ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ನಿಶ್ಚಿತ: ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್‌

By Kannadaprabha News  |  First Published May 5, 2023, 9:59 PM IST

ಬಿಜೆಪಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸುವ ಮೂಲಕ ಪಕ್ಷದ ಅಭ್ಯರ್ಥಿ ಡಾ.ರವಿ ಪಾಟೀಲ ಅವರನ್ನು ಗೆಲ್ಲಿಸಬೇಕು. ಕರ್ನಾಟಕದಲ್ಲಿ ಸ್ಪಷ್ಟಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ದೇವೇಂದ್ರ ಫಡ್ನವೀಸ್‌ 


ಬೆಳಗಾವಿ(ಮೇ.05): ಬಿಜೆಪಿ ತತ್ವ ಸಿದ್ಧಾಂತಗಳು ಸದಾ ರಾಷ್ಟ್ರದ ಹಿತದಲ್ಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಈ ಬಾರಿ ಕರ್ನಾಟಕ ವಿಧಾನಸಭೆಯಲ್ಲಿ ಮತ್ತೊಮ್ಮೆ ಬಹುಮತದೊಂದಿಗೆ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌ ಹೇಳಿದರು.

ಗುರುವಾರ ಟಿಳಕ್‌ ಚೌಕ್‌ದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರ ಪ್ರಚಾರರ್ಥವಾಗಿ ನಡೆದ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸುವ ಮೂಲಕ ಪಕ್ಷದ ಅಭ್ಯರ್ಥಿ ಡಾ.ರವಿ ಪಾಟೀಲ ಅವರನ್ನು ಗೆಲ್ಲಿಸಬೇಕು. ಕರ್ನಾಟಕದಲ್ಲಿ ಸ್ಪಷ್ಟಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tap to resize

Latest Videos

ಬಿಜೆಪಿಯರಿಗೆ ಗಡಿಭಾಗದ ಮರಾಠಿಗರ ಭವಣೆ ಕೇಳಿಸಲ್ಲ: ಸಂಜಯ ರಾವೂತ್‌ ವಾಗ್ದಾಳಿ

ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿ ಡಾ.ರವಿ ಪಾಟೀಲ, ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಸಚಿವ ಗಿರೀಶ ಮಹಾಜನ, ಸಂಸದೆ ಮಂಗಲ ಅಂಗಡಿ, ಶಾಸಕ ಅನಿಲ ಬೆನಕೆ , ಉಪಮೇಯರ್‌ ರೇಷ್ಮಾ ಪಾಟೀಲ ಸೇರಿದಂತೆ ಭಾರತೀಯ ಜನತಾ ಪಾರ್ಟಿಯ ಮುಖಂಡರು ಉಪಸ್ಥಿತರಿದ್ದರು.

ವಿವಿಧೆಡೆ ಡಾ.ರವಿ ಪಾಟೀಲ ಭರ್ಜರಿ ಪ್ರಚಾರ

ಬೆಳಗಾವಿ ಉತ್ತರ ಕ್ಷೇತ್ರದ ವಿವಿಧೆಡೆ ಗುರುವಾರ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ತಮ್ಮ ಅಪಾರ ಬೆಂಬಲಿಗರೊಂದಿಗೆ ಭರ್ಜರಿ ಪ್ರಚಾರ ನಡೆಸಿದರು. ಶಿವಾಜಿ ನಗರ ಮತ್ತು ವೀರಭದ್ರ ನಗರದಲ್ಲಿ ಮಹಿಳೆಯರು ಪಾರಂಪರಿಕ ಉಡುಗೆ ತೊಡುಗೆಯೊಂದಿಗೆ ಸಾಂಪ್ರದಾಯಿಕವಾಗಿ ಆರತಿ ಬೆಳಗುವ ಮೂಲಕ ರವಿ ಪಾಟೀಲ ಅವರನ್ನು ಅದ್ಧೂರಿಯಿಂದ ಸ್ವಾಗತಿಸಿದರು. ಶಿವಾಜಿ ನಗರದಲ್ಲಿ ಜೈ ಶಿವಾಜಿ, ಜೈ ಭವಾನಿ ಘೋಷಣೆ ಮೊಳಗಿದವು. ಮನೆ ಮನೆಗಳ ಎದುರು ರಂಗೋಲಿ ಹಾಕಿ ಸ್ವಾಗತಿಸಿದ್ದು ವಿಶೇಷವಾಗಿತ್ತು.

ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಸಾಧನೆ ಮಾಡದ ಬಿಜೆಪಿ: ಲಕ್ಷ್ಮೀ ಹೆಬ್ಬಾಳಕರ

ವಿದ್ಯಾಗಿರಿ, ವಂಟಮೂರಿ ಕೊಳಚೆ ಪ್ರದೇಶ, ವೈಭವ ನಗರ, ಪಿ.ಕೆ.ಕ್ವಾಟರ್ಸ್‌ ಮತ್ತಿತರ ಕಡೆಗಳಲ್ಲಿ ಪ್ರಚಾರ ನಡೆಸಿದ ರವಿ ಪಾಟೀಲ ಅವರು ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ತಪ್ಪದೇ ಎಲ್ಲರೂ ಮತ ಚಲಾಯಿಸುವ ಮೂಲಕ ಬಿಜೆಪಿಯನ್ನುಬೆಂಬಲಿಸಬೇಕು. ನನಗೆ ಮತ ನೀಡುವ ಮೂಲಕ ಸಮಾಜ ಸೇವೆ ಸಲ್ಲಿಸಲು ನನಗೆ ಅವಕಾಶ ಮಾಡಿಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ವೇಳೆ ಬಿಜೆಪಿ, ಮೋದಿ ಪರ ಘೋಷಣೆ ಮೊಳಗಿದವು. ವಂಟಮೂರಿ ಕೊಳಚೆ ಪ್ರದೇಶದಲ್ಲಿ ಜನರನ್ನು ಭೇಟಿಯಾದ ರವಿ ಪಾಟೀಲ ಅವರು ಅಲ್ಲಿನ ಜನತೆಯ ಸಮಸ್ಯೆ ಆಲಿಸಿದರು. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಎಲ್ಲಡೆ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.

click me!