
ನವದೆಹಲಿ (ಮಾ.2): ಬಿಜೆಪಿ 2024ರ ಲೋಕಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, 16 ರಾಜ್ಯಗಳ 195 ಕ್ಷೇತ್ರಗಳಿಗೆ ಅಭ್ಯರ್ಥಿಯ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಇಬ್ಬರು ಮಾಜಿ ಮುಖ್ಯಮಂತ್ರಿಗಳೂ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡಲಿದ್ದಾರೆ ಎಂದು ಘೋಷಣೆಯಾಗಿದೆ. ಮೊದಲ ಪಟ್ಟಿಯಲ್ಲಿ ಕೇಂದ್ರ ಸಚಿವ ಸಂಪುಟದ 34 ಸಚಿವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೂ ಟಿಕೆಟ್ ಘೋಷಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ವಿನೋದ್ ತಾವ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದರೆ, ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾವುದೇ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಾಗಿಲ್ಲ. ಮೊದಲ ಪಟ್ಟಿಯಲ್ಲಿ ರಾಜ್ಯದ 10 ಮಂದಿಗೆ ಟಿಕೆಟ್ ಘೋಷಣೆ ಆಗಲಿದೆ ಎನ್ನುವ ನಿರೀಕ್ಷೆ ಇಡಲಾಗಿತ್ತು.
16 ರಾಜ್ಯ ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಕ್ಕೆ ಟಿಕೆಟ್ ಘೋಷಣೆ ಮಾಡಲಾಗಿದೆ. 34 ಕೇಂದ್ರ ಸಚಿವರೊಂದಿಗೆ, 28 ಮಹಿಳಾ ಅಭ್ಯರ್ಥಿಗಳಿಗೂ ಟಿಕೆಟ್ ಘೋಷಿಸಲಾಗಿದೆ. 47 ಯುವಕರು, 27 ಎಸ್‌ಸಿ, 18 ಎಸ್‌ಸಿ ಹಾಗೂ 57 ಹಿಂದುಳಿದ ವರ್ಗಗಳ ವ್ಯಕ್ತಿಗೆ ಟಿಕೆಟ್ ಘೋಷಿಸಲಾಗಿದೆ. ರಾಜ್ಯವಾರು ಪ್ರಕಾರ ಉತ್ತರ ಪ್ರದೇಶದಲ್ಲಿ 51, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಜಾರ್ಖಂಡ್ 11, ದೆಹಲಿ 5, ಉತ್ತರಾಖಂಡ 3 ಹಾಗೂ ಗೋವಾದ 1 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ. ನವದೆಹಲಿ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿಗೆ ಟಿಕೆಟ್ ನಿರಾಕರಿಸಲಾಗಿದೆ. ಸುಷ್ಮಾ ಸ್ವರಾಜ್ ಪುತ್ರಿಗೆ ಟಿಕೆಟ್ ನೀಡಲಾಗಿದ್ದು, ಭಾನ್ಸುರಿ ಸ್ವರಾಜ್ ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್‌ನ ಗಾಂಧಿನಗರದಿಂದ ಸ್ಪರ್ಧೆ ಮಾಡಲಿದ್ದಾರೆ.
ಇಂದು 100 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ, ಫಸ್ಟ್ ಲಿಸ್ಟ್‌ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರು?
ರಾಜೀವ್ ಚಂದ್ರಶೇಖರ್‌ಗೆ ಟಿಕೆಟ್: ರಾಜ್ಯಸಭಾ ಅವಧಿ ಮುಗಿಸಿರುವ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಕೇರಳದ ತಿರುವನಂತಪುರದಿಂದ ಟಿಕೆಟ್ ನೀಡಲಾಗಿದೆ. ಅದರೊಂದಿಗೆ ಕಾಂಗ್ರೆಸ್‌ನ ಶಶಿ ತರೂರ್ ಹಾಗೂ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ರಾಜೀವ್ ಚಂದ್ರಶೇಖರ್ ಅವರ ನಡುವಿನ ಫೈಟ್ ಗಮನಸೆಳೆಯಲಿದೆ. ಕಾಸರಗೋಡು ಕ್ಷೇತ್ರದಿಂದ ಎಂಎಲ್ ಅಶ್ವಿನಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ತಡ ರಾತ್ರಿ 3.30ರವರೆಗೂ ಚುನಾವಣಾ ಸಮಿತಿ ಸಭೆ, ಕೆಲಸ ಮಾಡದ ಹಲವು ಸಂಸದರಿಗೆ ಕೊಕ್
ಮಧ್ಯಪ್ರದೇಶದ ಗುಣ ಕ್ಷೇತ್ರದಿಂದ ನಾಗರೀಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ, ವಿಧಿಶಾದಿಂದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ರಾಜಸ್ಥಾನದ ಅಲ್ವಾರ್ ಕ್ಷೇತ್ರದಿಂದ ಕೇಂದ್ರ ಸಚಿವ ಭೂಪೇಂದ್ರ ಯಾದವ್, ತೆಲಂಗಾಣದ ಕರೀಂ ನಗರದಿಂದ ಬಂಡಿ ಸಂಜಯ್, ಸಿಕಂದರಾಬಾದ್‌ನಿಂದ ಕಿಶನ್ ರೆಡ್ಡಿ, ಕೇರಳದ ಪಟ್ಟಣಂತಿಟ್ಟ ಪ್ರದೇಶದಲ್ಲಿ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಪುತ್ರ ಅನಿಲ್ ಆಂಟನಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶದ ಮಥುರಾದಿಂದ ನಟಿ ಹೇಮಾ ಮಾಲಿನಿ, ಬುಲಂದ್‌ಶಜರ್‌ನಿಂದ ಭೋಲಾ ಸಿಂಗ್, ಲಖನೌದಿಂದ ರಾಜನಾಥ್ ಸಿಂಗ್ ಹಾಗೂ ಅಮೇಠಿಯಿಂದ ಸ್ಮೃತಿ ಇರಾನಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿಯ 195 ಅಭ್ಯರ್ಥಿಗಳ ಮೊದಲ ಪಟ್ಟಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.