Karnataka election 2023: ಕೊಪ್ಪಳಕ್ಕಿಂದು ವಿಜಯ ಸಂಕಲ್ಪ ಯಾತ್ರೆ ಆಗಮನ

By Kannadaprabha News  |  First Published Mar 12, 2023, 11:16 AM IST

ಜಿಲ್ಲೆಗೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಇಂದು ಆಗಮಿಸಲಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಮುಖಾಂತರ ಆಗಮಿಸುವ ವಿಜಯ ಸಂಕಲ್ಪ ಯಾತ್ರೆ ಸಂಜೆ ಕೊಪ್ಪಳ ನಗರದತ್ತ ಬರಲಿದೆ.


ಕೊಪ್ಪಳ (ಮಾ.12) : ಜಿಲ್ಲೆಗೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಇಂದು ಆಗಮಿಸಲಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಮುಖಾಂತರ ಆಗಮಿಸುವ ವಿಜಯ ಸಂಕಲ್ಪ ಯಾತ್ರೆ ಸಂಜೆ ಕೊಪ್ಪಳ ನಗರದತ್ತ ಬರಲಿದೆ.

ಮಾ.12ರ ಭಾನುವಾರದಂದು ಸಂಜೆ 5 ಗಂಟೆಗೆ ತಾಲೂಕಿನ ಟಣಕನಕಲ್ಲು ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿಯ ವಿಜಯ ಸಂಕಲ್ಪ ಯಾತ್ರೆಗೆ ಸ್ವಾಗತ ಕೋರಲಾಗುತ್ತಿದೆ. ಅಲ್ಲಿಂದ ನೇರವಾಗಿ ಭಾಗ್ಯನಗರ ಮುಖಾಂತರ ಕೊಪ್ಪಳದ ಬಸ್ಟ್ಯಾಂಡ್‌ ಮೂಲಕ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಲಿದ್ದು, ಸಂಜೆ 6 ಗಂಟೆಗೆ ಸಾರ್ವಜನಿಕ ಸಭೆ ಜರುಗಲಿದೆ.

Latest Videos

undefined

 

ಶೀಘ್ರ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಯಡಿಯೂರಪ್ಪ

ವಿಜಯ ಸಂಕಲ್ಪ ಯಾತ್ರೆ(BJP Vijayasankalpa yatre)ಯಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ(CT Ravi), ಕೇಂದ್ರದ ರಾಜ್ಯ ಸಾಮಾಜಿಕ ನ್ಯಾಯ ಮತ್ತು ಉದ್ಯೋಗ ಸಚಿವ ನಾರಾಯಣ ಸ್ವಾಮಿ, ಕೇಂದ್ರ ರಾಜ್ಯ ಸಚಿವ ಭಗವಂತ ಖೂಬಾ,ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ರಾಜ್ಯ ಸಚಿವರಾದ ಶ್ರೀರಾಮುಲು, ಆನಂದ್‌ ಸಿಂಗ್‌, ಹಾಲಪ್ಪ ಆಚಾರ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ, ಸಂಸದ ಸಂಗಣ್ಣ ಕರಡಿ, ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ ದಡೇಸ್ಗೂರು, ವಿಪ ಸದಸ್ಯೆ ಹೇಮಲತಾ ನಾಯಕ, ವಿಜಯ ಸಂಕಲ್ಪ ಯಾತ್ರೆಯ ಸಂಚಾಲಕರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಇತರರು ಭಾಗಿಯಾಗಲಿದ್ದಾರೆ.

14ಕ್ಕೆ ಅಂಜನಾದ್ರಿಗೆ ಸಿಎಂ ಬೊಮ್ಮಾಯಿ

 ಗಂಗಾವತಿ : ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ವಿವಿಧ ಕಾಮಗಾರಿಗೆ ಮಾ.14ರಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ .120 ಕೋಟಿ ಅನುದಾನ ನೀಡಿದೆ.ಅದರಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯು .20 ಕೋಟಿ ಅನುದಾನ ನೀಡಿದ್ದು, ಒಟ್ಟು 140 ಕೋಟಿ ಅನುದಾನದ ವಿವಿಧ ಯೋಜನೆಗಳಿಗೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.ನಂತರ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಪ್ರಮಾಣಪತ್ರಗಳನ್ನು ಮುಖ್ಯಮಂತ್ರಿಗಳು ವಿತರಿಸಲಿದ್ದಾರೆ.

ತಾಕತ್ತಿದ್ದರೆ ಸಿಎಂ ಅಭ್ಯರ್ಥಿ ಘೋಷಿಸಿ: ಕಾಂಗ್ರೆಸ್‌ಗೆ ರಾಮುಲು ಸವಾಲು

ಮಾ. 13ರಂದು ವಿಜಯ ಸಂಕಲ್ಪ ಯಾತ್ರೆ:

ಮಾ.13 ರಂದು ಗಂಗಾವತಿ ನಗರಕ್ಕೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆಗಮಿಸಲಿದೆ. ಮದ್ಯಾಹ್ನ 12 ಗಂಟೆಗೆ ನಗರದ ಮಹಾತ್ಮ ಗಾಂಧಿ ವೃತ್ತಕ್ಕೆ ಆಗಮಿಸಲಿದ್ದು,ಯಾತ್ರೆಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್‌, ಸಚಿವ ಬಿ.ಶ್ರೀರಾಮುಲು, ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಪ್ರಮುಖರು ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿರೂಪಾಕ್ಷಪ್ಪ ಸಿಂಗನಾಳ,ನೆಕ್ಕಂಟಿ ಸೂರಿಬಾಬು, ಎಚ್‌.ಎಂ.ಸಿದ್ದರಾಮಸ್ವಾಮಿ, ಚೆನ್ನಪ್ಪ ಮಳಗಿ ಇದ್ದರು.

click me!