ವಿಧಾನಪರಿಷತ್ ಚುನಾವಣೆ 2024: ಬಿಜೆಪಿ ಮೇಲ್ಮನೆ ಅಭ್ಯರ್ಥಿ ನಾಳೆಯ ನಂತರ ಆಯ್ಕೆ

By Kannadaprabha News  |  First Published May 31, 2024, 11:07 AM IST

ಲೋಕಸಭೆ ಚುನಾವಣೆ ನಂತರವೇ ಕೇಂದ್ರ ವರಿಷ್ಠರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ರಾಜ್ಯದಿಂದ ರವಾನೆಯಾಗಿರುವ ಪಟ್ಟಿಯನ್ನು ಪರಿಶೀಲಿಸಿ ವಿಧಾನಪರಿಷತ್‌ಗೆ ಯಾರನ್ನು ಕಳುಹಿಸಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ. ಬಿಜೆಪಿಗೆ 3 ಸ್ಥಾನಗಳು ಲಭಿಸಲಿವೆ. ಈ 3 ಸ್ಥಾನಕ್ಕೆ 15ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. 


ಬೆಂಗಳೂರು(ಮೇ.31): ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಬಳಿಕ ಸಭೆ ನಡೆಸಿ ಅಂತಿಮ ಗೊಳಿಸಲು ಬಿಜೆಪಿ ತೀರ್ಮಾನಿಸಿದೆ. ಏಳನೇ ಮತ್ತು ಕೊನೆ ಹಂತದ ಮತದಾನವು ಶನಿವಾರ ನಡೆಯಲಿದೆ. ಬಳಿಕ ಪಕ್ಷದ ಕೇಂದ್ರ ವರಿಷ್ಠರು ನಿರಾಳರಾಗಲಿದ್ದು, ಆ ವೇಳೆ ಸಭೆ ನಡೆಸಲು ನಿರ್ಧರಿಸಿದ್ದಾರೆ. 

ಲೋಕಸಭೆ ಚುನಾವಣೆ ನಂತರವೇ ಕೇಂದ್ರ ವರಿಷ್ಠರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ರಾಜ್ಯದಿಂದ ರವಾನೆಯಾಗಿರುವ ಪಟ್ಟಿಯನ್ನು ಪರಿಶೀಲಿಸಿ ವಿಧಾನಪರಿಷತ್‌ಗೆ ಯಾರನ್ನು ಕಳುಹಿಸಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ. ಬಿಜೆಪಿಗೆ 3 ಸ್ಥಾನಗಳು ಲಭಿಸಲಿವೆ. ಈ 3 ಸ್ಥಾನಕ್ಕೆ 15ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. ಇತ್ತೀಚೆಗೆ ಬಿಜೆಪಿಯ ರಾಜ್ಯ ನಾಯಕರು ಈ ಸಂಬಂಧ ಸಭೆ ನಡೆಸಿ ಕೇಂದ್ರದ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದಾರೆ. ಟಿಕೆಟ್ ಆಕಾಂಕ್ಷಿಗಳ 15ಕ್ಕೂ ಹೆಚ್ಚು ಹೆಸರುಗಳನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಕೇಂದ್ರದ ನಾಯಕರು ಸೂಚಿಸುವ ಹೆಸರುಗಳಿಗೆ ಸಹಮತ ವ್ಯಕ್ತಪಡಿಸಿ ಅವರನ್ನು ಬೆಂಬಲಿಸಲಿದ್ದಾರೆ. 

Tap to resize

Latest Videos

ಮೇಲ್ಮನೆ ಕುತೂಹಲಕ್ಕೆ ತಿರುವು: ದಿಲ್ಲಿಗೆ ಪ್ರತ್ಯೇಕ ಪಟ್ಟಿ ನೀಡಿದ ಸಿದ್ದು, ಡಿಕೆಶಿ..!

ಮಹಿಳೆಯರಿಗೆ ಪ್ರಾತಿನಿಧ್ಯ ನೀಡುವಂತೆಯೂ ರಾಜ್ಯ ನಾಯಕರು ಕೇಂದ್ರದ ಮುಖಂಡರಿಗೆ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರೆ ನಾಯಕರು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.

click me!