ಬಿಜೆಪಿಗೆ ಎಂಟಿಬಿ ನಾಗರಾಜ್ ಕೇವಲ ವ್ಯಕ್ತಿಯಲ್ಲ, ಶಕ್ತಿ: ಬಿ.ವೈ.ವಿಜಯೇಂದ್ರ

By Kannadaprabha NewsFirst Published Jan 8, 2024, 8:29 PM IST
Highlights

ಎಂಟಿಬಿ ನಾಗರಾಜ್ ಅವರು ಬಿಜೆಪಿ ಪಕ್ಷಕ್ಕೆ ಕೇವಲ ವ್ಯಕ್ತಿಯಲ್ಲ ಬದಲಾಗಿ ಒಚಿದು ದೊಡ್ಡ ಶಕ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಲೋಕಸಭಾ ಚುನಾವಣೆ ಸಮೀಪ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. 
 

ಹೊಸಕೋಟೆ (ಜ.08): ಎಂಟಿಬಿ ನಾಗರಾಜ್ ಅವರು ಬಿಜೆಪಿ ಪಕ್ಷಕ್ಕೆ ಕೇವಲ ವ್ಯಕ್ತಿಯಲ್ಲ ಬದಲಾಗಿ ಒಚಿದು ದೊಡ್ಡ ಶಕ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಲೋಕಸಭಾ ಚುನಾವಣೆ ಸಮೀಪ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಎಂಟಿಬಿ ನಾಗರಾಜ್ ಬಿಜೆಪಿ ಪಕ್ಷದಲ್ಲಿ ಸಚಿವರಾಗಿ ಕೆಲಸ ಮಾಡಿದ್ದು ವಿಧಾನ ಪರಿಷತ್ ಸದಸ್ಯರು ಸಹ ಆಗಿದ್ದಾರೆ. ಇವರು ಹೊಸಕೋಟೆ ಕ್ಷೇತ್ರ ಸೇರಿದಂತೆ ಇಡೀ ರಾಜ್ಯದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಲ್ಲದೆ ಬಿಜೆಪಿ ಪಕ್ಷಕ್ಕೆ ದೊಡ್ಡ ಶಕ್ತಿ ಆಗಿದ್ದಾರೆ. 

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ನಮ್ಮ ಪಕ್ಷದ ಹಿರಿಯರಾದಂತಹ ಎಂಟಿಬಿ ನಾಗರಾಜ್ ಅವರ ಮನೆಗೆ ಬಂದಿದ್ದೇನೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ದೃಷ್ಟಿಯಿಂದ ನಮ್ಮೊಂದಿಗೆ ಪಕ್ಷಕ್ಕೆ ದುಡಿದು ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಮಂತ್ರಿ ಮಾಡಲು ಶ್ರಮಿಸುವುದಾಗಿ ತಿಳಿಸಿದ್ದಾರೆ. ಪಕ್ಷ ಸಂಘಟನೆಯ ಮೂಲಕ ಮತ್ತೊಮ್ಮೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಎಲ್ಲಾ ಕೆಲಸವನ್ನ ಮಾಡುತ್ತೇವೆ ಎಂದು ಹೇಳಿದರು.

Latest Videos

ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಬಿ.ವೈ.ವಿಜಯೇಂದ್ರ ಅವರು ಪಕ್ಷ ಸಂಘಟನೆ ದೃಷ್ಟಿಯಿಂದ ನಿರಂತರವಾಗಿ ಕಾರ್ಯಕರ್ತರನ್ನು ಸಂಪರ್ಕಿಸುವ ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಅವರ ಒಂದು ಅಧ್ಯಕ್ಷತೆಯಲ್ಲಿ ಪಕ್ಷ ಸಂಘಟನೆ ಆಗುತ್ತಿದ್ದು ದೇಶದಲ್ಲಿ ಸ್ಥಿರ ಹಾಗೂ ಸುಭದ್ರ ಆಡಳಿತವನ್ನು ನೀಡಲು ನರೇಂದ್ರ ಮೋದಿಜಿ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಲೇಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು. ಎಂದು ಹೇಳಿದರು.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎಚ್‌ಡಿಕೆ ಭೇಟಿ ಮಾಡುತ್ತಿರುವ ಬಿಜೆಪಿ ಪ್ರಮುಖರು: ಯಾಕೆ?

ಬಿಬಿಎಂಪಿ ಮಾಜಿ ಸದಸ್ಯ ನಿತೀಶ್ ಪುರುಷೋತ್ತಮ್, ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಸುಜಾತ ನಾಗರಾಜ್, ನಗರಸಭೆ ಸದಸ್ಯರಾದ ನವೀನ್, ಅರುಣ್ ಕುಮಾರ್, ಮುಖಂಡರಾದ ಕೋಡಿಹಳ್ಳಿ ಜನಾರ್ಧನ್, ಹುಲ್ಲೂರು ಕಿರಣ್, ಹೇಮಂತ್ ಕುಮಾರ್, ತವಟಹಳ್ಳಿ ರಾಮು, ಓಬಳಾಪುರ ಮಂಜುನಾಥ್, ನಂಜೇಗೌಡ, ಅನುರೆಡ್ಡಿ, ಸೂಲಿಬೆಲೆ ರವಿ, ಸುಜಾತ ರವೀಂದ್ರ, ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

click me!