ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ಸಿಕ್ಕಿದೆ. ಪಂಚರಾಜ್ಯ ಚುನಾವಣೆ ಮುನ್ನ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಐಎನ್‌ಡಿಐ ಕೂಟ ಇತ್ತು. ಚುನಾವಣೆ ನಂತರ ಬಿಜೆಪಿಗೆ ಆನೆಬಲ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಟಯರ್ ಪಂಚರ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.
ಬೆಳಗಾವಿ (ಡಿ.10): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ಸಿಕ್ಕಿದೆ. ಪಂಚರಾಜ್ಯ ಚುನಾವಣೆ ಮುನ್ನ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಐಎನ್‌ಡಿಐ ಕೂಟ ಇತ್ತು. ಚುನಾವಣೆ ನಂತರ ಬಿಜೆಪಿಗೆ ಆನೆಬಲ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಟಯರ್ ಪಂಚರ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.
ನಗರದಲ್ಲಿ ಬೆಳಗಾವಿ ಹಾಗೂ ಧಾರವಾಡ ವಿಭಾಗದ ನಗರಸಭೆ ಸದಸ್ಯರ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಂಚ ರಾಜ್ಯಗಳ ಫಲಿತಾಂಶ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿ ಬೇಕು ಎನ್ನುವ ಸಂದೇಶ ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ನಮಗೆ ನಿಜವಾಗಲೂ ಹಿನ್ನಡೆ ಆಗಿದೆ. ಕಳೆದೊಂದು ತಿಂಗಳಿನಿಂದ ಬದಲಾವಣೆ ಆಗಿದೆ. ಕರ್ನಾಟಕದ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಕಾಂಗ್ರೆಸ್‌ನವರು ಆತಂಕದಲ್ಲಿದ್ದಾರೆ ಎಂದರು.
ರೈತರು ವಿಮಾ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಶಾಸಕ ಆರಗ ಜ್ಞಾನೇಂದ್ರ
ಕಳೆದ 4 ವರ್ಷಗಳ ಕಾಲ ನಳೀನ ಕುಮಾರ ಕಟೀಲ ಪಕ್ಷದ ಸಂಘಟನೆ ಶಕ್ತಿ ಕೊಟ್ಟರು. ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ವಿಚಾರದಲ್ಲಿ ಚರ್ಚೆ ಟೀಕೆ ಆಗುತ್ತಿತ್ತು. ನಂತರ ರಾಷ್ಟ್ರೀಯ ನಾಯಕರು ನನಗೆ ದೊಡ್ಡ ಜವಾಬ್ದಾರಿ ವಹಿಸಿದ್ದಾರೆ. ವಿಧಾಸಭಾ ಚುನಾವಣೆ ಆದ ನಂತರ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಾಗ ನಮಗೆ ಗಾಬರಿ ಆಗಿತ್ತು. ಆದರೆ, ಕಳೆದ 20 ದಿನಗಳಿಂದ ಯಾವ ರೀತಿ ಬದಲಾವಣೆ ಆಗಿದೆ ಎಂಬುವುದನ್ನು ನೋಡಿದ್ದೇವೆ ಎಂದರು.
ಹೊಸ ಸರ್ಕಾರದ ಬಂದಾಗ ಜನರು ಸಕಾರಾತ್ಮಕ ಮಾತನಾಡುತ್ತಾರೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕೆ ಅಧಿಕಾರಕ್ಕೆ ಬಂತು ಎಂದು ಜನ ಶಾಪ ಹಾಕ್ತಿದ್ದಾರೆ. ಆರೇ ತಿಂಗಳಲ್ಲಿ ಕಾಂಗ್ರೆಸ್ ಜನಪ್ರಿಯತೆ ಕಳೆದುಕೊಂಡಿದೆ. ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣ ನಿರ್ಮಾಣವಾಗುತ್ತಿದೆ. ಬರಗಾಲ ಇದ್ದರೂ ಪರಿಹಾರ ನೀಡುತ್ತಿಲ್ಲ. ರೈತ ಪರವಾಗಿ ಚಿಂತನೆ ರಾಜ್ಯ ಸರ್ಕಾರಕ್ಕಿಲ್ಲ. ಜಾನುವಾರುಗಳಿಗೆ ಹಾಕುವ ಮೇವಿನ ಬೆಲೆ ಏರಿಕೆ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆ ಹಣ ಬಂದ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಆಗ ಪ್ರಧಾನಿ ನರೇಂದ್ರ ಮೋದಿ ತಡೆಯುವ ಶಕ್ತಿ ಯಾರಿಗೂ ಇರುವುದಿಲ್ಲ. ನಮ್ಮ ಜವಾಬ್ದಾರಿ ಅರಿತು ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು.
ಬೆಳಗಾವಿಯಲ್ಲಿ ನಗರ ಸೇವಕನ ಮೇಲೆ ಹಲ್ಲೆಯಾಗಿದ್ದರೂ ಯಾವ ರೀತಿ ಡಿಸ್ಚಾರ್ಜ್ ಮಾಡಿದ್ದಾರೆ. ಕಾಂಗ್ರೆಸ್ ಪುಡಾರಿಗಳು ಏನು ಮಾಡಿದ್ದಾರೆ ಎನ್ನುವುದನ್ನು ನೋಡಿದ್ದೇನೆ. ಬಿಜೆಪಿ ಮುಖಂಡ ಪೃಥ್ವಿಸಿಂಗ್ ಮೇಲೆ ಪ್ರಭಾವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಹೋದರ, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಮತ್ತು ಬೆಂಬಲಿಗರಿಂದ ಹಲ್ಲೆ ಆಗಿದೆ. ರಾಜ್ಯ ಸರ್ಕಾರದ ಅಧಿಕಾರ ದರ್ಪ ಇದರಲ್ಲಿ ಎದ್ದು ತೋರಿಸುತ್ತಿದೆ ಎಂದು ಆರೋಪಿಸಿದರು.ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ್ ನೇರಳೆ, ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕರಾದ ಶ್ರೀಕಾಂತ್ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯರಾದ ನವೀನ್ ಕೊಟ್ಟಿಗೆ, ರಾಜ್ಯ ವಕ್ತಾರರಾದ ಎಂ.ಬಿ.ಜಿರಲಿ, ಚಂದ್ರಶೇಖರ ಕವಟಗಿ, ಬಸವರಾಜ ಯಂಕಂಚಿ, ಡಾ.ರವಿ ಪಾಟೀಲ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ನಗರಸಭಾ ಸದಸ್ಯರು ಭಾಗವಹಿಸಿದ್ದರು.
ಚಾರಿತ್ರ್ಯಹರಣ ಶಾಸಕ ಯತ್ನಾಳ್‌ಗೆ ಶೋಭೆ ತರಲ್ಲ: ಸಚಿವ ಎಂ.ಬಿ.ಪಾಟೀಲ್
ನಾವು ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಬರುತ್ತೇವೆ. ಬೆಳಗಾವಿ ರಾಜಕೀಯ ಪರಿಸ್ಥಿತಿ ಏನು ಎಂಬುವುದು ಗೊತ್ತಿದೆ. ನಮ್ಮ ಶಾಸಕರು, ಕಾರ್ಯಕರ್ತರು ಕುಳಿತು ಚರ್ಚೆ ಮಾಡಲಾಗುವುದು. ಬಿಜೆಪಿ ಕಾರ್ಯಕರ್ತರು ಗೌರವದಿಂದ ಓಡಾಡುವಂತಹ ವಾತಾವರಣ ಮಾಡುತ್ತೇವೆ. ಸಂಘಟನಾತ್ಮಕವಾಗಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಬೂತ್ ಮಟ್ಟದಿಂದಲೂ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷರು.