ಬಿಜೆಪಿ ಭಿನ್ನಮತ: ಶಿಸ್ತು ಸಮಿತಿ ನೋಟಿಸ್‌ಗೂ ಬಗ್ಗದ ಯತ್ನಾಳ್‌ ಬಣ

Published : Feb 18, 2025, 07:24 AM ISTUpdated : Feb 18, 2025, 07:34 AM IST
ಬಿಜೆಪಿ ಭಿನ್ನಮತ: ಶಿಸ್ತು ಸಮಿತಿ ನೋಟಿಸ್‌ಗೂ ಬಗ್ಗದ ಯತ್ನಾಳ್‌ ಬಣ

ಸಾರಾಂಶ

ರಾಷ್ಟ್ರೀಯ ಬಿಜೆಪಿಯ ಶಿಸ್ತು ಸಮಿತಿಯ ನೋಟಿಸ್‌ ನೀಡಿದ್ದರೂ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಬಣದ ಮುಖಂಡರು ಫೆಬ್ರವರಿ 20 ರಂದು ಸಭೆ ನಡೆಸಲು ನಿರ್ಧರಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಈ ಬಣ, ತಾವು ನಿಷ್ಕ್ರಿಯರಾಗಿಲ್ಲ ಎಂಬ ಸಂದೇಶ ರವಾನಿಸಲು ಈ ಸಭೆ ನಡೆಸುತ್ತಿದ್ದಾರೆ.

ಬೆಂಗಳೂರು : ರಾಷ್ಟ್ರೀಯ ಬಿಜೆಪಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದರೂ ಕ್ಯಾರೇ ಎನ್ನದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಬಣದ ಮುಖಂಡರು ಇದೇ ತಿಂಗಳ 20ರಂದು ಸಭೆ ನಡೆಸಲು ನಿರ್ಧರಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಯತ್ನಾಳ್ ಬಣದ ಮುಖಂಡರು ಈ ಸಭೆ ನಡೆಸುವ ಮೂಲಕ ತಾವು ನಿಷ್ಕ್ರಿಯರಾಗಿಲ್ಲ ಎಂಬ ಸಂದೇಶ ರವಾನಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ತಿಂಗಳ 20ರೊಳಗೆ ರಾಜ್ಯಾಧ್ಯಕ್ಷ ಕುರಿತ ಪ್ರಶ್ನೆಗೆ ಉತ್ತರ ಸಿಗಲಿದೆ ಎಂದು ವಿಜಯೇಂದ್ರ ಅವರು ಹೇಳಿಕೆ ನೀಡಿದ ಮರುದಿನವೇ ಅಲರ್ಟ್ ಆದ ಯತ್ನಾಳ್ ಬಣದ ಮುಖಂಡರು ಸಭೆ ನಡೆಸುವ ತೀರ್ಮಾನ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.  ಈಗಾಗಲೇ ಯತ್ನಾಳ್ ವಿರುದ್ಧ ಶೋಕಾಸ್ ನೋಟಿಸ್ ಕೊಟ್ಟು ಮೂರು ದಿನಗಳ ಗಡುವು ನೀಡಿದ್ದರೂ ಅವರು ಈವರೆಗೆ ಉತ್ತರ ನೀಡಿಲ್ಲ. ಉತ್ತರ ನೀಡುವುದಿಲ್ಲ ಎಂದೂ ಅವರು ಹೇಳಿದ್ದರು. ಇದರ ಬೆನ್ನಲ್ಲೇ ಯತ್ನಾಳ್ ಬಣದ ಮುಖಂಡರು ಮತ್ತೆ ಸಭೆ ಸೇರುತ್ತಿದ್ದು, ನೋಟಿಸ್‌ ಬಗ್ಗೆ ಮತ್ತು ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ ಬಗ್ಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ.

ಹಿಂದೆ ಸಭೆ ಸೇರಿದಾಗ ವಕ್ಫ್ ಆಸ್ತಿ ವಿವಾದ ಕುರಿತು ಚರ್ಚೆ ನಡೆಯುತ್ತಿತ್ತು. ಈಗ ವಕ್ಫ್ ವಿವಾದ ಸದ್ಯಕ್ಕೆ ಮುಗಿದಿದೆ. ರಾಜ್ಯಾಧ್ಯಕ್ಷ ಹುದ್ದೆಗೆ ತಮ್ಮ ಬಣದಿಂದ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ತಿರ್ಮಾನ ಹೊರಬಿದ್ದಿಲ್ಲ. ಚುನಾವಣೆ ನಡೆಯುವುದೇ ಆದಲ್ಲಿ ಅಭ್ಯರ್ಥಿ ಆಯ್ಕೆ ಮಾಡುವ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

 20ರೊಳಗೆ ಉತ್ತರ ಎಂದಿದ್ದ ವಿಜಯೇಂದ್ರ: ಅದೇ ದಿನ ಸಭೆ ಸೇರಲು ಭಿನ್ನರು ತಯಾರಿ: ನಿಷ್ಕ್ರಿಯ ಆಗಿಲ್ಲ ಎಂಬ ಸಂದೇಶ ರವಾನೆ

ಬಹಿರಂಗ ಹೇಳಿಕೆ ನೀಡಿದ ಕಾರಣಕ್ಕೆ ರಾಜ್ಯ ಬಿಜೆಪಿ ಭಿನ್ನರ ಪಡೆ ನಾಯಕ ಯತ್ನಾಳ್‌ಗೆ ನೋಟಿಸ್‌ ನೀಡಿತ್ತು- 3 ದಿನದೊಳಗೆ ಉತ್ತರ ನೀಡಬೇಕು ಎಂದು ಗಡುವು ನೀಡಿತ್ತು. ಆದರೆ ಯಾವುದೇ ಉತ್ತರ ಕೊಟ್ಟಿರಲಿಲ್ಲ ಯತ್ನಾಳ್‌- ಉತ್ತರ ಕೊಡುವುದಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದರು. ಆ ಬಳಿಕ ಭಿನ್ನರ ಪಡೆಯ ಚಟುವಟಿಕೆ ಸ್ತಬ್ಧವಾಗಿತ್ತು.ಈ ನಡುವೆ, ಫೆ.20ರೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಪ್ರಶ್ನೆಗೆ ಉತ್ತರ ಸಿಗಲಿದೆ ಎಂದು ವಿಜಯೇಂದ್ರ ಹೇಳಿದ್ದರು. ಆ ಹೇಳಿಕೆ ಹೊರಬಿದ್ದ ಮರುದಿನವೇ ಅಲರ್ಟ್‌ ಆದ ಭಿನ್ನರು. ಫೆ.20ರಂದೇ ಸಭೆ ಸೇರಲು ನಾಯಕರ ತೀರ್ಮಾನ. ಗುರುವಾರ ನಡೆಯುವ ಸಭೆಯಲ್ಲಿ ಯಾವೆಲ್ಲಾ ವಿಷಯವನ್ನು ಚರ್ಚೆ ಮಾಡುತ್ತಾರೆ ಎಂಬುದು ಸದ್ಯದ ಕುತೂಹಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ