ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಹೊಸ ನಾಟಕ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದರು.
ಮೈಸೂರು (ಫೆ.12): ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಹೊಸ ನಾಟಕ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳಾಗಿದೆ. ಘೋಷಣೆ ಮಾಡಿದ್ದ ಯೋಜನೆಗಳನ್ನೇ ಸರಿಯಾಗಿ ಜಾರಿಗೊಳಿಸಿಲ್ಲ. ರಾಜ್ಯದಲ್ಲಿ ಯಾವುದಾದರೊಂದು ಅಭಿವೃದ್ಧಿ ಕೆಲಸವನ್ನೂ ಮಾಡಿಲ್ಲ. ಈ ಬಗ್ಗೆ ಬಿಜೆಪಿಯಿಂದ ಪ್ರಶ್ನೆಗಳನ್ನು ಕೇಳಿದ್ದೇವೆ.
ಅದಕ್ಕೆ ಉತ್ತರಿಸಲಾಗದ ಕಾಂಗ್ರೆಸ್ ನವರು ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಹೊಸ ನಾಟಕ ಆಡುತ್ತಿದ್ದಾರೆ ಎಂದು ದೂರಿದರು. ಜನರು ಇವರ ಮಾತಿಗೆ ಮರುಳಾಗುವುದಿಲ್ಲ. ಮೈಸೂರಿಗೆ ಅಮಿತ್ ಶಾ ಅವರು ಬಂದಿರುವುದು ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರ ಅವರ ಛಾಪು ಇರುವುದನ್ನು ನೋಡಿದ್ದೇವೆ. ಬಿಜೆಪಿ ಕೋರ್ ಕಮಿಟಿಯಲ್ಲಿ ರಾಜ್ಯದ 28 ಸ್ಥಾನ ಗೆಲ್ಲುವ ಕುರಿತು ಕಾರ್ಯತಂತ್ರರೂಪಿಸಿ, ರಣ ಕಳಹೆ ಮೊಳಗಿಸಿದ್ದೇವೆ. ಎಲ್ಲಾ ಕ್ಷೇತ್ರಗಳನ್ನು ನಿಶ್ಚಿತವಾಗಿ ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
undefined
ಸಿದ್ದರಾಮಯ್ಯ ಉತ್ತಮ ಬಜೆಟ್ ಕೊಡಲಿದ್ದಾರೆ: ಸಚಿವ ಎಚ್.ಕೆ.ಪಾಟೀಲ್
ಎನ್‌ಡಿಎ ಅಭ್ಯರ್ಥಿ ರಂಗನಾಥ್ ಅವರನ್ನು ಗೆಲ್ಲಿಸಿ: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲು ಕಾರಣರಾದವರನ್ನು ಕೈಬಿಟ್ಟು ಎನ್‌ಡಿಎ ಅಭ್ಯರ್ಥಿ ರಂಗನಾಥ್ ಅವರನ್ನು ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮಲ್ಲೇಶ್ವರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿಯವರ ಅವಧಿಯಲ್ಲಿ ಬಿಜೆಪಿ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅನೇಕ ಕೊಡುಗೆಗಳನ್ನು ನೀಡಿದೆ. ಪವಿತ್ರವಾದ ಶಿಕ್ಷಣ ಕ್ಷೇತ್ರಕ್ಕೆ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ಅವರಾಗಿದ್ದು, ಅವರಿಗೆ ಮತ ಕೊಟ್ಟು ಆಶೀರ್ವದಿಸಬೇಕು ಎಂದು ಹೇಳಿದರು.
ಎ.ಪಿ. ರಂಗನಾಥ್ ಅವರು ಒಬ್ಬ ಕ್ರಿಯಾಶೀಲ ರಾಜಕಾರಣಿಯಾಗಿದ್ದಾರೆ. ರಾಜಕಾರಣಿ ಎನ್ನುವುದಕ್ಕಿಂತ ಹೆಚ್ಚಾಗಿ ಸಮಾಜದಲ್ಲಿ ತಮ್ಮದೇ ಆದ ಸೇವೆ ಮಾಡುತ್ತಿದ್ದಾರೆ. ಜತೆಗೆ ವಕೀಲರು ಆಗಿದ್ದಾರೆ. ಉಪ ಚುನಾವಣೆಗೆ ಕಾರಣಕರ್ತರು ಯಾರು? ಎಷ್ಟು ಬಾರಿ ತಮ್ಮ ಪಕ್ಷವನ್ನು ಬದಲಿಸಿದ್ದಾರೆ? ಅಥವಾ ಅವರು ವಿಧಾನಪರಿಷತ್ ಸದಸ್ಯರಾಗಿ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಕೊಡುಗೆ ಶೂನ್ಯವಾಗಿದೆ. ಹೀಗಾಗಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಲು ನಾವೆಲ್ಲಾ ಶ್ರಮಪಡಬೇಕು ಎಂದರು.
ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧರಾಗಿ: ಕಾರ್ಯಕರ್ತರಿಗೆ ಶಾಸಕ ಶಿವಲಿಂಗೇಗೌಡ ಕರೆ
ಮಾಜಿ ಕೆ.ಎಸ್.ಈಶ್ವರಪ್ಪ ಅವರು ತಮ್ಮ ವಿರುದ್ಧದ ಪ್ರಕರಣವನ್ನು ಎದುರಿಸುತ್ತಾರೆ. ಆದರೆ, ತಾವೇನು ಹೇಳಿದ್ದಾರೆ ಎಂಬುದನ್ನು ಸಂಸದ ಡಿ.ಕೆ.ಸುರೇಶ್ ಅವರು ನೆನಪು ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು. ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ಪರ ಮಲ್ಲೇಶ್ವರ ವಿದ್ಯಾ ಮಂದಿರ ಸ್ಕೂಲ್, ಎಂಎಲ್ಎ ಕಾಲೇಜಿನಲ್ಲಿ ಪ್ರಚಾರ ನಡೆಸಲಾಯಿತು. ಈ ವೇಳೆ ಸಂಸದ ಡಿ.ವಿ ಸದಾನಂದ ಗೌಡ, ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಬಿಜೆಪಿ ಜಿಲ್ಲಾಧ್ಯಕ್ಷ ಹರೀಶ್, ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಉಪಸ್ಥಿತರಿದ್ದರು.