ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನರ ಕಿವಿಗೆ ಹೂವು: ವಿಜಯೇಂದ್ರ ಟೀಕೆ

By Kannadaprabha NewsFirst Published Jan 28, 2024, 3:30 AM IST
Highlights

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಂಬಿಕೊಂಡು ಕುಳಿತಿದ್ದು, ಗ್ಯಾರಂಟಿ ವಿಚಾರವಾಗಿ ಜನರ ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ ಟೀಕಿಸಿದರು. 

ಶಿವಮೊಗ್ಗ (ಜ.28): ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಂಬಿಕೊಂಡು ಕುಳಿತಿದ್ದು, ಗ್ಯಾರಂಟಿ ವಿಚಾರವಾಗಿ ಜನರ ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ ಟೀಕಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಸರ್ಕಾರವೇ ಹಣ ಕೊಡುತ್ತಿತ್ತು. ಆದರೆ, ಈ ಸರ್ಕಾರ ರೈತರಿಂದ ಹಣ ವಸೂಲಿ ಮಾಡುತ್ತಿದೆ. ಎಲ್ಲದಕ್ಕೂ ಕೇಂದ್ರ ಸರ್ಕಾರ ಕಡೆ ಕೈ ತೋರಿಸುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಅವರಿಗೆ ರೈತರ ವಿಷಯದಲ್ಲಿ ಕಳಕಳಿ ಇಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಡೋಲಾಯಮಾನ ಆಗಿದೆ ಎಂದು ಟೀಕಿಸಿದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ವಿಷಯ ಪ್ರಸ್ತಾಪಿಸಿಲಾಗಿತ್ತು. ಅದರಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲಾಗಿದೆ. ಜ.22ರಂದು ಭಾರತ ಅಷ್ಟೇ ಅಲ್ಲ, ಪ್ರಪಂಚ ಅಯೋಧ್ಯೆಯ ಕಡೆ ನೋಡುತ್ತಿತ್ತು. ಶ್ರೀರಾಮ ಮಂದಿರ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ತಳೆದಿದ್ದಾರೆ. ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ಹೋದರೆ, ಅಲ್ಪಸಂಖ್ಯಾತರ ಓಟ್ ಬ್ಯಾಂಕ್‌ಗೆ ಧಕ್ಕೆ ಉಂಟಾಗುತ್ತದೆ ಎಂದುಕೊಂಡಿದ್ದಾರೆ. ಈ ರೀತಿಯ ಚಿಂತನೆ ಕಾಂಗ್ರೆಸ್ ಪಕ್ಷ ದೇಶದಲ್ಲಿ ಅಧಿಕಾರ ಕಳೆದುಕೊಂಡಿದ್ದರು. ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ದೇಶದ ಚುನಾವಣೆಗೆ ದಿಕ್ಸೂಚಿ ಎಂದರು.

ನುಡಿದಂತೆ ನಡೆದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ: ಸಚಿವ ಸತೀಶ್‌ ಜಾರಕಿಹೊಳಿ

ಬಡವರ ಬಗ್ಗೆ, ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮೊಸಳೆ ಕಣ್ಣೀರು ಹಾಕುತ್ತಾರೆ. ರಾಜ್ಯದ ಸರ್ಕಾರಿ ನೌಕರರಿಗೆ ಸಂಬಳ ನೀಡದ ದಾರುಣ ಸ್ಥಿತಿ ಎದುರಾಗಿದೆ. ರೈತ, ಬಡವರ ವಿರೋಧಿ ನೀತಿ ಅನುಸರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 2047ಕ್ಕೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕು ಎಂದು ದೂರದೃಷ್ಟಿ ಹೊಂದಿದ್ದಾರೆ. 2024 ರಲ್ಲಿ ಮತ್ತೊಮ್ಮೆ ಪ್ರಧಾನಿಯಾಗಿ ನರೇಂದ್ರ ಮೋದಿ ಆಗುವುದು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲಕ್ಷ್ಮಣ ಸವದಿ ಮಾನಸಿಕವಾಗಿ ಬಿಜೆಪಿಯಲ್ಲೇ ಇದ್ದಾರೆ: ಲಕ್ಷ್ಮಣ ಸವದಿ ಅವರು ದೈಹಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೂ ಮಾನಸಿಕವಾಗಿ ಬಿಜೆಪಿಯಲ್ಲಿ ಇದ್ದಾರೆ. ನಾವು ಯಾರ ಹಿಂದೆಯೂ ಹೋಗಿಲ್ಲ ಬಿಜೆಪಿ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ. ಜನಾರ್ಧನ ರೆಡ್ಡಿ ಬಿಜೆಪಿಗೆ ಬರುವ ವಿಚಾರ ತಿಳಿದಿಲ್ಲ. ಜಗದೀಶ್ ಶೆಟ್ಟರ್ ಮೇಲೆ ಇ.ಡಿ. ಮತ್ತು ಐಟಿ ಇಲಾಖೆ ಬೆದರಿಕೆ ಹಾಕಲಾಗಿತ್ತು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಅವರು ಬಹಳ ಮುತ್ಸದ್ದಿ ರಾಜಕಾರಣಿ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಉತ್ತರ ಕೊಡುತ್ತದೆ ಎಂದರು.

ಮುಂದಿನ ಬಜೆಟ್‌ನಲ್ಲಿ ಕೋಲಾರ ನಗರಕ್ಕೆ ರಿಂಗ್ ರೋಡ್, ಮೆಡಿಕಲ್ ಕಾಲೇಜ್: ಸಚಿವ ಭೈರತಿ ಸುರೇಶ್

ಬಿಜೆಪಿ ವೀರಶೈವರ ಪಕ್ಷವಲ್ಲ, ಎಲ್ಲ ಸಮುದಾಯದವರನ್ನು ಒಗ್ಗೂಡಿಸಿಕೊಂಡು ಹೋಗುವ ಪಕ್ಷ. ಕಾಂಗ್ರೆಸ್‌ನವರು ಬೇರೆ ಬೇರೆ ಸಮುದಾಯದವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಜಗದೀಶ್ ಶೆಟ್ಟರ್ ಯಾವುದೇ ಬೇಡಿಕೆ ಇಲ್ಲದೇ, ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಕಕ್ಕಾಬಿಕ್ಕಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಇಂಟೆಲಿಜೆನ್ಸ್ ಫೇಲಾಗಿತ್ತು. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಿಜೆಪಿಯಲ್ಲಿ ಸಕ್ರಿಯವಾಗಿ ಇರುತ್ತಾರೆ
- ಬಿ.ವೈ.ವಿಜಯೇಂದ್ರ, ರಾಜ್ಯಾಧ್ಯಕ್ಷ, ಬಿಜೆಪಿ

click me!