ಸಂಚಾರ ಆರಂಭಿಸಲಿವೆ. ಪ್ರಗತಿ ರಥಕ್ಕಾಗಿ ಎಲ್‌ಇಡಿ ಸ್ಕ್ರೀನ್‌ ಇರುವ 135 ವಾಹನಗಳನ್ನು ಸಿದ್ಧಪಡಿಸಲಾಗಿದ್ದು, ಇವು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ 58 ಸಾವಿರಕ್ಕೂ ಹೆಚ್ಚು ಬೂತ್‌ಗಳಲ್ಲಿ ಸಂಚರಿಸಲಿವೆ. ರಥದ ಮೂಲಕ ಸಾಧನೆಗಳ ವಿಡಿಯೋ ಪ್ರದರ್ಶನ ನಡೆಯಲಿದೆ. ಕಾರ್ನರ್‌ ಮೀಟಿಂಗ್‌, ಭಾಷಣ ಮಾಡಲು ಮೈಕ್‌, ಸ್ಪೀಕರ್‌, ಲೈವ್‌ ಸ್ಟ್ರೀಮ್‌ ಮಾಡಲು ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

24ರಂದು ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಈ ಪ್ರಗತಿ ರಥಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್

ಪ್ರತಿ ಕಡೆ 10 ಸಾವಿರ ಜನರ ಸಲಹೆ ನಿರೀಕ್ಷೆ:

ಈ ರಥಗಳನ್ನು ಗಮನಿಸಲು ಜಿಪಿಎಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಜೆಪಿ ಬ್ರ್ಯಾಂಡಿಂಗ್‌ ಮೂಲಕ ರಥ ಸಂಚರಿಸಲಿದೆ. ಸಲಹಾ ಪೆಟ್ಟಿಗೆಯನ್ನೂ ಈ ರಥ ಒಳಗೊಂಡಿರುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 10 ಸಾವಿರ ಜನರ ಸಲಹೆ ನಿರೀಕ್ಷಿಸಲಾಗಿದೆ. ಒಟ್ಟು 22.40 ಲಕ್ಷ ಸಲಹೆಗಳ ನಿರೀಕ್ಷೆ ಇದೆ. ಕ್ಯೂ ಆರ್‌ ಕೋಡ್‌ ಕೂಡ ಇದೆ ಎಂದು ಈ ಪ್ರಗತಿ ರಥದ ರಾಜ್ಯ ಸಂಚಾಲಕ ಎಸ್‌.ವಿ.ರಾಘವೇಂದ್ರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಒಂದು ರಥವು ಕನಿಷ್ಠ 15 ದಿನಗಳ ಕಾಲ ಒಂದು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಲಿದೆ. ಕರಾವಳಿ ಮತ್ತಿತರ ಕಡೆ ದೂರದೂರದ ಪ್ರದೇಶಗಳನ್ನು ಭೇಟಿ ಮಾಡಲು ಪ್ರತಿ ಕ್ಷೇತ್ರಕ್ಕೆ ಒಂದು ರಥ ಇರಲಿದೆ. ಬೆಂಗಳೂರಿನಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಒಂದು ರಥ ನೀಡಲಾಗುತ್ತಿದೆ ಎಂದರು.

ಗಣಿನಾಡಿಗೆ ಅಮಿತ್‌ ಶಾ ಭೇಟಿ, ಸಂಡೂರೇ ಟಾರ್ಗೆಟ್‌ ಯಾಕೆ?

ಏನು ಪ್ರಚಾರ?:

33 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ನೀರು, ವಿದ್ಯುತ್‌, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರು., ಕಳಸಾ-ಬಂಡೂರಿ ಯೋಜನೆಗೆ ಹಣ, ಬೆಳಗಾವಿ-ಕಿತ್ತೂರು ರೈಲ್ವೆ ಕಾಮಗಾರಿ, ಬೆಂಗಳೂರು ಅಭಿವೃದ್ಧಿ ಸೇರಿ ವಿವಿಧ ಯೋಜನೆಗಳ ಕುರಿತು ತಿಳಿಸಲಿದ್ದೇವೆ. ಯುಪಿಎ ಸರ್ಕಾರ ಕೊಟ್ಟಹಣಕ್ಕಿಂತ 9 ಪಟ್ಟು ಹೆಚ್ಚು ಹಣವನ್ನು ರೈಲ್ವೆಗೆ ನೀಡಿದ್ದು, ಕೊಪ್ಪಳದಲ್ಲಿ ಕುಶಲಕರ್ಮಿಗಳಿಗೆ ನೆರವು, ನಾಲ್ಕು ಸಾವಿರ ಕಿ.ಮೀ ಹೆದ್ದಾರಿಗಳ ಅಭಿವೃದ್ಧಿ ಕುರಿತಂತೆ ವಿವರಗಳು ಇರಲಿವೆ ಎಂದು ವಿವರ ನೀಡಿದರು.

ಕಾರ್ಯಕ್ರಮದ ಸಹ ಸಂಚಾಲಕರನ್ನಾಗಿ ಮಂಗಳೂರಿನ ಮಾಜಿ ಮೇಯರ್‌ ಪ್ರೇಮಾನಂದ ಶೆಟ್ಟಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್‌ ಸದಸ್ಯ ಮತ್ತು ಬೆಂಗಳೂರು ವಿಭಾಗ ಪ್ರಭಾರಿ ಗೋಪಿನಾಥ ರೆಡ್ಡಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ