
ಬೆಂಗಳೂರು (ಮಾ.19): ವಿಧಾನಸಭಾ ಚುನಾವಣಾ ಸಿದ್ಧತೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ಯುವ ಸಂಕಲ್ಪ ಸಮಾವೇಶ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಸಹಕಾರನಗರದಲ್ಲಿ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಯಡಿಯೂರಪ್ಪ ನಾಯಕತ್ವದಲ್ಲಿ ಬ್ಯಾಟರಾಯನಪುರ ಗೆಲ್ಲುವ ಮೂಲಕ ರಾಜ್ಯದಲ್ಲಿ 150 ಸ್ಥಾನ ಗೆಲ್ಲುತ್ತೇವೆ. ಬ್ಯಾಟರಾಯನಪುರದಲ್ಲಿ ಕೃಷ್ಣನ ಹೆಸರಿರುವ ಕಂಸ ಸೋಲುತ್ತಾನೆ ಎಂದು ಹೇಳುವ ಮೂಲಕ ಕೃಷ್ಣಬೈರೇ ಗೌಡರಿಗೆ ಟಾಂಗ್ ನೀಡಿದರು. ಕಾಂಗ್ರೆಸ್ ಆಳ್ವಿಕೆಯಲ್ಲಿ ಭಾರತ ಭಯೋತ್ಪಾದಕರ, ಭ್ರಷ್ಟಾಚಾರಿಗಳ ರಾಷ್ಟ್ರ ಆಯಿತು. ಆಗ ಕುಟುಂಬವಾದಕ್ಕೆ ಮನ್ನಣೆ ಕೊಡುವ ಕೆಲಸ ಆಯಿತು. ಪಾಕಿಸ್ತಾನದ ಜನರು ಮಸೀದಿಯ ಮುಂದೆ ನಿಂತು ಪಾಕಿಸ್ತಾನ ಉಳಿಯಲು ನರೇಂದ್ರ ಮೋದಿ ಬೇಕು ಅಂತಾ ಪ್ರಾರ್ಥನೆ ಮಾಡುತ್ತಾರೆ.
ಕಾಂಗ್ರೆಸ್ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವಂತಿರಲಿಲ್ಲ. ಕಾಂಗ್ರೆಸ್ ಅವಧಿಯಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದಕರು ನಮ್ಮ ಸೈನಿಕರಿಗೆ ಗುಂಡು ಹೊಡೆದಾಗ ಮೃತ ದೇಹ ತರಲು ಮನಮೋಹನ್ ಸಿಂಗ್ ಗೆ ಆಗಲಿಲ್ಲ. ಕಾಂಗ್ರೆಸ್ ಅವಧಿಯಲ್ಲಿ ಭಯೋತ್ಪಾದಕರಿಗೆ ಪ್ರೇರಣೆಯಾಗಿತ್ತು. ಭಯೋತ್ಪಾದಕರ ಬೆಂಗಾವಲಾಗಿ ಕಾಂಗ್ರೆಸ್ ನಿಂತಿತ್ತು. ಭಿಂದ್ರನ್ ವಾಲೆಯ ಸೃಷ್ಟಿ ಇಂದಿರಾ ಗಾಂಧಿಯಿಂದ ಆಯಿತು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗ ಡಿ.ಕೆ. ಶಿವಕುಮಾರ್ ಕಣ್ಣಲ್ಲಿ ನೀರು ಬಂತು.
ಭಟ್ಕಳ ಶಾಸಕನಾಗುವ ಯಾವುದೇ ಯೋಗ್ಯತೆ ಸುನೀಲ್ ನಾಯ್ಕ್‌ಗೆ ಇಲ್ಲವೆಂದ ಸ್ವಪಕ್ಷೀಯರು!
ರೈತರ ಆತ್ಮಹತ್ಯೆಯಾದಾಗ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕಣ್ಣಲ್ಲಿ ನೀರು ಬರಲಿಲ್ಲ. ಡಿ.ಕೆ. ಶಿವಕುಮಾರ್ ಗೆ ಎರಡು ಕುಕ್ಕರ್ ಮೇಲೆ ಪ್ರೀತಿ ಇದೆ. ಒಂದು ಬೆಳಗಾವಿ ಕುಕ್ಕರ್ ಮತ್ತೊಂದು ಮಂಗಳೂರು ಕುಕ್ಕರ್. ಕಾಂಗ್ರೆಸ್ ಗೆ ಇನ್ನೊಂದು ಹೆಸರೇ ಭಯೋತ್ಪಾದನೆ. ಭಯೋತ್ಪಾದಕರ ಪಾರ್ಟಿ ಕಾಂಗ್ರೆಸ್. ಡಿ.ಜೆ. ಹಳ್ಳಿ ಪ್ರಕರಣದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಾಕಿದ ಸಂಪತ್ ರಾಜ್ ನನ್ನು ಇನ್ನೂ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿಲ್ಲ ಎಂದರು.
ಬಿಜೆಪಿಗೆ ತಪ್ಪದ ಮಾಡಾಳ್ ಕಿರಿಕಿರಿ: ಚನ್ನಗಿರಿಯಲ್ಲಿ ಅರ್ಧಕ್ಕೆ ಮೊಟಕುಗೊಂಡ ವಿಜಯ ಸಂಕಲ್ಪ ಯಾತ್ರೆ
ಸಮಾವೇಶದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಎ. ರವಿ, ಮುನೀಂದ್ರಕುಮಾರ್ ಮತ್ತು ತಮ್ಮಶ್ ಗೌಡ ಉಪಸ್ಥಿತಿ ಇದ್ದರು. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲೆಯಿಂದ ಸಮಾವೇಶ ಆಯೋಜನೆ ಮಾಡಲಾಗಿತ್ತು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಿ.ವಿ. ಸದಾನಂದ ಗೌಡ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ. ನಾರಾಯಣ್ ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.