ರಾಜ್ಯದಲ್ಲಿರುವುದು ಹಿಂದುಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಹಿಟ್ಲರ್ ಸರ್ಕಾರ: ವಿಜಯೇಂದ್ರ

Published : Apr 11, 2025, 10:24 AM IST
ರಾಜ್ಯದಲ್ಲಿರುವುದು ಹಿಂದುಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಹಿಟ್ಲರ್ ಸರ್ಕಾರ: ವಿಜಯೇಂದ್ರ

ಸಾರಾಂಶ

ರಾಜ್ಯದಲ್ಲಿ ಹಿಂದುಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಹಿಟ್ಲರ್ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ಉತ್ತರ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. 

ಉಡುಪಿ (ಏ.11): ರಾಜ್ಯದಲ್ಲಿ ಹಿಂದುಗಳ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಹಿಟ್ಲರ್ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ಉತ್ತರ ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಉಡುಪಿಯಲ್ಲಿ ಬಿಜೆಪಿ ವತಿಯಿಂದ ನಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ಬಿಜೆಪಿ ಕಾರ್ಯಕರ್ತರ, ಪತ್ರಕರ್ತರ ಮೇಲೆ ಕೇಸುಗಳನ್ನು ಹಾಕುತ್ತಿದೆ. ಕಾರ್ಯಕರ್ತರು ಪೊಲೀಸ್ ದಬ್ಬಾಳಿಕೆಗೆ ಹೆದರಬೇಕಾಗಿಲ್ಲ, ಮುಂದೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಮುಂದೆ ಇರುವ ಸವಾಲು ಮತ್ತು ಗುರಿಯಾಗಿದೆ. 

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ, ಆಗ ಬಡ್ಡಿ ಸಮೇತ ಉತ್ತರ ನೀಡೋಣ ಎಂದರು. ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಧೋರಣೆ ನೋಡಿದರೆ, ತಾನು ಕೇವಲ ಸಾಬರಿಂದಲೇ ಅಧಿಕಾರಕ್ಕೆ ಬಂದಿದ್ದೇನೆ, ಅವರಿಗೆ ಮಾತ್ರ ತಾನು ಮುಖ್ಯಮಂತ್ರಿ ಎಂಬಂತಿದೆ ಅವರ ವರ್ತನೆ. ಅಹಿಂದದ ಹೆಸರು ಹೇಳಿ ಅಧಿಕಾರಕ್ಕೆ ಬಂದು ಹಿಂದುಳಿದವರನ್ನೇ ಮರೆತಿದ್ದಾರೆ. ಇದು ಜನಪ್ರಿಯ ಸರ್ಕಾರ ಅಲ್ಲ, ಇದು ಜಾಹೀರಾತು ಸರ್ಕಾರ, ಇದು ಅಭಿವೃದ್ಧಿ ಪರವಲ್ಲ, ಅಭಿವೃದ್ಧಿ ಶೂನ್ಯ ಸರ್ಕಾರ, ಇದು ಬಡವರ ಪರವಲ್ಲ, ಬೆಲೆ ಏರಿಸಿ ಬಡವರಿಗೆ ಬರೆ ಎಳೆದ ಸರ್ಕಾರ ಎಂದವರು ಟೀಕಿಸಿದರು. 

ಡಿಕೆಶಿ ಭಯದಿಂದ ಸಿದ್ದರಾಮಯ್ಯ ಬೆಂಗ್ಳೂರು ಬಿಡ್ತಿಲ್ಲ: ಬಿ.ವೈ.ವಿಜಯೇಂದ್ರ

ನಮ್ಮ ಜನಾಕ್ರೋಶ ಯಾತ್ರೆ ಯಾವುದೇ ಗಿಮಿಕ್ ಅಲ್ಲ, ಗಿಮಿಕ್ ಮಾಡುವುದಕ್ಕೆ ಈಗ ಯಾವುದೇ ಚುನಾವಣೆಗಳು ನಡೆಯುತ್ತಿಲ್ಲ. ರಾಜ್ಯ ಸರ್ಕಾರದ ಬೆಲೆ ಏರಿಕೆ, ಮುಸಲ್ಮಾನರ ಓಲೈಕೆ, ಎಸ್ಸಿಎಸ್ಟಿ ಅನುದಾನದ ದುರ್ಬಳಕೆ, ಭ್ರಷ್ಟಾಚಾರ ವಿರುದ್ಧ ಜನತೆಗೆ ನ್ಯಾಯ ಕೊಡಿಸುವುದೇ ಈ ಯಾತ್ರೆಯ ಉದ್ದೇಶ ಎಂದವರು ಹೇಳಿದರು. ಸಿದ್ದರಾಮಯ್ಯ ಚುನಾವಣೆಗೆ ಮೊದಲು ಕೃಷ್ಣೆಯ ಕಡೆಗೆ ಪಾದಯಾತ್ರೆ ಮಾಡಿದರು, ಡಿ.ಕೆ. ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಮಾಡಿದರು. ಅಧಿಕಾರಕ್ಕೆ ಬಂದ ಮೇಲೆ ಇಬ್ಬರಿಗೂ ರಾಜ್ಯಕ್ಕೆ ಒಂದೇ ಒಂದು ನೀರಾವರಿ ಯೋಜನೆ ಕೊಡುವುದಕ್ಕಾಗಿಲ್ಲ. ಇವರು ಮಾಡಿದ್ದು ಗಿಮಿಕ್ ಯಾತ್ರೆ ಎಂದು ತಿರುಗೇಟು ನೀಡಿದರು.

ದೇವಾಲಯಗಳಿಗೆ ಒಂದು ನಯಾಪೈಸೆ ನೀಡಿಲ್ಲ: ಲವ್ ಜಿಹಾದಿಗೆ ಬಲಿಯಾದ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ, ಬಜೆಟ್ಟಿನಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಆತ್ಮಸಂರಕ್ಷಣೆಗೆ ಹಣ ಇಟ್ಟಿದೆ, ದೇವಾಲಯಗಳಿಗೆ ಒಂದು ನಯಾಪೈಸೆ ನೀಡಿಲ್ಲ, ಮೌಲ್ವಿಗಳ ಸಂಬಳ ಜಾಸ್ತಿ ಮಾಡಿದೆ, ಮುಸ್ಲಿಮರಿಗೆ ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಶೇ 4 ಮೀಸಲಾತಿ ಹೆಚ್ಚಿಸಿದೆ. ಇದರ ವಿರುದ್ಧ ಹೋರಾಟ ಮಾಡಿದ ಬಿಜೆಪಿ ಶಾಸಕರನ್ನೇ ಆರು ತಿಂಗಳು ಸಸ್ಪೆಂಡ್ ಮಾಡಿದ್ದಾರೆ. ಇವರು ಅಂಬೇಡ್ಕರ್ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ ಎಂದವರು ಟೀಕಿಸಿದರು.

ಕಾಂಗ್ರೆಸ್‌ನಿಂದ ಕರ್ನಾಟಕ ರಾವಣ ರಾಜ್ಯ: ಜನಾಕ್ರೋಶ ಯಾತ್ರೆಯಲ್ಲಿ ಗುಡುಗಿದ ವಿಜಯೇಂದ್ರ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಸಕರಾದ ವಿ.ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಹರೀಶ್‌ ಪೂಂಜಾ, ಗುರುರಾಜ ಗಂಟಿಹೊಳೆ, ಸುರೇಶ್‌ ಶೆಟ್ಟಿ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ, ವಿಪ ಸದಸ್ಯರಾದ ರವಿಕುಮಾರ್, ಕಿಶೋರ್ ಕುಮಾರ್, ಡಾ.ಧನಂಜಯ ಸರ್ಜಿ, ಮಾಜಿ ಸಚಿವ ಪ್ರಮೋದ್ ಮದ್ವರಾಜ್, ಪಕ್ಷದ ನಾಯಕರಾದ ಉದಯಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್‌ ನಾಯಕ್, ದಿನೇಶ್‌ ಅಮೀನ್, ಜಿತೇಂದ್ರ ಶೆಟ್ಟಿ, ದೀಪಕ್‌ ಕುಮಾರ್ ಶೆಟ್ಟಿ, ಸುರೇಶ್‌ ಶೆಟ್ಟಿ ಗೋಪಾಡಿ, ರಾಜೀವ್ ಕುಲಾಲ್, ನವೀನ್‌ ನಾಯಕ್‌, ಪ್ರಭಾಕರ ಪೂಜಾರಿ, ಶಿಲ್ಪಾ ಜಿ. ಸುವರ್ಣ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು, ರೇಶ್ಮಾ ಉದಯ ಶೆಟ್ಟಿ ವಂದಿಸಿದರು, ಪ್ರಸಾದ್‌ ಶೆಟ್ಟಿ ಕುತ್ಯಾರು ಕಾರ್ಯಕ್ರಮ ನಿರೂಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!