ಆರ್.ಆರ್.ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಕಂಡಿದೆ. ಇನ್ನು ಈ ಫಲಿತಾಂಶದ ಬಗ್ಗೆ ಬಿಜೆಪಿ ಸಾರಥಿ ಪ್ರತಿಕ್ರಿಯಿಸಿದ್ದು ಹೀಗೆ...!
ಮಂಗಳೂರು, (ನ.11): ವಿಪಕ್ಷ ನಾಯಕ ಸಿದ್ಧರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾಗುವ ಕನಸನ್ನು ಇನ್ನಾದರು ಬಿಡಬೇಕು. ಮುಂದಿನ ಹತ್ತು ವರ್ಷಗಳ ಕಾಲ ಆ ಕನಸನ್ನು ಬಿಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದಾರೆ.
2 ಉಪಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಇಂದು (ಬುಧವಾರ) ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಬಾದಾಮಿಯಲ್ಲೂ ಜನ ನಿಮ್ಮನ್ನು ತಿರಸ್ಕಾರ ಮಾಡಲಿದ್ದಾರೆ. ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ ಎನ್ನುವುದು ಮೊದಲು ಯೋಚನೆ ಮಾಡಿ ಎಂದು ಕಟೀಲ್ ಟೀಕಿಸಿದರು.
ನೆಲೆ ಇಲ್ಲದ ಶಿರಾದದಲ್ಲಿ ಒಂದೇ ಸಲ ಇಬ್ಬರು ಶಾಸಕರು: ಬಿಜೆಪಿ ಮತ್ತಷ್ಟು ಸ್ಟ್ರಾಂಗು
ಉಪ ಚುನಾವಣೆಯ ಫಲಿತಾಂಶದಿಂದ ಬಂಡೆ ಪುಡಿಯಾಗಿದೆ. ಕಾಂಗ್ರೆಸ್ ನ ಹುಲಿಯಾ ಗೂಡು ಸೇರಿದೆ. ಚುನಾವಣಾ ಪೂರ್ವದಲ್ಲಿ ಬಿಜೆಪಿ ಅಲೆ ಎಲ್ಲಿದೆ ಎಂದು ಸಿದ್ಧರಾಮಯ್ಯ ಕೇಳಿದ್ದರು. ಆದರೆ ಈಗ ಹುಲಿಯಾ ಗೂಡು ಸೇರಿದೆ ಅಂತಾ ಜನ ಹೇಳುತ್ತಿದ್ದಾರೆ ಲೇವಡಿ ಮಾಡಿದರು.
ಉಪಚುನಾವಣೆಯಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಕೆಲಸ ಮಾಡಿದೆ. ಶಿರಾದಲ್ಲಿ ಎಲ್ಲರ ಪರಿಶ್ರಮದಿಂದ ಬಿಜೆಪಿ ಗೆಲುವು ಸಾಧಿಸಿದೆ. ಆರ್ ಆರ್ ನಗರ ಶಿರಾದಲ್ಲಿ ಕಾಂಗ್ರೆಸ್ ಜಾತಿ ರಾಜಕೀಯ ಮಾಡಿದ್ದಾರೆ. ಆದರೆ ಜನ ಇದನ್ನೆಲ್ಕಾ ತಿರಸ್ಕಾರ ಮಾಡಿದ್ದಾರೆ ಎಂದರು.
ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಯಾಗಿಲ್ಲ, ಚುನಾವಣೆ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಆರೋಪ ಮಾಡಿದರು. ಆದರೆ ಕಾಂಗ್ರೆಸ್ ಭ್ರಷ್ಟಾಚಾರದ ಪಾರ್ಟಿ ಎಂದು ಸಾಬೀತಾಗಿದೆ ಎಂದು ಕಿಡಿಕಾರಿದರು.