ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಭೆ ನಡೆಸಿ ಮುಖಂಡರಲ್ಲಿನ ಭಿನ್ನಮತ ಶಮನಗೊಳಿಸಿದರು. ಜೆಡಿಎಸ್ ಜತೆಗಿನ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಮನವೊಲಿಸಿ ಪಕ್ಷಕ್ಕಾಗಿ ದುಡಿಯುವಂತೆ ಸೂಚಿಸಿದರು.
ಬೆಂಗಳೂರು (ಮಾ.27): ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಭೆ ನಡೆಸಿ ಮುಖಂಡರಲ್ಲಿನ ಭಿನ್ನಮತ ಶಮನಗೊಳಿಸಿದರು. ಜೆಡಿಎಸ್ ಜತೆಗಿನ ಮೈತ್ರಿಯಿಂದ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಮನವೊಲಿಸಿ ಪಕ್ಷಕ್ಕಾಗಿ ದುಡಿಯುವಂತೆ ಸೂಚಿಸಿದರು. ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಗೌಡ ಅವರು, ನನಗೆ ಕಾಂಗ್ರೆಸ್ ಪಕ್ಷ ಆಹ್ವಾನಿಸಿದ್ದು ನಿಜ. ಆದರೆ, ನಾನು ಬಿಜೆಪಿ ತೊರೆಯುವುದಿಲ್ಲ. ನಾನು ಯಾವಾಗಲೂ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಜೊತೆಗೆ ಇದ್ದೇನೆ. ಮುಂದೆಯೂ ಅವರೊಂದಿಗೆ ಇರುತ್ತೇನೆ ಎಂದರು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಿತ್ರ ಪಕ್ಷವಾಗಿರುವ ಜೆಡಿಎಸ್ ಬೆಂಬಲಿಸುವುದಕ್ಕೆ ತುಂಬಾ ನೋವಾಗುತ್ತದೆ. ಕಳೆದ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಬಹಳ ಕಷ್ಟಪಟ್ಟು ಚುನಾವಣೆ ನಡೆಸಿದ್ದಾರೆ. ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಬೇಕು ಎಂಬುದು ನಮ್ಮ ಗುರಿ. ಹೀಗಾಗಿ, ಈಗ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸುವ ಹಂತದಲ್ಲಿ ಬಂದು ನಿಂತಿದ್ದೇವೆ ಎಂದರು. ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ವಿಜಯೇಂದ್ರ ಅವರು ನಮಗೆ ಸೂಚನೆ ಕೊಟ್ಟಿದ್ದಾರೆ. ಇದನ್ನು ಕಾರ್ಯಕರ್ತರ ಸಭೆ ನಡೆಸಿ ತಿಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ದಾವಣಗೆರೆ ಬಂಡಾಯ ಬಗೆಹರಿಸಿದ ಬಿಎಸ್‌ವೈ: ರವೀಂದ್ರನಾಥ್ ನೇತೃತ್ವದಲ್ಲಿ ಚುನಾವಣೆಗೆ ಸರ್ವಸಮ್ಮತಿ
ತಮಿಳುನಾಡು ಮೇಕೆದಾಟು ಕಿರಿಕ್‌ಗೆ ಆಕ್ರೋಶ: ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ಮಿತ್ರಪಕ್ಷವಾದ ನೆರೆಯ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿರುವ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ನಿಲುವನ್ನು ತಿಳಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಡಿಗರಾಗಿ ಅವರ ಮೈತ್ರಿಕೂಟದ ಹೆಸರಿನಲ್ಲಿ ಬಿಡುಗಡೆಯಾಗಿರುವ ಪ್ರಣಾಳಿಕೆಯಲ್ಲಿನ ಕರ್ನಾಟಕ ವಿರೋಧಿ ಭರವಸೆಯನ್ನು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಪುಟ್ಟರಾಜುಗೆ ನೋಡಿದ ಹುಡ್ಗೀನಾ ಎಚ್‌ಡಿಕೆ ಮದುವೆಯಾಗೋದು ಸರಿನಾ?: ಸಚಿವ ಎನ್.ಚಲುವರಾಯಸ್ವಾಮಿ
ಸಾಮಾಜಿಕ ಜಾಲತಾಣದ ಮೂಲಕ ಕಿಡಿಕಾರಿರುವ ವಿಜಯೇಂದ್ರ, ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿಕೊಂಡಿರುವುದನ್ನು ಗಮನಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಷ್ಟು ದುರ್ಬಲ ಎಂಬುದನ್ನು ಪರಿಪೂರ್ಣವಾಗಿ ಮನಗಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಸ್ಟ್ರಾಂಗ್ ಎಂಬುದನ್ನು ಸ್ವಬಣ್ಣನೆ ಮಾಡಿಕೊಳ್ಳುತ್ತಾರೆ. ವಿಪರ್ಯಾಸವೆಂದರೆ ತಮಿಳುನಾಡು ಮುಖ್ಯಮಂತ್ರಿಗಳು ಅವರೆಷ್ಟು ವೀಕ್ ಎಂಬುದನ್ನು ಮನಗಂಡಿದ್ದು, ಮೈತ್ರಿಕೂಟ ಗೆದ್ದರೆ ಮೇಕೆದಾಟ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಘೋಷಿಸಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.