
ಬೆಂಗಳೂರು(ಜ.28): ಲೋಕಸಭೆ ಚುನಾವಣೆ ಮುಗಿಯುವವರೆಗೆ ಪಕ್ಷದ ಮುಖಂಡರು, ಪದಾಧಿಕಾರಿಗಳೆಲ್ಲಾ ಒಂದು ಕ್ಷಣವೂ ವಿರಮಿಸದೆ ಕೆಲಸ ಮಾಡಬೇಕಾಗಿದ್ದು, ಪಕ್ಷದ ಗೆಲು ವಿಗೆ ಶ್ರಮಿಸಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.
ಶನಿವಾರ ಅರಮನೆ ಮೈದಾನದಲ್ಲಿ ತಾವು ಪಕ್ಷದ ರಾಜ್ಯಾಧ್ಯಕ್ಷರಾದ ಬಳಿಕ ನಡೆದ ಮೊದಲ ರಾಜ್ಯ ಕಾರಕಾರಿಣಿ ಸಭೆಯ ಉದ್ಘಾಟನಾ ಕಾಠ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಎದುರಾಳಿಗಳನ್ನು ಹಗುರವಾಗಿ ಪರಿಗಣಿಸದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತದ ವೇಳೆ ಮಾಡಿರುವ ಸಾಧನೆಗಳನ್ನು ಜನತೆ ಮುಂದಿಟ್ಟು, ಹಗಲು-ರಾತ್ರಿ ಶ್ರಮಿಸಿ ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಲು ಕೆಲಸ ಮಾಡಬೇಕು ಎಂದು ಹೇಳಿದರು.
ಶೆಟ್ಟರ್ ಸೇರ್ಪಡೆಯಿಂದ ಬಿಜೆಪಿಗೆ ಆನೆ ಬಲ: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ದೇಶದ ನೇತೃತ್ವತೆಗೆ ದುಕೊಂಡ ಬಳಿಕ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಉತ್ತಮ ಆಡಳಿತ ನೀಡುತ್ತಿದ್ದಾರೆ. ಜತೆಗೆ ದೇಶವನ್ನು ಜಗತ್ತಿನ ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ. ವಿಶ್ರಾಂತಿ ಪಡೆಯದೆ ದೇಶದ ಅಭಿವೃದ್ಧಿಯತ್ತ ಕಾರನಿರತರಾಗಿದ್ದಾರೆ. ಪ್ರಣಾಳಿಕೆಯಲ್ಲಿದ್ದ ಆಶ್ವಾಸನೆಗಳನ್ನು ಈಡೇರಿಸುವ ಕೆಲಸಮಾಡುತ್ತಿದ್ದಾರೆ. ಕಾಶ್ಮೀರಕ್ಕಿದ್ದ ಸಂವಿಧಾನದ 370 ವಿಧಿ ರದ್ದು ಮಾಡಲಾಗಿದೆ ಎಂದು ಕೇಂದ್ರದ ಸಾಧನೆಗಳನ್ನು ಶ್ಲಾಘಿಸಿದರು.
ನೂರಾರು ವರ್ಷಗಳ ತಪಸ್ಸಿನ ಫಲವಾಗಿ ಮೋದಿ ನೇತೃತ್ವದಲ್ಲಿ ಆಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಆಗಿರುವ ಶುಭ ಘಳಿಗೆಯಲ್ಲಿ ನಾವೆಲ್ಲ ನೂರಾರು ವರ್ಷಗಳ ತಪಸ್ಸಿನ ಫಲವಾಗಿ ಮೋದಿ ಇದ್ದೇವೆ. ಕಳೆದ ಹಲವಾರು ದಶಕಗಳಿಂದ ನಿರಂತರ ಹೋರಾಟದ ಪರಿಣಾಮ ಶ್ರೀರಾಮಮಂದಿರ ನಿರ್ಮಾಣಗೊಂಡಿದೆ. ರಾಮಮಂದಿರ ಲೋಕಾರ್ಪಣೆಗೆ ನಿರಂತರ ಹೋರಾಟ ನಡೆದಿತ್ತು ಎಂದರು.
ಮೋದಿ ರಾಮರಾಜ್ಯದ ಕನಸು ಶೀಘ್ರ ನನಸು: ವಿಜಯೇಂದ್ರ
ಒಂದೆಡೆ ಆಯೋಧ್ಯೆ ವಿಚಾರದಲ್ಲಿ ಜನರೆಲ್ಲರೂ ಸಂತೋಷದಿಂದ ಇದ್ದರೆ, ಕಾಂಗ್ರೆಸ್ ಸರ್ಕಾರ ಹುಬ್ಬಳ್ಳಿ ಯಲ್ಲಿ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿ ಸೇಡು ತೀರಿಸುವ ಕೆಲಸ ಮಾಡಿದೆ. ಸರ್ಕಾರ ಬಂದ ಬಳಿಕ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಲ್ಲದೇ, ಕಾಂಗ್ರೆಸ್ ಸರ್ಕಾರ ಬರದ ಕಡೆ ಹೆಚ್ಚಿನ ಗಮನ ಹರಿಸದೆ ರೈತರ ಸಂಕಷ್ಟಕ್ಕೆ ಸ್ಪಂದನೆ ಮಾಡುತ್ತಿಲ್ಲ ಎಂದು ಟೀಕಾಪ್ರಹಾರ ನಡೆಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿದಂತೆ ಮಾಜಿ ಸಚಿವರು. ಮುಖಂಡರು ಉಪಸ್ಥಿತರಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.