CD ಕೇಸ್: ರಮೇಶ್ ಜಾರಕಿಹೊಳಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಬಿಜೆಪಿ

By Suvarna NewsFirst Published Mar 19, 2021, 2:28 PM IST
Highlights

ರಾಜ್ಯದಲ್ಲಿ ಉಪಚುನಾವಣೆ ಕಾವು ಏರುತ್ತಿದೆ. ಮತ್ತೊಂದೆಡೆ ಸಿ.ಡಿ. ಪ್ರಕರಣದಲ್ಲಿ ಸಿಲುಕಿರುವ ರಮೇಶ್ ಜಾರಕಿಹೊಳಿಗೆ ಕರ್ನಾಟಕ ಬಿಜೆಪಿ ಬಿಗ್ ಶಾಕ್ ಕೊಟ್ಟಿದೆ.

ಬೆಳಗಾವಿ, (ಮಾ.19): ರಾಜ್ಯದಲ್ಲಿ ಎರಡು ವಿಧಾನಸಭಾ ಹಾಗೂ ಒಂದು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಏಪ್ರಿಲ್ 17 ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ.

ಇದರ ಮಧ್ಯೆ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಸ್ಫೋಟವಾಗಿದ್ದು, ಬಿಜೆಪಿಗೆ ಮುಜುಗರ ತಂದಿದೆ. ಅದರಲ್ಲೂ ರಮೇಶ್ ಜಾರಕಿಹೊಳಿ ಅವರಿಗ ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್‌ ಉಸ್ತುವಾರಿ ನೀಡಲಾಗಿತ್ತು.ಆದ್ರೆ, ಸಿಡಿ ಬಹಿರಂಗ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಪರ್ಯಾಯ ನಾಯಕತ್ವದ ಹುಡುಕಾಟ ಆರಂಭವಾಗಿದೆ.

ಕರ್ನಾಟಕದ 3 ಕ್ಷೇತ್ರಗಳ ಉಪಚುನಾವಣೆಗಳಿಗೆ ದಿನಾಂಕ ಘೋಷಣೆ

ಉಸ್ತುವಾರಿ ಚೇಂಜ್..!
ಬೆಳಗಾವಿ ಲೋಕಸಭಾ ಉಪಚುನಾವಣೆ ಉಸ್ತುವಾರಿ ವಹಿಸಿಕೊಳ್ಳುತ್ತಿದ್ದ ರಮೇಶ್ ಗೆ ಇದೀಗ ಚುನಾವಣೆ ಉಸ್ತುವಾರಿಗೆ ಕೊಕ್ ನೀಡಲಾಗಿದೆ. ಕೇಸರಿ ಪಡೆ ಹೊಸ ನಾಯಕತ್ವ ಹುಡುಕಾಟದಲ್ಲಿ ತೊಡಗಿದೆ.

ಸುರೇಶ್ ಅಂಗಡಿ ಸಾವಿನಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಸಿಡಿ ಬಿಡುಗಡೆಗೂ ಮುನ್ನ ಬಿಜೆಪಿ ಸಹಜವಾಗಿಯೇ ರಮೇಶ್ ಗೆ ಉಪಚುನಾವಣೆ ಉಸ್ತುವಾರಿ ನೀಡಿತ್ತು. ಆದರೆ ಈಗ ಅನಿವಾರ್ಯವಾಗಿ ಇದೀಗ ಬೇರೊಬ್ಬ ನಾಯಕರಿಗೆ ಉಪಚುನಾವಣೆ ಜವಾಬ್ದಾರಿ ನೀಡಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿ  ಹೆಸರುಗಳು ಮುಂಚೂಣಿಯಲ್ಲಿವೆ. 

ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ

 ಈಗಾಗಲೇ ಡಿಸಿಎಂ ಸವದಿ ಮತ್ತು ಉಮೇಶ್ ಕತ್ತಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಈ ನಾಯಕರಿಬ್ಬರೂ ಉಸ್ತುವಾರಿ ಜವಾಬ್ದಾರಿ ವಹಿಸಿಕೊಳ್ಳುವ ಆಶಯ, ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಮಧ್ಯೆ ರಮೇಶ್​ ಜಾರಕಿಹೊಳಿ ಬ್ರದರ್​ ಬಾಲಚಂದ್ರ ಜಾರಕಿಹೊಳಿ‌ ಅವರಿಗೇ ಉಸ್ತುವಾರಿ ನೀಡುವಂತೆ ಕೆಲ ಸಚಿವರು ಮತ್ತು ಶಾಸಕರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. 

ಇನ್ನು ಇದೀಗ ಜಾರಕಿಹೊಳಿ‌ ಸಹೋದರರನ್ನ ಕೈ ಬಿಟ್ರೇ ಬಿಜೆಪಿಗೆ ಹಿನ್ನಡೆಯಾಗುವ ಆತಂಕವೂ ಇದೆ. ಈ ಕಾರಣಕ್ಕೆ ಬಾಲಚಂದ್ರ ಜಾರಕಿಹೊಳಿ‌ಗೆ ಉಸ್ತುವಾರಿ ನೀಡುವಂತೆ ಕೆಲವರು ಸಲಹೆ ಕೊಟ್ಟಿದ್ದಾರೆ ಎಂದ ಮೂಲಗಳು ತಿಳಿಸಿವೆ. ಈ ಬಗ್ಗೆ ಶೀಘ್ರದಲ್ಲಿ ಸಭೆ ನಡೆಸಿ ಯಾರಿಗೆ ಉಸ್ತುವಾರಿ ನೀಡಬೇಕು ಎಂದು ತೀರ್ಮಾನವಾಗುವ ಸಾಧ್ಯತೆಯಿದೆ.

click me!