Karnataka Assembly Elections 2023: ಇಂದು, ನಾಳೆ ಬಿಜೆಪಿಯಿಂದ ಮಹಾ ಪ್ರಚಾರ ಅಭಿಯಾನ

Published : Apr 25, 2023, 05:57 AM IST
Karnataka Assembly Elections 2023: ಇಂದು, ನಾಳೆ ಬಿಜೆಪಿಯಿಂದ ಮಹಾ ಪ್ರಚಾರ ಅಭಿಯಾನ

ಸಾರಾಂಶ

ಎಲ್ಲ 224 ಕ್ಷೇತ್ರಗಳಲ್ಲೂ ಮತ ಯಾಚನೆ, ಶಾ ಸೇರಿ 98 ಕೇಂದ್ರ ನಾಯಕರು ಭಾಗಿ, ಬಿಜೆಪಿ ಪರ ರಾಜ್ಯದಲ್ಲಿ 4 ದಿನ ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ ಅಬ್ಬರದ ಪ್ರಚಾರ

ಬೆಂಗಳೂರು(ಏ.25):  ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿಯು ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ‘ವಿಶೇಷ ಮಹಾಪ್ರಚಾರ ಅಭಿಯಾನ’ ಹಮ್ಮಿಕೊಂಡಿದೆ.

ಈ ಮಹಾಪ್ರಚಾರ ಅಭಿಯಾನದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ಧರ್ಮೆಂದ್ರ ಪ್ರಧಾನ್‌, ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಮನಸುಖ್‌ ಮಾಂಡವೀಯ ಸೇರಿದಂತೆ 98 ಮಂದಿ ಕೇಂದ್ರ ಸಚಿವರು, ನಾಯಕರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌, ನಗರ ಸಭೆ ಅಧ್ಯಕ್ಷರು ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಏಕಕಾಲಕ್ಕೆ ಏಕ ಪ್ರಕಾರವಾಗಿ ಈ ಮಹಾಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾಹಿತಿ ನೀಡಿದ್ದಾರೆ.

ಲಿಂಗಾಯತರಿಗೆ ಅವಮಾನ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕೆಂಡ

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಹಾಪ್ರಚಾರ ಅಭಿಯಾನ ಬೆಳಗ್ಗೆಯಿಂದ ಸಂಜೆವರೆಗೆ ನಡೆಯಲಿದೆ. ಒಂದು ಪ್ರತಿಕಾಗೋಷ್ಠಿ, ಹೋಬಳಿ, ತಾಲೂಕು ಕೇಂದ್ರಗಳಲ್ಲಿ ರೋಡ್‌ ಶೋ, ಸಾರ್ವಜನಿಕ ಸಭೆ, ಮನೆ-ಮನೆಗೆ ಭೇಟಿ ನೀಡಿ ಮತಯಾಚನೆ, ಕಾರ್ಯಕರ್ತರು, ಸಮುದಾಯದ ಮುಖಂಡರು, ವಿವಿಧ ಯೋಜನೆಗಳ ಫಲಾನುಭವಿಗಳ ಸಭೆ ಇರಲಿದೆ. ಇದೇ ವೇಳೆ ನಮ್ಮ ಅಭ್ಯರ್ಥಿಗಳು ಅವರ ಕ್ಷೇತ್ರದ ವ್ಯಾಪ್ತಿಯ ಮಹಾಪುರುಷರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ದೇವಸ್ಥಾನ-ಮಠಮಾನ್ಯಗಳಿಗೆ ಭೇಟಿ ನೀಡಲಿದ್ದಾರೆ ಎಂದು ವಿವರಿಸಿದರು.

ಕರ್ನಾಟಕದಲ್ಲಿ ಬಿಜೆಪಿಗೆ ಪೂರ್ಣ ಬಹುಮತ: ಅಮಿತ್‌ ಶಾ

ನಮ್ಮದು ಕಾರ್ಯಕರ್ತರ ಪಕ್ಷವಾಗಿದ್ದು, ಈ ಎರಡು ದಿನಗಳ ಮಹಾಪ್ರಚಾರ ಅಭಿಯಾನವನ್ನು ಯಶಸ್ವಿಗೊಳಿಸಲಿದ್ದೇವೆ ಎಂದು ಕಟೀಲ್‌ ತಿಳಿಸಿದರು. ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತಿತರರಿದ್ದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ