ಪಕ್ಷದ ಕೆಲವರು ಪಾದಯಾತ್ರೆ ಮಾಡುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಇದರಿಂದ ಪಕ್ಷಕ್ಕೆ ಶಕ್ತಿ ಸಿಗುವುದಾದರೆ, ವರಿಷ್ಠರು ಅನುಮತಿ ನೀಡಿದರೆ ನನ್ನದೇನು ತಕರಾರು ಇಲ್ಲ. ವರಿಷ್ಠರು ಅನುಮತಿ ನೀಡಿದರೆ ಮಾತ್ರ ಪಾದಯಾತ್ರೆ ಮಾಡಲು ಅವರು ಸ್ವತಂತ್ರರು. ಆದರೆ, ಆ ಪಾದಯಾತ್ರೆ ಪಕ್ಷಕ್ಕೆ ಪೂರಕವಾಗಿರಬೇಕು ಮತ್ತು ಪಕ್ಷ ಸಂಘಟನೆಗೆ ಲಾಭದ ಸದುದ್ದೇಶ ಇರಬೇಕು ಎಂದು ಅಭಿಪ್ರಾಯಪಟ್ಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು(ಆ.14): ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಪಾದಯಾತ್ರೆಗೆ ಪಕ್ಷದ ವರಿಷ್ಠರು ಅನುಮತಿ ನೀಡಿದರೆ ನನ್ನದೇನು ತಕರಾರು ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕೆಲವರು ಪಾದಯಾತ್ರೆ ಮಾಡುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಇದರಿಂದ ಪಕ್ಷಕ್ಕೆ ಶಕ್ತಿ ಸಿಗುವುದಾದರೆ, ವರಿಷ್ಠರು ಅನುಮತಿ ನೀಡಿದರೆ ನನ್ನದೇನು ತಕರಾರು ಇಲ್ಲ. ವರಿಷ್ಠರು ಅನುಮತಿ ನೀಡಿದರೆ ಮಾತ್ರ ಪಾದಯಾತ್ರೆ ಮಾಡಲು ಅವರು ಸ್ವತಂತ್ರರು. ಆದರೆ, ಆ ಪಾದಯಾತ್ರೆ ಪಕ್ಷಕ್ಕೆ ಪೂರಕವಾಗಿರಬೇಕು ಮತ್ತು ಪಕ್ಷ ಸಂಘಟನೆಗೆ ಲಾಭದ ಸದುದ್ದೇಶ ಇರಬೇಕು ಎಂದು ಅಭಿಪ್ರಾಯಪಟ್ಟರು.
ದಲಿತ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ದ್ರೋಹ: ವಿಜಯೇಂದ್ರ ಆಕ್ರೋಶ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಆದ್ಯ ಕರ್ತವ್ಯ. ನಾನು ಅಧ್ಯಕ್ಷನಾದಾಗಿನಿಂದಲೂ ಸತತವಾಗಿ ಆ ಕೆಲಸ ಮಾಡುತ್ತಾ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಭಾನುವಾರ ಬೆಳಗಾವಿಯ ರೆಸಾರ್ಟ್‌ವೊಂದರಲ್ಲಿ ಬಿಜೆಪಿಯ ಕೆಲವು ಹಿರಿಯ ನಾಯಕರು ಪ್ರತ್ಯೇಕವಾಗಿ ಸಭೆ ನಡೆಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಬೇಕು. ಅಲ್ಲದೆ, ಶೀಘ್ರ ಈ ಸಂಬಂಧ ಪಕ್ಷದ ವರಿಷ್ಠರನ್ನು ಸಂಪರ್ಕಿಸಬೇಕು ಎಂಬ ನಿರ್ಧಾರ ಕೈಗೊಂಡಿದ್ದರು.
ಸಿದ್ದರಾಮಯ್ಯನವರೇ ಆರೋಪಿ ನಂಬರ್ 1- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ!
ಪಕ್ಷದ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಜಿ.ಎಂ.ಸಿದ್ದೇಶ್ವರ್, ಅಣ್ಣಾ ಸಾಹೇಬ್ ಜೊಲ್ಲೆ, ಕುಮಾರ್ ಬಂಗಾರಪ್ಪ, ಪ್ರತಾಪ್ ಸಿಂಹ ಮೊದಲಾದವರು ಆ ಸಭೆಯಲ್ಲಿ ಪಾಲ್ಗೊಂಡಿದ್ದರು.
ಚನ್ನಪಟ್ಟಣ ಅಭ್ಯರ್ಥಿ ವರಿಷ್ಠರಿಂದ ಆಯ್ಕೆ
ಚನ್ನಪಟ್ಟಣ ಉಪಚುನಾವಣೆಗೆ ಸಿ.ಪಿ.ಯೋಗೇಶ್ವರ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದನ್ನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಏಕೆಂದರೆ, ಕ್ಷೇತ್ರದಲ್ಲಿ ಅವರಿಗೆ ಹಿಡಿತವಿದೆ. ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಬಿಜೆಪಿ- ಜೆಡಿಎಸ್ ವರಿಷ್ಠರು ಚರ್ಚಿಸಿ ನಿರ್ಧರಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.