ಸ್ಪೀಕರ್ ಸ್ಥಾನಕ್ಕೆ ಜಾತಿ, ಧರ್ಮದ ಬಣ್ಣ ಹಚ್ಚಿದ ಸಚಿವ ಜಮೀರ್ ಅಹಮದ್‌ನನ್ನು ರಸ್ತೆಯಲ್ಲಿ ಓಡಾಡಲು ಬಿಟ್ಟಿರುವುದೇ ಹೆಚ್ಚು, ಎಲ್ಲರೂ ತಲೆತಗ್ಗಿಸುವ ಕೆಲಸ ಮಾಡಿರುವ ಅವರಿಂದ ಮುಖ್ಯಮಂತ್ರಿಗಳು ಈಗಾಗಲೇ ರಾಜೀನಾಮೆ ಪಡೆಯಬೇಕಿತ್ತು.
ಮಂಗಳೂರು (ನ.23): ಸ್ಪೀಕರ್ ಸ್ಥಾನಕ್ಕೆ ಜಾತಿ, ಧರ್ಮದ ಬಣ್ಣ ಹಚ್ಚಿದ ಸಚಿವ ಜಮೀರ್ ಅಹಮದ್‌ನನ್ನು ರಸ್ತೆಯಲ್ಲಿ ಓಡಾಡಲು ಬಿಟ್ಟಿರುವುದೇ ಹೆಚ್ಚು, ಎಲ್ಲರೂ ತಲೆತಗ್ಗಿಸುವ ಕೆಲಸ ಮಾಡಿರುವ ಅವರಿಂದ ಮುಖ್ಯಮಂತ್ರಿಗಳು ಈಗಾಗಲೇ ರಾಜೀನಾಮೆ ಪಡೆಯಬೇಕಿತ್ತು.
ಡಿ.4ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಜಮೀರ್ ಅಹಮದ್ ಹೇಗೆ ಭಾಗವಹಿಸುತ್ತಾರೆ ಎಂಬುದನ್ನು ನೋಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ. ಮಂಗಳೂರಿನ ಬಂಟ್ಸ್‌ಹಾಸ್ಟೆಲ್‌ನ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಮೀರ್ ಅಹಮದ್ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಸದನದಲ್ಲಿ ಹೋರಾಟ ಮಾಡುವುದಾಗಿ ಹೇಳಿದರು.
ವಿಜಯೇಂದ್ರ ಇನ್ನು ಮಗು, ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ: ಸಚಿವ ಚಲುವರಾಯಸ್ವಾಮಿ
ಯಾರೂ ಪಕ್ಷ ಬಿಡೋದಿಲ್ಲ: ನಾವೆಲ್ಲರೂ ಒಗ್ಗಟ್ಟಿನಿಂದ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ 28ಕ್ಕೆ 28 ಸ್ಥಾನವನ್ನೂ ಗೆಲ್ಲಿಸಿಕೊಟ್ಟು ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲು ಶಕ್ತಿ ನೀಡುತ್ತೇವೆ. ಹಿಂದೆ ಏನಾಗಿದೆ ಎನ್ನುವುದನ್ನು ಬಿಟ್ಟುಬಿಡಿ, ಮುಂದೆ ಯಾರೂ ಪಕ್ಷ ಬಿಡುವುದಿಲ್ಲ. ಯಾವ ಮುಖಂಡರು, ಕಾರ್ಯಕರ್ತರೂ ಪಕ್ಷ ಬಿಟ್ಟು ಹೋಗುವುದಿಲ್ಲ.
ಈಗಾಗಲೇ ಪಕ್ಷ ಬಿಟ್ಟು ಹೋದವರನ್ನು ಮರಳಿ ಕರೆತರುತ್ತೇವೆ ಎದು ವಿಜಯೇಂದ್ರ ಹೇಳಿದರು. ಲಕ್ಷ್ಮಣ ಸವದಿಯನ್ನು ಪಕ್ಷಕ್ಕೆ ಕರೆತರುತ್ತೀರಾ ಎಂಬ ಪ್ರಶ್ನೆಗೆ ಅವರನ್ನು ನಾವಿನ್ನೂ ಪಕ್ಷಕ್ಕೆ ಕರೆದೇ ಇಲ್ಲ ಎಂದ ಅವರು, ಯಾರೋ ಒಬ್ಬರು ಪಕ್ಷ ಬಿಟ್ಟು ಹೋದಾಕ್ಷಣ ಪಕ್ಷಕ್ಕೆ ಹಿನ್ನಡೆಯಾಗುವುದಿಲ್ಲ. ಪುತ್ತೂರಲ್ಲಿ ಅರುಣ್ ಕುಮಾರ್ ಪುತ್ತಿಲ ಬಿಕ್ಕಟ್ಟನ್ನು ಪಕ್ಷ ಹಿರಿಯರ ಸೂಚನೆ ಪಡೆದುಕೊಂಡು ಬಗೆಹರಿಸುತ್ತೇವೆ ಎಂದರು.
ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸೋದಲ್ಲ: ಸಂಸದೆ ಸುಮಲತಾ ಅಂಬರೀಶ್
ಜಾತಿ ಗಣತಿಗೆ ವಿರೋಧವಿಲ್ಲ: ಜಾತಿ ಗಣತಿಗೆ ಬಿಜೆಪಿ ವಿರೋಧವಿಲ್ಲ. ಆದರೆ ಸಿದ್ದರಾಮಯ್ಯ ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೇ ಜಾತಿ ಗಣತಿ ಮುಗಿದಿತ್ತು. ಆಗ ಯಾವುದೇ ಸ್ಪಷ್ಟ ನಿಲುವು ತೆಗೆದುಕೊಳ್ಳದೆ ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಮತ್ತೆ ಜಾತಿ ಗಣತಿ ವಿಚಾರ ಯಾಕೆ ಪ್ರಸ್ತಾಪಿಸುತ್ತೀರಿ ? ಕಾಂತರಾಜ್ ಸಮಿತಿ ವರದಿ ತಯಾರಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳದೆ ರಾಜಕೀಯ ದುರುದ್ದೇಶಕ್ಕೆ ಜಾತಿ ಗಣತಿ ಬಳಸಲು ಹೊರಟರೆ ಅದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದರು.