17 ಶಾಸಕರನ್ನು ಬಿಜೆಪಿ ಹಣ ಕೊಟ್ಟು ಖರೀದಿಸಿರುವುದಕ್ಕೆ ಸಾಕ್ಷಿ ಕೊಟ್ಟ ಸಿದ್ದರಾಮಯ್ಯ

Published : Nov 27, 2019, 03:54 PM IST
17 ಶಾಸಕರನ್ನು ಬಿಜೆಪಿ ಹಣ ಕೊಟ್ಟು ಖರೀದಿಸಿರುವುದಕ್ಕೆ ಸಾಕ್ಷಿ ಕೊಟ್ಟ ಸಿದ್ದರಾಮಯ್ಯ

ಸಾರಾಂಶ

ಈಗಾಗಲೇ ಅನರ್ಹ ಶಾಸಕರು ಬಿಜೆಪಿ ಸೇರಿದ್ದಾಯ್ತು. ಉಪಚುನಾವಣೆಗೆ ಸ್ಪರ್ಧಿಸಿ ಗೆಲುವಿಗೆ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಮಧ್ಯೆ ಮಾಜಿ ಸಿಎಂ ಸಿದ್ದರಾಂಯ್ಯ ಅವರು ಅನರ್ಹ ಶಾಸಕರನ್ನು ಬಿಜೆಪಿ ಹಣಕ್ಕೆ ಖರೀದಿಸಿದೆ ಎಂದು ಸಾಕ್ಷ್ಯ ಕೊಟ್ಟಿದ್ದಾರೆ.  

ಬೆಂಗಳೂರು, (ನ.27): ಕಾಂಗ್ರೆಸ್ ಮತ್ತು ಜೆಡಿಎಸ್ ಅನರ್ಹ ಶಾಸಕರುಗಳನ್ನ  ಬಿಜೆಪಿ ದುಡ್ಡು ಕೊಟ್ಟು ಖರೀದಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾಂದರ್ಭಿಕ ಸಾಕ್ಷ್ಯಗಳನ್ನು ನೀಡಿದ್ದಾರೆ.

ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹದಿನೇಳು ಶಾಸಕರನ್ನು ಬಿಜೆಪಿ ದುಡ್ಡು ಕೊಟ್ಟೇ ಖರೀದಿಸಿದ್ದಕ್ಕೆ ಸಾಂದರ್ಭಿಕ ಸಾಕ್ಷ್ಯಗಳಿವೆ. ಈಗಿನ ಡಿಸಿಎಂ ಅಶ್ವಥನಾರಾಯಣ, ಶಾಸಕರಾದ ವಿಶ್ವನಾಥ್, ಲಿಂಬಾವಳಿ ಮತ್ತು ಯೋಗೇಶ್ವರ್ ಮನೆಗೆ ಬಂದು 5 ಕೋಟಿ ರೂ. ನೀಡಿದ್ದರು ಎಂದು ಮಾಜಿ ಸಚಿವ ಶ್ರೀನಿವಾಸಗೌಡ ವಿಧಾನಸಭೆಯಲ್ಲಿಯೇ ಹೇಳಿಲ್ವೆ? ಇನ್ನು ಏನು ಸಾಕ್ಷಿ ಬೇಕು? ಎಂದು ಬರೆದುಕೊಂಡಿದ್ದಾರೆ.

ದೇವದುರ್ಗಕ್ಕೆ ಯಡಿಯೂರಪ್ಪ ಹೋಗಿ ಜೆಡಿಎಸ್ ಶಾಸಕನ ಖರೀದಿಗೆ ಯತ್ನಿಸಿದ್ದು ಅಡಿಯೋ ಟೇಪ್‌ನಲ್ಲಿಲ್ವೇ? ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿಲ್ವೆ? ಇದರ ಅರ್ಥ ಏನು? ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಯಾವುದು? ಎಂದು ಟ್ವೀಟ್ ಬಾಣ ಬಿಟ್ಟಿದ್ದಾರೆ.

ಇದಕ್ಕೆ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು, "ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ನಾಯಕರು ನನಗೆ 5 ಕೋಟಿ ರೂ. ಮುಂಗಡ ನೀಡಿರಲಿಲ್ಲ. ಆಪರೇಷನ್‌ ಕಮಲ ಪ್ರಯತ್ನವನ್ನು ವಿಫಲಗೊಳಿಸಲು ಸುಳ್ಳು ಹೇಳಿದೆ" ಎಂದು ಇದೇ ಶ್ರೀನಿವಾಸಗೌಡ ಉಲ್ಟಾ ಹೊಡೆದಿದ್ದಾರೆ.

ಹಗಲು ರಾತ್ರಿ ನಿರಂತರವಾಗಿ ಸುಳ್ಳು ಹೇಳುವ ಸಿದ್ದರಾಮಯ್ಯನವರೇ, ಬಿಜೆಪಿಯ ಬಗ್ಗೆ ಟೀಕೆ ಮಾಡುವ ನೈತಿಕತೆ ನಿಮಗಿದೆಯೇ? ಎಂದು ತಿರುಗೇಟು ನಿಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!