ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿರುದ್ದ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಡಿ ಕೆ ಸುರೇಶ್ ಹೇಳಿಕೆಯನ್ನು ಖಂಡಿಸಿದರು.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಫೆ.05): ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿರುದ್ದ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಡಿ ಕೆ ಸುರೇಶ್ ಹೇಳಿಕೆಯನ್ನು ಖಂಡಿಸಿದರು. ಅಲ್ಲದೆ ಸಂಸದ ಡಿ ಕೆ ಸುರೇಶ್ ಭಾವಚಿತ್ರಕ್ಕೆ ಬೆಂಕಿ ಹಾಕಿ ಆಕ್ರೋಶ ಹೊರಹಾಕಿದರು.
ದೇಶವನ್ನು ವಿಭಜಿಸಿ ಮತ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳುವ ತಂತ್ರ: ಸ್ವಾತಂತ್ರ್ಯ ಸಿಕ್ಕ ದಿನದಿಂದಳು ಕಾಂಗ್ರೆಸ್ ಪಕ್ಷ ದೇಶವನ್ನು ವಿಭಜಿಸಿ ಮತ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳುವ ತಂತ್ರದಲ್ಲಿ ತೊಡಗಿದೆ. ಅದು ಈಗಲೂ ಮುಂದುವರಿದಿರುವುದಕ್ಕೆ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯೇ ಉದಾಹರಣೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಆರೋಪಿಸಿದರು.ಪ್ರತ್ಯೇಕ ರಾಷ್ಟ್ರದ ಕುರಿತು ಪ್ರಸ್ತಾಪಿಸಿರುವ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಖಂಡಿಸಿ ಇಂದು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಆಜಾದ್ ಪಾರ್ಕ್ ಸರ್ಕಲ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಇಂದು ದೇಶ ವಿಭಜನೆಗೆ ಹೊರಟಿರುವುದಲ್ಲ. ಸ್ವಾತಂತ್ರ್ಯ ಸಿಕ್ಕ ದಿನದಿಂದಲೂ ದೇಶವನ್ನು ವಿಭಜನೆಯತ್ತ ಕೊಂಡೊಯ್ಯುತ್ತಿದೆ. ಅಖಂಡ ಭಾರತದ ಕಲ್ಪನೆ ಎಂದಿಗೂ ಅವರ ಮಾತಿನಲ್ಲಿ ಇಲ್ಲ ಎಂದು ಹೇಳಿದರು.
ರಾಜ್ಯಗಳ ಶಕ್ತಿ ಕುಂದಿಸುವ ಯತ್ನ ಕೇಂದ್ರ ಸರ್ಕಾರದಿಂದ ಆಗುತ್ತಿದೆ: ಸಚಿವ ಕೃಷ್ಣ ಭೈರೇಗೌಡ ಕಿಡಿ
ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ: ಜನ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ. ಈಗ ಗೆದ್ದಿರುವ ಒಂದು ಸ್ಥಾನವನ್ನೂ ಬಿಜೆಪಿ ಕಸಿದುಕೊಳ್ಳಲಿದೆ ಎಂದು ಹೇಳಿದರು. ಹಿಂದೂಸ್ಥಾನ್, ಪಾಕಿಸ್ಥಾನದಿಂದ ಹಿಡಿದು ಇಂದಿನ ವರೆಗೂ ಕಾಂಗ್ರೆಸ್ನದ್ದು ವಿಭಜನೆಯ ನೀತಿಯಾಗಿದೆ. ಜಾತಿವಾರು, ಪ್ರಾಂತ್ಯವಾರು ವಿಭಜನೆಯನ್ನು ಮಾಡುತ್ತಿರುವುದು ಕಾಂಗ್ರೆಸ್, ನಾವು ಭಾರತ್ ಮಾತೆಗೆ ಜೈ ಎಂದರೆ ಕಾಂಗ್ರೆಸ್ ಭಾರತದ ವಿಭಜನೆ ಮಾತನಾಡುತ್ತದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಜಿಲ್ಲಾ ವಕ್ತಾರ ಟಿ.ರಾಜಶೇಖರ್, ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಮತ್ತಿತರರು ಭಾಗವಹಿಸಿದ್ದರು.