ಬಿಜೆಪಿ ಟಿಕೆಟ್ ಹಂಚಿಕೆ ಗೊಂದಲ: 40 ಕ್ಷೇತ್ರಗಳಲ್ಲಿ ಮರು ಸರ್ವೇ ಆರಂಭ

Published : Apr 10, 2023, 04:16 PM ISTUpdated : Apr 10, 2023, 04:26 PM IST
ಬಿಜೆಪಿ ಟಿಕೆಟ್ ಹಂಚಿಕೆ ಗೊಂದಲ: 40 ಕ್ಷೇತ್ರಗಳಲ್ಲಿ ಮರು ಸರ್ವೇ ಆರಂಭ

ಸಾರಾಂಶ

ಕಳೆದ ಮೂರ್ನಾಲ್ಕು ದಿನಗಳಿಂದ ಸಭೆಗಳನ್ನು ಮಾಡಲಾಗುತ್ತಿದ್ದು, 170 ಕ್ಷೇತ್ರಗಳ ಪಟ್ಟಿ ಸಿದ್ಧಗೊಳಿಸಲಾಗಿತ್ತು. ಆದರೆ, ಪಕ್ಷದ ನಾಯಕರಿಗೆ 40 ಕ್ಷೇತ್ರಗಳ ಅನುಮಾನ ಕಂಡುಬಂದಿದ್ದು ಮತ್ತೊಮ್ಮೆ ಸರ್ವೇ ಮಾಡಲು ಮುಂದಾಗಿದೆ.

ಬೆಂಗಳೂರು (ಏ.10): ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಕೆ ಆರಂಭಕ್ಕೆ ಇನ್ನು ಮೂರೇ ದಿನ ಬಾಕಿಯಿದೆ. ಆದರೂ ಬಿಜೆಪಿಯ ಒಬ್ಬರೇ ಅಭ್ಯರ್ಥಿಯ ಹೆಸರನ್ನೂ ಬಿಡುಗಡೆ ಮಾಡಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಸಭೆಗಳ ಮೇಲೆ ಸಭೆಗಳನ್ನು ಮಾಡಲಾಗುತ್ತಿದ್ದು, 170 ಕ್ಷೇತ್ರಗಳ ಪಟ್ಟಿ ಸಿದ್ಧಗೊಳಿಸಲಾಗಿತ್ತು. ಆದರೆ, ಪಕ್ಷದ ನಾಯಕರಿಗೆ 40 ಕ್ಷೇತ್ರಗಳ ಅಸಮಾಧಾನ ಇರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಆಂತರಿಕ ಸರ್ವೇ ಮಾಡಲು ಮುಂದಾಗಿದೆ.

ಕರ್ನಾಟಕ ವಿಧಾನಸಭಾ ಚುನಾವನೆಗೆ ಏ.13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏ.20 ಕೊನೇ ದಿನವಾಗಿದೆ. ಆದರೆ, ನಾಮಪತ್ರ ಸಲ್ಲಿಕೆ ಮಾಡಲು ಇನ್ನು ಕೇವಲ 10 ದಿನಗಳು ಮಾತ್ರ ಬಾಕಿಯಿವೆ. ಆದರೂ, ಬಿಜೆಪಿಯಿಂದ ಒಬ್ಬ ಅಭ್ಯರ್ಥಿಗೂ 'ಬಿ' ಫಾರ್ಮ್‌ ಹಂಚಿಕೆ ಮಾಡಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ವತಿಯಿಂದ ರಾಜ್ಯದ ಕೆಲವು ಮುಖಂಡರೊಂದಿಗೆ ಸಭೆಗಳ ಮೇಲೆ ಸಭೆಗಳನ್ನು ಮಾಡಲಾಗುತ್ತಿದೆ. ಆದರೆ, ರಾಜ್ಯ ನಾಯಕರಲ್ಲಿಯೇ ಅಭ್ಯರ್ಥಿಗಳ ಆಯ್ಕೆಯಲ್ಲಿ ಒಮ್ಮತ ಮೂಡುತ್ತಿಲ್ಲವೇನೋ ಎಂಬ ಅನುಮಾನ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಸಭೆಯಲ್ಲಿ 170 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದರೂ ಅದನ್ನು ಬಿಡುಗಡೆ ಮಾಡದೇ ತಡೆಹಿಡಿಯಲಾಗಿದೆ.

ಬಿಜೆಪಿ ಪಟ್ಟಿ ರಿಲೀಸ್ ಮತ್ತೆ ಮುಂದಕ್ಕೆ! ಕೇಸರಿ ಕಲಿಗಳ ಆಯ್ಕೆ ವಿಳಂಬವಾಗುತ್ತಿರೋದ್ಯಾಕೆ?

ತಡರಾತ್ರಿವರೆಗೂ ಸಭೆ ನಡೆದರೂ ಬೆಳಗ್ಗೆ ಅನುಮಾನ: ನಿನ್ನೆ ತಡರಾತ್ರಿವರೆಗೆ ಬಿಜೆಪಿ ಟಿಕೆಟ್‌ ಹಂಚಿಕೆ ಕುರಿತು ಸಭೆಯನ್ನು ಮಾಡಲಾಗಿದ್ದು, 170 ಜನರ ಪಟ್ಟಿಯನ್ನು ಸಿದ್ಧಪಡಿಸಿದ ನಂತರ ಮತ್ತೆ ಪಟ್ಟಿಯ ಮೇಲೆ ಅನುಮಾನ ಬಂದಿದೆ. ಹೀಗಾಗಿ, ಬಿಜೆಪಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡದೇ 30 -40 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯಲ್ಲಿ ಅನುಮಾನ ಬಂದಿದೆ. ಆದ್ದರಿಂದ ಈ 40 ಕ್ಷೇತ್ರದಲ್ಲಿ ಮತ್ತೊಮ್ಮೆ ಸರ್ವೆಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಮೊನ್ನೆ ರಾತ್ರಿಯಿಂದಲೆ ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಸಮೀಕ್ಷೆಯನ್ನು ಮಾಡುವಂತೆ ಬಿಜೆಪಿ ಹೈಕಮಾಂಡ್ ಮತ್ತು ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

3 ಸಂಸ್ಥೆಗಳಿಂದ ಪ್ರತ್ಯೇಕ ಸಮೀಕ್ಷೆ:  ಇನ್ನು ರಾಜ್ಯದಲ್ಲಿ ಅಧಿಕಾರಕ್ಕೆ ಬರಲೇಬೇಕು ಎಂದು ಕಸರತ್ತು ಮಾಡುತ್ತಿರುವ ಬಿಜೆಪಿ ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡುವ ಎಲ್ಲ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲೇಬೇಕು ಎಂದು ಶತಾಯ ಗತಾಯ ಪ್ರಯತ್ನವನ್ನು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅನುಮಾನ ಬಂದಿರುವ 40  ಕ್ಷೇತ್ರಗಳಲ್ಲಿ 3 ಖಾಸಗಿ ಸಂಸ್ಥೆಗಳಿಂದ ಮತ್ತೊಮ್ಮೆ ಸಮೀಕ್ಷೆಯನ್ನು ಮಾಡುವಂತೆ ಸೂಚಿಸಲಾಗಿದೆ. ಇಲ್ಲಿ ನಡೆಯುವ ಸರ್ವೆಯ ಆಧಾರದ ಮೇಲೆ ಟಿಕೆಟ್ ಫೈನಲ್ ಮಾಡಲಾಗುತ್ತಿದೆ. ಈಗಾಗಲೇ ಸರ್ವೇ ಆರಂಭವಾಗಿದ್ದು, ಇಂದು ಸಂಜೆಯ ಒಳಗೆ ಮೂರು ಸರ್ವೆಯ ವರದಿ ಬರಲಿದೆ. ನಂತರ ಇಂದು ತಡರಾತ್ರಿ ವೇಳೆಗೆ ಅಥವಾ ನಾಳೆ ಬೆಳಗ್ಗೆ ಟಿಕೆಟ್‌ ಹಂಚಿಕೆ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆಯಿದೆ. 

Karnataka Assembly Election 2023: ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ಮತ್ತೊಂದು ಸುತ್ತಿನ ನಾಯಕರ ಸಭೆ: ಇನ್ನು 40 ವಿಧಾನಸಭಾ ಕ್ಷೇತ್ರಗಳ ಮರು ಸಮೀಕ್ಷೆಗಳ ವರದಿ ಬಂದನಂತರ ಇಂದು ರಾತ್ರಿ ಮತ್ತೊಂದು ಸುತ್ತಿನ ನಾಯಕರ ಸಭೆಯನ್ನು ನಡೆಸಲಾಗುತ್ತದೆ. ಇದಾದ ನಂತರ, ಅಂತಿಮವಾಗಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಹಂಚಿಕೆಯನ್ನು ಮಾಡಲಾಗುತ್ತದೆ. ಆದ್ದರಿಂದ ಬಿಜೆಪಿ ಪಟ್ಟಿ ಬಿಡುಗಡೆಯನ್ನು ವಿಳಂಬ ಮಾಡಲಾಗುತ್ತಿದೆ. ಇನ್ನು ಮಧ್ಯಾಹ್ನದ ನಂತರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಿಎಂ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಪ್ರತ್ಯೇಕ ಸಭೆಯನ್ನೂ ಮಾಡಲಾಗಿದೆ. ಇದರಿಂದ ಯಡಿಯೂರಪ್ಪ ಅವರು ಸಿಟ್ಟಾಗಿದ್ದಾರೆ ಎಂಬ ಅನುಮಾನಗಳು ಕಂಡುಬಂರುತ್ತಿವೆ.

ಬಿ ಫಾರ್ಮ್‌ ಸಿಗುತ್ತದೆಯೋ ಇಲ್ಲವೆಂಬ ಆತಂಕ: ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ತಮಗೆ ಸ್ಪರ್ಧೆ ಆಡಲು ಅವಕಾಶ ಸಿಗುತ್ತದೆಯೋ ಇಲ್ಲವೋ ಎಂದು ಕೈ- ಕೈ ಹಿಸುಕಿಕೊಳ್ಳುತ್ತಿದ್ದಾರೆ. ಇನ್ನು ಬಹುತೇಕ ಅಭ್ಯರ್ಥಿಗಳಲ್ಲಿ ಬಿಜೆಪಿ ಟಿಕೆಟ್‌ ಸಿಗುತ್ತದೆಯೋ ಇಲ್ಲವೋ ಎಂಬ ಆತಂಕವೂ ಕಾಡುತ್ತಿದೆ. ರಾಜ್ಯದಲ್ಲಿ ಏ.13ರಿಂದ ಚುನಾವಣಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವ ದಿನಾಂಕ ಆರಂಭವಾಗುತ್ತಿದೆ. ಆದರೆ, ಇನ್ನೂ ನಮ್ಮ ಹೆಸರು ಪ್ರಕಟಗೊಂಡಿಲ್ಲ ಎಂದು ಕೊರಗುತ್ತಿದ್ದಾರೆ. ಇನ್ನು ಕೆಲವರು ನಾಮಪತ್ರ ಸಲ್ಲಿಕೆ ಮಾಡಲು ಕೆಲವು ಶುಭ ದಿನಗಳನ್ನು ನೋಡಿಕೊಂಡು ಅರ್ಜಿ ಸಲ್ಲಿಕೆ ಮಾಡುತ್ತಾರೆ. ಅಂತಹವರಿಗೆ ಟಿಕೆಟ್‌ ಹಂಚಿಕೆ ವಿಳಂಬದಿಂದ ಇರಿಸು ಮುರಿಸು ಉಂಟಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ