
ಬೆಂಗಳೂರು(ಜ.28): ಬಿಜೆಪಿಯಲ್ಲಿ ಆಂತರಿಕ ಚುನಾವಣಾ ವ್ಯವಸ್ಥೆ ಇದ್ದು, ಎಲ್ಲ ವನ್ನೂ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಪರೋಕ್ಷ ಸವಾಲು ಹಾಕಿದ್ದಾರೆ.
ಸುದ್ದಿಗಾರರ ಜತೆ ಮಾತನಾ ಡಿದ ಅವರು ರಾಜ್ಯಾಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದು ಖಚಿತ ಎಂಬ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದರು. ಮುಂದಿನ ದಿನದಲ್ಲಿ ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಕುರಿತು ಕೇಂದ್ರದ ವರಿಷ್ಠರು ಗಮನಹರಿಸಲಿದ್ದಾರೆ. ಕೆಲವರ ಹೇಳಿಕೆಯನ್ನೂ ಪಕ್ಷದ ವರಿಷ್ಠರು ಗಮನಿಸುತ್ತಾರೆ. ಎಲ್ಲದಕ್ಕೂ ನಾನು ಸಿದ್ದನಿದ್ದು, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದರು.
ವಿರೋಧಿ ಬಣ ವಾಷಿಂಗ್ಟನ್ ಗೂ ಹೋಗಲಿ, ಯತ್ನಾಳ್ ಬಾಣಕ್ಕೆ ಕೇಸರಿ ಪಡೆಯಲ್ಲಿ ತಳಮಳ
ಕೆಲಸ ಇಲ್ಲದವರ ಬಗ್ಗೆ ಮಾತಾಡಲ್ಲ, ಯತ್ನಾಳ್ ಬಗ್ಗೆ ತಲೆಕೆಡಿಸಿಕೊಳ್ಳಲ್ಲ: ವಿಜಯೇಂದ್ರ
ಯತ್ನಾಳ್ ಇರಲಿ ಅಥವಾ ಯಾರೇ ಆಗಲಿ, ನಾನು ತಲೆಕೆಡಿಸಿಕೊಳ್ಳಲ್ಲ. ನನ್ನ ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಮವಾಗಿ ಹೇಳಿದ್ದಾರೆ. ಕೆಲಸ ಇಲ್ಲದವರ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ, ಕೆಲಸ ಮಾಡಿಕೊಂಡು ಹೋಗುತ್ತೇನೆ ಅಷ್ಟೇ ಎಂದರು.
ವಿಜಯೇಂದ್ರಗೆ 'ಬಚ್ಚಾ' ಎಂದಿದ್ದು ತಪ್ಪು, ರಮೇಶ್ ಜಾರಕಿಹೊಳಿ ಬಳಸಿದ ಪದ ಒಪ್ಪಲಾಗದು: ಜೋಶಿ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಕುರಿತ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಯಾರು ಕ್ರಮಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ. ಫೆಬ್ರವರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇಂದಿನ ಬೆಳವಣಿಗೆಗಳ ಬಗ್ಗೆ ಕಾರ್ಯಕರ್ತರಲ್ಲಿ ನೋವು ಇದೆ. ಆ ನೋವು ಏನು ಅಂತ ಅರ್ಥ ಆಗುತ್ತದೆ. ಇದೆಲ್ಲದಕ್ಕೂ ಶೀಘ್ರ ಇತಿಶ್ರೀ ಹಾಡುವ ಕೆಲಸ ಹೈಕಮಾಂಡ್ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಮತ್ತು ಜೆಡಿಎಸ್‌ನ ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಡಾ ವಿಚಾರದಲ್ಲಿ ನಡೆದ ಘಟನೆ ಬಳಿಕ ಕಾಂಗ್ರೆಸ್ಸಿನಲ್ಲೇ ಮುಖ್ಯಮಂತ್ರಿ ಆಗುವುದಕ್ಕೆ ಗುದ್ದಾಟ ನಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರನ್ನು ಅವರ ಪಕ್ಷಕ್ಕೆ ಸೇರಿಸಿಕೊಂಡು ಏನು ಮಾಡುತ್ತಾರೆ? ಮೊದಲು ಕಾನೂನು ಸುವ್ಯವಸ್ಥೆ ಸರಿಪಡಿಸಲಿ. ಅವರಲ್ಲಿರುವ ಶಾಸ ಕರನ್ನು ಮೊದಲು ಉಳಿ ಸಿಕೊಳ್ಳಲಿ. ಬಿಜೆಪಿ, ಜೆಡಿಎಸ್ ಪಕ್ಷದವ ರನ್ನು ಆಮೇಲೆ ಕರೆದು ಕೊಳ್ಳಲಿ ಎಂದು ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.