ಪಂಚ ರಾಜ್ಯಗಳ ಫಲಿತಾಂಶ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ಬೇಕು ಎನ್ನುವ ಸಂದೇಶ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ನಮಗೆ ನಿಜವಾಗಲೂ ಹಿನ್ನಡೆ ಆಗಿದೆ. ಕಳೆದೊಂದು ತಿಂಗಳಿನಿಂದ ಬದಲಾವಣೆ ಆಗಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಕಾಂಗ್ರೆಸ್‌ನವರು ಆತಂಕದಲ್ಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಳಗಾವಿ(ಡಿ.08): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ಸಿಕ್ಕಿದೆ. ಪಂಚರಾಜ್ಯ ಚುನಾವಣೆ ಮುನ್ನ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಐಎನ್‌ಡಿಐಎ ಕೂಟ ಇತ್ತು. ಚುನಾವಣೆ ನಂತರ ಬಿಜೆಪಿಗೆ ಆನೆಬಲ ಬಂದಿದೆ. ಕಾಂಗ್ರೆಸ್ ಪಕ್ಷದ ಟಯರ್ ಪಂಚರ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದಲ್ಲಿ ಗುರುವಾರ ಬೆಳಗಾವಿ ಹಾಗೂ ಧಾರವಾಡ ವಿಭಾಗದ ನಗರಸಭೆ ಸದಸ್ಯರ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಂಚ ರಾಜ್ಯಗಳ ಫಲಿತಾಂಶ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ಬೇಕು ಎನ್ನುವ ಸಂದೇಶ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ನಮಗೆ ನಿಜವಾಗಲೂ ಹಿನ್ನಡೆ ಆಗಿದೆ. ಕಳೆದೊಂದು ತಿಂಗಳಿನಿಂದ ಬದಲಾವಣೆ ಆಗಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಕಾಂಗ್ರೆಸ್‌ನವರು ಆತಂಕದಲ್ಲಿದ್ದಾರೆ ಎಂದರು.
ಬಿಜೆಪಿಯವರು ಮೊದಲು ಕೇಂದ್ರದಿಂದ ಬರ ಪರಿಹಾರ ತರಲಿ: ಕಮಲ ನಾಯಕರಿಗೆ ಡಿಕೆಶಿ ತಿರುಗೇಟು
ಹೊಸ ಸರ್ಕಾರದ ಬಂದಾಗ ಜನರು ಸಕಾರಾತ್ಮಕ ಮಾತನಾಡುತ್ತಾರೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾಕೆ ಅಧಿಕಾರಕ್ಕೆ ಬಂತು ಎಂದು ಜನ ಶಾಪ ಹಾಕ್ತಿದ್ದಾರೆ. ಆರೇ ತಿಂಗಳಲ್ಲಿ ಕಾಂಗ್ರೆಸ್ ಜನಪ್ರಿಯತೆ ಕಳೆದುಕೊಂಡಿದೆ. ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣ ನಿರ್ಮಾಣವಾಗುತ್ತಿದೆ. ಬರಗಾಲ ಇದ್ದರೂ ಪರಿಹಾರ ನೀಡುತ್ತಿಲ್ಲ. ರೈತ ಪರವಾಗಿ ಚಿಂತನೆ ರಾಜ್ಯ ಸರ್ಕಾರಕ್ಕಿಲ್ಲ. ಜಾನುವಾರುಗಳಿಗೆ ಹಾಕುವ ಮೇವಿನ ಬೆಲೆ ಏರಿಕೆ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆ ಹಣ ಬಂದ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಆಗ ಪ್ರಧಾನಿ ನರೇಂದ್ರ ಮೋದಿ ತಡೆಯುವ ಶಕ್ತಿ ಯಾರಿಗೂ ಇರುವುದಿಲ್ಲ. ನಮ್ಮ ಜವಾಬ್ದಾರಿ ಅರಿತು ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು.