ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಮನವೊಲಿಸುವ ಪ್ರಯತ್ನ ನಡೆದಿದ್ದು, ಅದರ ಫಲಶೃತಿ ಬುಧವಾರ ಹೊರಬೀಳುವ ನಿರೀಕ್ಷೆಯಿದೆ.
ಬೆಂಗಳೂರು (ಮಾ.20): ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಮನವೊಲಿಸುವ ಪ್ರಯತ್ನ ನಡೆದಿದ್ದು, ಅದರ ಫಲಶೃತಿ ಬುಧವಾರ ಹೊರಬೀಳುವ ನಿರೀಕ್ಷೆಯಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಬೆಳಗ್ಗೆ ದೆಹಲಿಗೆ ತೆರಳುವ ಮೊದಲು ಸದಾನಂದ ಗೌಡರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಗೌಡರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಸಮಾಲೋ ಚನೆ ನಡೆಸಿ ತಿಳಿಸುವುದಾಗಿ ವಿಜಯೇಂದ್ರ ಅವರು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಸದಾನಂದಗೌಡರು ಮಂಗಳ ವಾರ ನಡೆಸಲು ಉದ್ದೇಶಿಸಿದ್ದ ಪತ್ರಿಕಾಗೋಷ್ಠಿಯನ್ನು ಬುಧವಾರಕ್ಕೆ ಮುಂದೂಡಿದರು. ಹೀಗಾಗಿ, ಬುಧವಾರ ಸದಾನಂದಗೌಡರ ಮುಂದಿನ ಹೆಜ್ಜೆ ಸ್ಪಷ್ಟವಾಗುವ ಸಾಧ್ಯತೆಯಿದೆ. ಈ ನಡುವೆ ಸದಾನಂದಗೌಡರು ಒಕ್ಕಲಿಗರ ಕಚೇರಿಗೆ ತೆರಳಿ ಅಲ್ಲಿನ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸಮಾಲೋಚನೆ ಮಾಡಿದರು ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಗಂಡಸರು ಇಲ್ವಾ?: ಲಕ್ಷ್ಮಣ ಸವದಿ
ಇದೇ ವೇಳೆ ಸದಾನಂದಗೌಡ ಕಾಂಗ್ರೆಸ್ ಸೇರ್ಪಡೆ ವದಂತಿ ಬಗ ಬಗ್ಗೆ ಕೇಳಲಾದಪ್ರಶ್ನೆಗೆ ಪ್ರತಿಕ್ರಿಯಿಸಿದವಿಜಯೇಂದ್ರ ಅವರು, ಕಳೆದ ಒಂದು ವಾರದ ಘಟನೆಗಳನ್ನು ಅವ ಲೋಕಿಸದರೆ ಕಾಂಗ್ರೆಸ್ ನಾಯಕರಿಗೆ ಅವರ ಪಕದ ಮುಖಂಡರಿಗಿಂತ ಬಿಜೆಪಿ ಮುಖಂಡರ ಬಗ್ಗೆ ಹೆಚ್ಚಿನ ವಿಶ್ವಾಸ ಇರುವುದನ್ನು ಕಾಣಬಹುದು. ಇದನ್ನು ಕಾಂಗ್ರೆಸ್ ನಾಯಕರ ಹೇಳಿಕೆಗಳಲ್ಲೂ ಗುರುತಿಸಬಹುದು.ಸದಾನಂದ ಗೌಡರು ಬಿಜೆಪಿಯಲ್ಲೇ ಇರುತ್ತಾರೆ. ಎಲ್ಲವೂ ಸರಿ ಹೋಗಲಿದೆ ಎಂದರು.
ಡೀವಿಗೆ ತಪ್ಪಿದ ಬಿಜೆಪಿ ಟಿಕೆಟ್: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಟಿಕೆಟ್ ನೀಡದೆ ಬಿಜೆಪಿ ಒಕ್ಕಲಿಗ ಸಮುದಾಯದ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯ ನೀತಿಯನ್ನು ಕುಶಾಲನಗರ ಗೌಡ ಸಮಾಜದ ಪ್ರಮುಖರು ಖಂಡಿಸಿದ್ದಾರೆ. ಕುಶಾಲನಗರ ಪತ್ರಿಕಾ ಭವನದಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಪ್ರಮುಖ ಆನಂದ ಕರಂದ್ಲಾಜೆ ಮಾತನಾಡಿ, ಹಿಂದಿನ ಲೋಕಸಭೆಯಲ್ಲಿ ಅತ್ಯುತ್ತಮ ಸಂಸದೀಯ ಪಟು ಆಗಿದ್ದ ಪ್ರತಾಪ್ ಸಿಂಹ ಅವರಿಗೆ ಕೂಡ ಟಿಕೆಟ್ ನಿರಾಕರಿಸಲಾಗಿದೆ.
ಬೆಂ.ಗ್ರಾ.ದಲ್ಲಿ ಡಿ.ಕೆ.ಬ್ರದರ್ಸ್‌ರಿಂದ ಕುಕ್ಕರ್ ಹಂಚಿಕೆ: ಕುಮಾರಸ್ವಾಮಿ ಗಂಭೀರ ಆರೋಪ
ಬಿಜೆಪಿಯ ಹೈಕಮಾಂಡ್ ಮೂಲಕ ಒಕ್ಕಲಿಗರನ್ನು ತುಳಿಯುವ ಸಂದೇಶ ಇದಾಗಿದೆ ಎಂದರು. ಬಿಜೆಪಿ ವರಿಷ್ಠರು ಸದಾನಂದ ಗೌಡರಿಗೆ ನೀಡಿದ ವಾಗ್ದಾನ ವನ್ನು ಕೊನೇ ಗಳಿಗೆಯಲ್ಲಿ ತಪ್ಪಿಸಿರುವುದು ಎಲ್ಲರ ಅಸಮಾಧಾನಕ್ಕೆ ಕಾರಣವಾಗಿದೆ ಎಂದರು. ಬಿಜೆಪಿ ಹೈಕಮಾಂಡ್ ತಕ್ಷಣ ಸದಾನಂದ ಗೌಡರಿಗೆ ಟಿಕೆಟ್ ಅಥವಾ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನನೀಡದಿದ್ದಲ್ಲಿ ಕೊಡಗಿನ ಗೌಡ ಸಮಾಜಗಳು ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.