ದೋಸ್ತಿ ಸರ್ಕಾರ ಉಳಿಯಲ್ಲ, 2 ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ

Published : Oct 13, 2018, 08:31 AM IST
ದೋಸ್ತಿ ಸರ್ಕಾರ ಉಳಿಯಲ್ಲ, 2 ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ

ಸಾರಾಂಶ

ಇನ್ನು ಒಂದೆರಡು ತಿಂಗಳಲ್ಲಿ ಸರ್ಕಾರ ಪತನಗೊಳ್ಳುವುದು ಖಚಿತ ಎಂಬ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿಕೆಗೆ ಶುಕ್ರವಾರ ಬೆಳಗ್ಗೆ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಈಶ್ವರಪ್ಪ ಅಶೋಕ್ ಹೇಳಿರುವ ಮಾತನ್ನೇ ಪುನರುಚ್ಛರಿಸಿದ್ದಾರೆ.

ಬೆಂಗಳೂರು: ಮೈತ್ರಿ ಸರ್ಕಾರದ ಪತನದ ಊಹಾಪೋಹಗಳ ಬಗ್ಗೆ ಬಿಜೆಪಿ ಮುಖಂಡರು ಮಾತನಾಡುವುದು ಸರಿ ಅನ್ನಿಸುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ಆಕ್ಷೇಪ ವ್ಯಕ್ತಪಡಿಸಿದ ಕೆಲವೇ ಗಂಟೆಗಳಲ್ಲಿ, ಬಿಜೆಪಿ ಮುಖಂಡರು ಸರ್ಕಾರ ಪತನ ಕುರಿತು ಭವಿಷ್ಯವಾಣಿ ಮುಂದುವರಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರು ಸ್ವತಃ ಯಡಿಯೂರಪ್ಪ ಮುಂದೆಯೇ 2 ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದರೆ, ಮಾಜಿ ಸಚಿವ ಗೋವಿಂದ ಕಾರಜೋಳ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಾಬುರಾವ್‌ ಚವ್ಹಾಣ ಇದೇ ರೀತಿ ಧ್ವನಿಸುವ ಹೇಳಿಕೆಗಳನ್ನು ನೀಡಿದ್ದಾರೆ.

ಇನ್ನು ಒಂದೆರಡು ತಿಂಗಳಲ್ಲಿ ಸರ್ಕಾರ ಪತನಗೊಳ್ಳುವುದು ಖಚಿತ ಎಂಬ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿಕೆಗೆ ಶುಕ್ರವಾರ ಬೆಳಗ್ಗೆ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಶಿವಮೊಗ್ಗದಲ್ಲೇ ಸಂಜೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಈಶ್ವರಪ್ಪ ಮಾತನಾಡುತ್ತಾ, ‘ಬಹಿರಂಗವಾಗಿ ತಮ್ಮ ಪಕ್ಷದ ಶಾಸಕರ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡೂ ಪಕ್ಷಗಳು ರಾಜಕೀಯವಾಗಿ ಬೆತ್ತಲೆಯಾಗಿದ್ದು ಮುಂದಿನ ಲೋಕಸಭೆ ಚುನಾವಣೆವರೆಗೂ ಈ ಸರ್ಕಾರ ಉಳಿಯುವುದಿಲ್ಲ. ಇನ್ನೆರೆಡು ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ’ ಎಂದು ಸ್ವತಃ ಯಡಿಯೂರಪ್ಪ ಎದುರೇ ಘೋಷಿಸಿದ್ದಾರೆ.

ಲೋಕಸಭಾ ಉಪ ಚುನಾವಣೆ ಬೇಡವಾಗಿತ್ತು ಎಂಬ ಅಭಿಪ್ರಾಯ ಸಾರ್ವಜನಿಕರಲ್ಲಿದೆ. ಆದರೆ ಉಪಚುನಾವಣೆಯಿಂದಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಬೀದಿ ನಾಟಕ ನೋಡುವ ಭಾಗ್ಯ ಸಿಕ್ಕಿದ್ದು, ಇನ್ನೈದು ತಿಂಗಳು ಕಾಯಬೇಕಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯವನ್ನು ಪ್ರಸ್ತಾಪಿಸುವಾಗ ಯಡಿಯೂರಪ್ಪನವರೂ ವೇದಿಕೆಯಲ್ಲೇ ಇದ್ದರು.

ಕಾರಜೋಳ, ಚವ್ಹಾಣರಿಂದಲೂ ಭವಿಷ್ಯ: ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಾಬುರಾವ್‌ ಚವ್ಹಾಣ ಕೂಡ ಮೈತ್ರಿ ಸರ್ಕಾರ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಸಂಪೂರ್ಣ ದಿವಾಳಿಯಾಗಿದ್ದು, ಶೀಘ್ರದಲ್ಲೇ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಸಚಿವ, ಶಾಸಕ ಗೋವಿಂದ ಕಾರಜೋಳ ಹೇಳಿದ್ದಾರೆ. ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌-ಕಾಂಗ್ರೆಸ್‌ ಪಕ್ಷದ ಡಜನ್‌ದಷ್ಟುಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದು ಅವರೆಲ್ಲ ಬಿಜೆಪಿ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಾಬುರಾವ್‌ ಚವ್ಹಾಣ ಅವರು, ಕಾಂಗ್ರೆಸ್‌-ಜೆಡಿಎಸ್‌ ಅಪವಿತ್ರ ಮೈತ್ರಿ ಸರ್ಕಾರದ ಮೊದಲ ವಿಕೆಟ್‌ ಪತನಗೊಂಡಿದ್ದು ಇನ್ನೆರಡು ತಿಂಗಳಲ್ಲಿ ಸರ್ಕಾರ ಉರುಳಿ ಬೀಳುವುದು ಗ್ಯಾರಂಟಿ ಎಂದಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಡಿ ಮಠದ ಸ್ವಾಮೀಜಿಗಳು ಸಹ ಎರಡು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ ಎಂಬ ಭವಿಷ್ಯ ನುಡಿದಿದ್ದು, ಮೈತ್ರಿ ಸರ್ಕಾರದಲ್ಲಿ ಆಂತರಿಕ ಸಮಸ್ಯೆ ಕಾಣುತ್ತಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ