ಬಿಜೆಪಿ ಬೆಂಬಲಿಸುತ್ತಿರುವ ರಾಮಭಕ್ತ, ಶ್ರೀಕಾಂತ ಪೂಜಾರಿ 16 ಕೇಸ್‌ಗಳಿರುವ ಸಮಾಜಘಾತುಕ: ಸಿಎಂ ಸಿದ್ದರಾಮಯ್ಯ

Published : Jan 03, 2024, 05:44 PM IST
ಬಿಜೆಪಿ ಬೆಂಬಲಿಸುತ್ತಿರುವ ರಾಮಭಕ್ತ, ಶ್ರೀಕಾಂತ ಪೂಜಾರಿ 16 ಕೇಸ್‌ಗಳಿರುವ ಸಮಾಜಘಾತುಕ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಬಿಜೆಪಿ ಬೆಂಬಲಿಸುತ್ತಿರುವ ನಕಲಿ ರಾಮಭಕ್ತ ಶ್ರೀಕಾಂತ ಪೂಜಾರಿ ಅಸಲಿಯಾಗಿ 16 ಪೊಲೀಸ್‌ ಕೇಸ್‌ಗಳಲ್ಲಿ ಆರೋಪಿಯಾಗಿರುವ ಸಮಾಜಘಾತುಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ಜ.03): ರಾಜ್ಯದಲ್ಲಿ ಬಿಜೆಪಿ ರಾಮಭಕ್ತ, ಹಿಂದೂ ಕಾರ್ಯಕರ್ತ, ರಾಮ ಜನ್ಮಭೂಮಿ ಹೋರಾಟಗಾರ ಎಂದು ಬೆಂಬಲಿಸುತ್ತಿರುವ ಆಟೋ ಚಾಲಕ ಶ್ರೀಕಾಂತ ಪೂಜಾರಿ ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ, ಮಟ್ಕಾ, ಜೂಜಾಟ ಮತ್ತಿ ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ 16 ಕೇಸ್‌ಗಳಲ್ಲಿ ಪೊಲೀಸರಿಗೆ ಬೇಕಾಗಿರುವ ದೊಡ್ಡ ಸಮಾಜಘಾತುಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಮೂಲಕ ಶ್ರೀಕಾಂತ ಪೂಜಾರಿ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮಾಡುತ್ತಿರುವ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ಜಾಲತಾಣ ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ. ಅದರಲ್ಲಿ ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ. ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ' ಎಂದು ಬರೆದುಕೊಂಡಿದ್ದಾರೆ.

ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ ಪೂಜಾರಿ ಸಮಾಜಘಾತುಕ ಶಕ್ತಿ: ಸಚಿವ ಈಶ್ವರ ಖಂಡ್ರೆ:

ಮುಂದುವರೆದು 'ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ' ಎಂದು ತಮ್ಮ ಪೋಸ್ಟ್ ಮೂಲಕ ಕಿಡಿಕಾರಿದ್ದಾರೆ.

ನಮ್ಮ ದೇಶ ಹಿಂದೂ ರಾಷ್ಟ್ರವಾದರೆ, ಪಾಕಿಸ್ತಾನ-ಅಪಘಾನಿಸ್ತಾನದಂತೆ ದಿವಾಳಿಯಾಗಲಿದೆ: ಯತೀಂದ್ರ ಸಿದ್ದರಾಮಯ್ಯ

ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ? ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ. #BjpSupportsCriminals ಎಂದು ಬರೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ