ಬೆಲೆ ಏರಿಕೆ ಖಂಡಿಸಿ ಪಾಲಿಕೆ ಕಚೇರಿ ಬಳಿ ಬಿಜೆಪಿ ಹೋರಾಟ: ಅಶೋಕ್‌

Published : Apr 26, 2025, 06:05 AM ISTUpdated : Apr 26, 2025, 07:34 AM IST
ಬೆಲೆ ಏರಿಕೆ ಖಂಡಿಸಿ ಪಾಲಿಕೆ ಕಚೇರಿ ಬಳಿ ಬಿಜೆಪಿ ಹೋರಾಟ: ಅಶೋಕ್‌

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ಧೋರಣೆ ಖಂಡಿಸಿ ಸೋಮವಾರದಿಂದ ನಗರದಲ್ಲಿ ಮೂರು ದಿನ ಎಲ್ಲಾ ವಲಯ ಆಯುಕ್ತರ ಕಚೇರಿ ಮುಂದೆ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.  

ಬೆಂಗಳೂರು (ಏ.26): ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ಧೋರಣೆ ಖಂಡಿಸಿ ಸೋಮವಾರದಿಂದ ನಗರದಲ್ಲಿ ಮೂರು ದಿನ ಎಲ್ಲಾ ವಲಯ ಆಯುಕ್ತರ ಕಚೇರಿ ಮುಂದೆ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾಲು, ವಿದ್ಯುತ್‌, ಆಸ್ತಿ ತೆರಿಗೆ ಮತ್ತು ಪಾರ್ಕಿಂಗ್‌ ಶುಲ್ಕ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗಿದೆ. 

ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಬಿಬಿಎಂಪಿ ಚುನಾವಣೆ ಮುಂದೂಡಲಾಗುತ್ತಿದ್ದು, ಈ ಬಗ್ಗೆಯೂ ಹೋರಾಟ ನಡೆಸಲಾಗುವುದು. ಅಲ್ಲದೇ, ಗ್ರೇಟರ್‌ ಬೆಂಗಳೂರು ವಿಧೇಯಕದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯಪಾಲರು ಸಹಿ ಹಾಕಿದರೆ ಅದು ಕಾಂಗ್ರೆಸ್‌ ಪರ ಎನ್ನುತ್ತಾರೆ, ಸಹಿ ಹಾಕದಿದ್ದರೆ ಅದು ಬಿಜೆಪಿ ಕಚೇರಿ ಎಂಬುದಾಗಿ ಟೀಕಿಸಲಾಗುತ್ತದೆ ಎಂದು ಕಿಡಿಕಾರಿದರು.

ಹಿಂದುಳಿದ ಚಾ.ನಗರಕ್ಕೆ ಬಂಪರ್‌ ಗಿಫ್ಟ್‌: ಮಲೆಮಹದೇಶ್ವರದ ಬೆಟ್ಟದಲ್ಲಿ ಹಲವು ಯೋಜನೆ ಘೋಷಣೆ

ದೇಶದೊಳಗಿನ ಸ್ಲೀಪರ್‌ ಸೆಲ್‌ ಮಟ್ಟಹಾಕಬೇಕು: ಪಾಕಿಸ್ತಾನಕ್ಕಿಂತ ಮೊದಲು ದೇಶದೊಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ. ಅವರಿಗೆ ನೆರವು ಕೊಡುವುದು, ಜಾಮೀನು ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಸಹ ಬಿಡಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ. ಕಾಂಗ್ರೆಸ್‌ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು ಎಂದು ಅಶೋಕ್‌ ಹೇಳಿದರು. ಜನತೆಯ ಮೇಲೆ ಕಾಂಗ್ರೆಸ್‌ ಸರ್ಕಾರ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಗುವುದು.-ಆರ್‌.ಅಶೋಕ್‌, ವಿಪಕ್ಷ ನಾಯಕ.

165 ಕೋಟಿ ಗುಳಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮ, ‌ಜಾತಿ ಒಡೆಯುವುದರಲ್ಲಿ ನಂಬರ್ 1 ಆಗಿದ್ದು, ಈಗ ಜಾತಿ ಗಣತಿ ಹೆಸರಲ್ಲಿ ಹಿಂದೂಗಳನ್ನು ಪೀಸ್, ಪೀಸ್‌ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ-2ಕ್ಕೆ ಚಾಲನೆ ನೀಡಿದ ವೇಳೆ ಮಾತನಾಡಿ, ಜಾತಿ ಗಣತಿ ಮಾಡದೇ ಸಿಎಂ ಸಿದ್ದರಾಮಯ್ಯ ₹165 ಕೋಟಿ ಗುಳುಂ ಮಾಡಿದ್ದಾರೆ. ಅವರು ಧರ್ಮ, ‌ಜಾತಿಗಳನ್ನು ಒಡೆಯುವುದರಲ್ಲಿ ನಂಬರ್ 1 ಆಗಿದ್ದಾರೆ. ಈ ಹಿಂದೆ ವೀರಶೈವ ಲಿಂಗಾಯತ ಧರ್ಮ ಒಡೆಯಲು ಹೋಗಿ ಕಪಾಳ ಮೋಕ್ಷಕ್ಕೆ ಒಳಗಾಗಿದ್ದರು. ಈಗ ಜಾತಿ ಗಣತಿ ವರದಿ ತೋರಿಸಿ ಹಿಂದೂಗಳನ್ನು ಒಡೆಯುತ್ತಿದ್ದಾರೆ. ಮುಸ್ಲಿಂ‌ ಧರ್ಮದಲ್ಲೂ 10 ಜಾತಿಗಳಿವೆ. ಒಂದೂ ಡಿವೈಡ್ ಮಾಡಿಲ್ಲ. ಆದರೆ ಹಿಂದುಗಳನ್ನು ಪೀಸ್ ಪೀಸ್ ಮಾಡಿದ್ದಾರೆ ಎಂದು ಆರೋಪಿಸಿದರು.

ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಮುಕ್ತ: ಸಿಎಂ ಸಿದ್ದರಾಮಯ್ಯ

ಲೋಕಾಯುಕ್ತ ತನಿಖೆಗೆ ಆಗ್ರಹ: ಸಮೀಕ್ಷೆ ಮಾಡಿದವರು ಮನೆ ಮನೆಗೆ ಬಂದಿಲ್ಲ ಎಂದು ಸ್ವತಃ ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಮನೆ‌ ಮನೆಗೆ ಹೋಗದೇ ಸರ್ವೇ ಮಾಡಿರುವುದು ಸಿದ್ದರಾಮಯ್ಯ ಅವರ ಟೆಕ್ನಿಕ್. ಸಮೀಕ್ಷೆ ಮಾಡದೇ ಅದಕ್ಕೆ ಮೀಸಲಿಟ್ಟ ₹165 ಕೋಟಿ ಲೂಟಿ ಮಾಡಿದ್ದಾರೆ. ಈ‌ ಬಗ್ಗೆ ಲೋಕಾಯುಕ್ತ ತನಿಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ