ಮೋದಿ ಟೀಕಿಸುವ ಸಂತೋಷ್ ಲಾಡ್‌ ಪ್ರಯತ್ನ ಆಕಾಶಕ್ಕೆ ಉಗುಳುವಂತಿದೆ ; ಬಿ.ವೈ. ವಿಜಯೇಂದ್ರ!

Published : May 16, 2025, 02:35 PM IST
ಮೋದಿ ಟೀಕಿಸುವ ಸಂತೋಷ್ ಲಾಡ್‌ ಪ್ರಯತ್ನ ಆಕಾಶಕ್ಕೆ ಉಗುಳುವಂತಿದೆ ; ಬಿ.ವೈ. ವಿಜಯೇಂದ್ರ!

ಸಾರಾಂಶ

ಸಂತೋಷ್ ಲಾಡ್‌ರ ಟ್ರಂಪ್ ಯಾತ್ರೆ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಬಿ.ವೈ. ವಿಜಯೇಂದ್ರ, ಲಾಡ್‌ರನ್ನು ಪ್ರಶ್ನಿಸಿ, ಕಾಶ್ಮೀರಿ ಪಂಡಿತರ ಸ್ಥಿತಿ, ಪಿಒಕೆ ಬಿಟ್ಟುಕೊಟ್ಟಿದ್ದು ಕಾಂಗ್ರೆಸ್ ಎಂದಿದ್ದಾರೆ. ಮೋದಿಯವರನ್ನು ಪ್ರಶ್ನಿಸುವುದು ಆಕಾಶಕ್ಕೆ ಉಗುಳಿದಂತೆ ಎಂದೂ, ತಿರಂಗಾ ಯಾತ್ರೆ ವ್ಯಂಗ್ಯ ಮಾಡುವ ಲಾಡ್ ಪಾಕಿಸ್ತಾನ್ ಜಿಂದಾಬಾದ್ ಕೂಗಿಸಿದ್ದಾರೆ ಎಂದೂ ವಿಜಯೇಂದ್ರ ಆರೋಪಿಸಿದ್ದಾರೆ.

ಬೆಂಗಳೂರು (ಮೇ 16): ಪಾಕಿಸ್ತಾನಕ್ಕೆ ಆಪರೇಷನ್ ಸಿಂದೂರ್ ಮೂಲಕ ಪಾಠ ಕಲಿಸಿದ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಯಶಸ್ಸನ್ನು ಆಚರಣೆ ಮಾಡುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಬಿಜೆಪಿ ವತಿಯಿಂದ 'ತಿರಂಗಾ ಯಾತ್ರೆ' ಮಾಡುತ್ತಿದ್ದಾರೆ. ಆದರೆ, ಈ ಬಗ್ಗೆ ಲೇವಡಿ ಮಾಡಿದ್ದ ಸಚಿವ ಸಂತೋಷ್ ಲಾಡ್, ಪ್ರಧಾನಿ ಮೋದಿ ಟ್ರಂಪ್ ಮಾತು ಕೇಳಿ ಕದನ ವಿರಾಮ ಮಾಡಿಕೊಂಡಿದ್ದಾರೆ. ಹೀಗಾಗಿ, ಬಿಜೆಪಿ ಟ್ರಂಪ್ ಯಾತ್ರೆ ಮಾಡಬೇಕು ಎಂದು ಹೇಳಿದ್ದರು. ಇದೀಗ ಸಚಿವ ಸಂತೋಷ್ ಲಾಡ್‌ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಧಾನಿ ಮೋದಿ ನಿರ್ಧಾರದ ಬಗ್ಗೆ ಪ್ರಶ್ನೆ ಮಾಡುವ ನೀವು ಆಕಾಶಕ್ಕೆ ಉಗುಳುವ ಪ್ರಯತ್ನ ಮಾಡುತ್ತಿದ್ದೀರಿ. ಅದು ಆಕಾಶಕ್ಎ ಉಗಿದರೆ ನಿಮ್ಮ ಮೇಲೆ ಬೀಳುತ್ತದೆ ಎಂಬ ಪರಿಜ್ಞಾನ ಇಲ್ಲವೇ ಎಂಬರ್ಥದಲ್ಲಿ ಕೌಂಟರ್ ಕೊಟ್ಟಿದ್ದಾರೆ.

ಈ ಬಗ್ಗೆ ಸಚಿವ ಸಂತೋಷ್ ಲಾಡ್ ಅವರಿಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್ ಮೂಲಕ ತಿರುಗೇಟು ನೀಡಿರುವ ಬಿ.ವೈ. ವಿಜಯೇಂದ್ರ ಅವರು, ಸಚಿವ ಸಂತೋಷ್ ಲಾಡ್ ಅವರೇ , ಭಾರತದ ಸಿರಿ ಕಿರೀಟ ಕಾಶ್ಮೀರವನ್ನು ಅಸ್ಥಿರಗೊಳಿಸಿದ್ದು ಯಾರು? ರಕ್ಷಣೆ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಲಕ್ಷಾಂತರ ಮೂಲ ನಿವಾಸಿ ಕಾಶ್ಮೀರಿ ಪಂಡಿತರ ಕುಟುಂಬಗಳು ಕೊಲೆ,ಅತ್ಯಾಚಾರದ ದೌರ್ಜನ್ಯಗಳನ್ನು ಅನುಭವಿಸಿ ಕಾಶ್ಮೀರ ತೊರೆಯುವಂತಾಗಲು ಕಾರಣರಾದವರಾರು? ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಬಿಟ್ಟುಕೊಟ್ಟವರಾರು? ಅವಕಾಶವಿದ್ದರೂ POK ಆಕ್ರಮಿಸಿಕೊಳ್ಳದೇ ಕೈಚೆಲ್ಲಿದವರಾರು? ಕಾಂಗ್ರೆಸ್ ಹಾಗೂ ಅದರ ಸ್ವಾರ್ಥ ಆಡಳಿತ ಇದಕ್ಕೆಲ್ಲ ಕಾರಣ ಎನ್ನುವುದು ದೇಶದ ಜನತೆಗೆ, ಜಗತ್ತಿಗೇ ತಿಳಿದ ಸತ್ಯ ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಗುಲಾಮಿ ಪದ್ಧತಿಯನ್ನು ನೆನಪಿಸುವ ರೀತಿಯಲ್ಲಿ ಇಂದಿಗೂ ನೆಹರು ಮನೆತನದವರೇ ಸುಪ್ರೀಂ ಎಂದು ಪ್ರಜಾಪ್ರಭುತ್ವವನ್ನು ಅವಮಾನಿಸುವ ಭಟ್ಟಂಗಿ ಗರಡಿಯಿಂದ ಬಂದ ನೀವು, ಭಾರತದ ಸಾರ್ವಭೌಮತೆಯ ಶಕ್ತಿ ಹಾಗೂ ಘನತೆಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಲು ಹೊರಟಿರುವ ಪರಿ ‘ಆಕಾಶಕ್ಕೆ ಉಗುಳುವ’ ಮೂರ್ಖನ ವರ್ತನೆ ನೆನಪಿಸುತ್ತಿದೆ.

ಪಾಕಿಸ್ತಾನದ ಮೇಲೆ ಯುದ್ಧವೇ ಬೇಡ ಎಂದು ಪಾಕಿಸ್ತಾನಿ ಮಾಧ್ಯಮಗಳಿಂದ ಬೆನ್ನು ತಟ್ಟಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಸ್ಥಾನ ವಿದ್ವಾನ್ ರೀತಿ ಮಾತನಾಡುವ ನೀವು ರಾಷ್ಟ್ರ ಪ್ರೇಮ ಪ್ರತಿನಿಧಿಸುವ ‘ತಿರಂಗಾ ಯಾತ್ರೆ’ಯನ್ನು ವ್ಯಂಗ್ಯ ಮಾಡುತ್ತೀರಿ, ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವ ನೀವು ಯಾವ ಮುಖ ಇಟ್ಟುಕೊಂಡು ‘ತಿರಂಗಾ ಯಾತ್ರೆ’ ಹಾಗೂ ಯುದ್ಧದ ಕುರಿತು ಮಾತನಾಡುತ್ತೀರಿ? ಇಂದು ವಿಶ್ವಮಟ್ಟದಲ್ಲಿ ಭಾರತವನ್ನು ಮುಂಚೂಣಿ ಸ್ಥಾನಕ್ಕೆ ತಂದು ನಿಲ್ಲಿಸಿರುವ, ಭಾರತದಲ್ಲಿ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವ ನಿಟ್ಟಿನಲ್ಲಿ ವ್ಯೂಹಗಳನ್ನು ಭೇದಿಸಿ ನಿಂತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ಶತಕೋಟಿ ಭಾರತೀಯರು ಒಪ್ಪಿಕೊಂಡು ಅವರ ನಾಯಕತ್ವವನ್ನು ಅಪ್ಪಿಕೊಂಡಿದ್ದಾರೆ.

ಭಾರತವನ್ನು ದುಸ್ಥಿತಿಗೆ ತರಲು ಹೊರಟಿದ್ದ ಭಾರತೀಯ ಕಾಂಗ್ರೆಸ್ (Indian National Congress) ಅನ್ನು ದೇಶದ ಜನತೆ ಇಂದು ದಯನೀಯ ಸ್ಥಿತಿಗೆ ತಲುಪಿಸಿದ್ದಾರೆ. ಇಷ್ಟಾದರೂ ಬುದ್ಧಿ ಕಲಿಯದ ನೀವು ಕುಯುಕ್ತಿಯ ಮಾತನಾಡುವುದನ್ನು ನಿಲ್ಲಿಸುವುದೇ ಇಲ್ಲ. ಒಗ್ಗಟ್ಟಿನ ಮನೆಯಲ್ಲಿ ಒಡಕು ಮೂಡಿಸುವ, ಮತಬ್ಯಾಂಕ್ ರಾಜಕಾರಣವನ್ನು ಪೋಷಿಸಿಕೊಂಡು ಬರುವ ನಿಮ್ಮಿಂದ ಭಾರತೀಯ ಜನತಾ ಪಾರ್ಟಿ ಹಾಗೂ ಕಾರ್ಯಕರ್ತರು ಪಾಠ ಹೇಳಿಸಿಕೊಳ್ಳುವ ಪರಿಸ್ಥಿತಿ ಈ ಶತಮಾನದಲ್ಲಂತೂ ಬರುವುದಿಲ್ಲ ಎನ್ನುವ ಸತ್ಯ ಪ್ರಚಾರಕ್ಕಾಗಿ ಒಟಗುಟ್ಟುವ ನಿಮಗೆ ತಿಳಿದಿರಲಿ' ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ
ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ