ಸ್ವಿಚ್ ಇರುವುದು ದೆಹಲಿಯಲ್ಲಿಯೋ ಅಥವಾ ಬೆಂಗಳೂರಿನಲ್ಲಿಯೋ ಎಂದು ಕೇಳಿದ್ದಕ್ಕೆ ಕೆಲಕಾಲ ಮೌನವಾದರು. ಅದನ್ನು ವಿವರವಾಗಿ ಹೇಳಲಿಲ್ಲ ಮತ್ತು ಯಾರು ಸ್ವಿಚ್ ಎನ್ನುವ ಪ್ರಶ್ನೆಗೂ ಉತ್ತರಿಸಲಿಲ್ಲ. ಆದರೆ, ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್
ಕೊಪ್ಪಳ(ಡಿ.01): ಎಲ್ಲೋ ಸ್ವಿಚ್ ಇದೆ, ಇನ್ನೆಲ್ಲೋ ಲೈಟ್ ಉರಿಯುತ್ತಿದೆ! ಇದು, ಯತ್ನಾಳ ಬಂಡಾಯದ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರ ಮಾರ್ಮಿಕ ಹೇಳಿಕೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದಾಗ, ಯಾವ ಗುಂಪಿನಿಂದ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಯತ್ನಾಳ್ ಹೋರಾಟಕ್ಕೆ ಸಂಬಂಧಿಸಿದಂತೆ ಎಲ್ಲೋ ಸ್ವಿಚ್ ಇದೆ, ಇನ್ನೆಲ್ಲೋ ಲೈಟ್ ಉರಿಯುತ್ತಿದೆ ಎಂದರು.
ಅನುಮತಿ ರಹಿತ ಪ್ರವಾಸ: ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೆಹಲಿಗೆ ದೂರು
ಸ್ವಿಚ್ ಇರುವುದು ದೆಹಲಿಯಲ್ಲಿಯೋ ಅಥವಾ ಬೆಂಗಳೂರಿನಲ್ಲಿಯೋ ಎಂದು ಕೇಳಿದ್ದಕ್ಕೆ ಕೆಲಕಾಲ ಮೌನವಾದರು. ಅದನ್ನು ವಿವರವಾಗಿ ಹೇಳಲಿಲ್ಲ ಮತ್ತು ಯಾರು ಸ್ವಿಚ್ ಎನ್ನುವ ಪ್ರಶ್ನೆಗೂ ಉತ್ತರಿ ಸಲಿಲ್ಲ. ಆದರೆ, ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿಯೂ ಡಿ. 6ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ವಿಜಯೇಂದ್ರ ನೇತೃತ್ವ ವಹಿಸಲಿದ್ದಾರೆ ಎಂದರು.
ಬಸನಗೌಡ ಪಾಟೀಲ್ ಯತ್ನಾಳ ಅವರ ಕುರಿತು ಕ್ರಮ ವಹಿಸಲು ರಾಷ್ಟ್ರೀಯ ನಾಯಕರು ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬ್ಯೂಸಿ ಇದ್ದರು. ಇನ್ಮುಂದೆ ರಾಜ್ಯದ ಕುರಿತು ಗಮನ ಹರಿಸಲಿದ್ದಾರೆ. ಯತ್ನಾಳ ಅವರ ವಿಷಯವನ್ನು ರಾಷ್ಟ್ರೀಯ ನಾಯಕರು ನೋಡಿಕೊಳ್ಳುತ್ತಾರೆ ಎಂದರು.
ವಕ್ಫ್ ಬೋರ್ಡ್ ರಾಜ್ಯದಲ್ಲಿ ಲ್ಯಾಂಡ್ ಜಿಹಾದ್ ನಡೆಸುತ್ತಿದೆ. ಇದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಅದರ ವಿರುದ್ಧ ಹೋರಾಟ ತೀವ್ರ ಗೊಳಿ ಸಲಾಗುವುದು. ಸದನ ಒಳಗೆ ಮತ್ತು ಹೊರಗೂ ಪ್ರತಿಭಟನೆಯನ್ನು ತೀವ್ರ ಗೊಳಿಸಿ, ರಾಜ್ಯದ ರೈತರ ಮತ್ತು ಮಠಗಳ ಹಿತ ಕಾಪಾಡಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ವಕ್ಫ್ ಆಸ್ತಿಯ ರಕ್ಷಣೆ ಕಾರ್ಯ ನಡೆದಿದೆ ಎಂದು ವಕ್ಫ್ ಖಾತೆಯ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಹಾಗಾದರೆ ಅವರೇ ಇದಕ್ಕೆ ಮುಖ್ಯಮಂತ್ರಿ ಕುಮ್ಮಕ್ಕು ಇದೆಯಾ ಎನ್ನುವುದನ್ನು ಸಿದ್ದರಾಮಯ್ಯ ಅವರೇ ಹೇಳಬೇಕು ಎಂದರು.
ಉಪ ಚುನಾವಣೆಯಲ್ಲಿ ಗೆದ್ದಾಕ್ಷಣ ಕಾಂಗ್ರೆಸ್ ಸರ್ಕಾರದ ಮೇಲೆ, ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇರುವ ಎಲ್ಲ ಕೇಸ್‌ಗಳಿಗೂ ನ್ಯಾಯ ಸಿಕ್ಕಿತು ಎಂದಲ್ಲ. ಹಾಗೇನಾದರೂ ಎನ್ನುವುದಾದರೆ ಸಿದ್ದರಾಮಯ್ಯ ಅವರು ಮೊದಲು ಕೋರ್ಟ್‌ಗೆ ಅಪ್‌ಡೇಟ್ ಹಾಕಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.
ರಾಜ್ಯ ಸೇರಿದಂತೆ ದೇಶದಾದ್ಯಂತ ನಡೆದ ಉಪ ಚುನಾವಣೆಯ ಫಲಿತಾಂಶ ಗಮನಿಸಿ, ಅದರಲ್ಲಿ ಯಾವ ಸರ್ಕಾರ ಇರುತ್ತದೆಯೋ ಅದೇ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದಾರೆ. ನಮ್ಮ ಸರ್ಕಾರ ಇದ್ದಾಗಲೂ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದೆ. ಹೀಗಾಗಿ, ಇದಕ್ಕೇನೂ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷನವೀನ್ ಗುಳಗಣ್ಣವರ, ಶಾಸಕರಾದ ದೊಡ್ಡನಗೌಡ ಪಾಟೀಲ್, ಹೇಮಲತಾ ನಾಯಕ, ಜನಾರ್ದನ ರೆಡ್ಡಿ, ಮಾಜಿ ಸಚಿವ ಹಾಲಪ್ಪ ಆಚಾರ್, ಡಾ. ಬಸವರಾಜ ಕ್ಯಾವಟರ ಇದ್ದರು.
ಕಾಂಗ್ರೆಸ್ ಸರ್ಕಾರದ ಕಮೀಷನ್ ಆಸೆಗೆ ಕಳಪೆ ಔಷಧಿ ಖರೀದಿ; 150 ಬಾಣಂತಿಯರ ಸಾವು: ಪಿ.ರಾಜೀವ್ ಗಂಭೀರ ಆರೋಪ
ದಲಿತರಿಗೆ ಸಿಗಬೇಕಾದ ಭೂಮಿ ಕಿತ್ತುಕೊಂಡು, ಅಭಿವೃದ್ಧಿ ಬಗ್ಗೆ ಮಾತಾಡ್ತಾರೆ: ಖರ್ಗೆ ವಿರುದ್ಧ ಪಿ ರಾಜೀವ್ ಕಿಡಿ
ವಿಜಯಪುರ : ಕಲಬುರಗಿಯಲ್ಲಿ ಕೆಐಡಿಬಿಯ ಭೂಮಿಯನ್ನು ಅಕ್ರಮವಾಗಿ ಪಡೆದಿದ್ದಾರೆಂದು ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ ನಡೆಸಿದ್ದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ತಮ್ಮ ಕುಟುಂಬದ ಟ್ರಸ್ಟ್‌ಗೆ ಕೆಐಡಿಬಿ ಭೂಮಿ ಪಡೆದುಕೊಂಡಿದ್ದಾರೆ. ದಲಿತರ ಬಗ್ಗೆ, ದಲಿತರ ಅಭಿವೃದ್ಧಿ ಬಗ್ಗೆ ಮಾತನಾಡುವ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರು ದಲಿತರು ಕೇವಲ ಇವರ ಕುಟುಂಬವನ್ನು ಅಭಿವೃದ್ಧಿ ಮಾಡುವುದಕ್ಕಾಗಿ ಇರುವ ಸಮೂಹವೆಂದು ತಿಳಿದುಕೊಂಡಿದ್ದಾರೆ. ಇದರಿಂದಾಗಿ ಬಡ ದಲಿತ ಉದ್ದಿಮೆದಾರರಿಗೆ ಸಿಗಬೇಕಾದ ಭೂಮಿಯನ್ನು ಖರ್ಗೆ ಕುಟುಂಬ ಕಿತ್ತುಕೊಂಡಿದೆ. ನೂರಾರು ದಲಿತ ಕುಟುಂಬಗಳು ಮತ್ತೆ ಬಡವರಾಗಿಯೇ ಉಳಿಯುವಂತೆ ಮಾಡಿದ್ದಾರೆ. ಅಭಿವೃದ್ಧಿ ಹೊಂದಬೇಕಿದ್ದ ನೂರಾರು ದಲಿತ ಕುಟುಂಬಗಳು ಬಡತನ ರೇಖೆಗಿಂತ ಕೆಳಗೆ ಉಳಿಯುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.