ಸೆ. 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದ್ದು, ರಟ್ಟೀಹಳ್ಳಿ ಹಿರೇಕೆರೂರ ತಾಲೂಕಿನಿಂದ ಅತಿ ಹೆಚ್ಚು ಮಹಿಳಾ ಸದಸ್ಯರನ್ನಾಗಿ ಮಾಡಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ರಾಷ್ಟ್ರದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ರಟ್ಟಿಹಳ್ಳಿ (ಸೆ.16): ಸೆ. 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದ್ದು, ರಟ್ಟೀಹಳ್ಳಿ ಹಿರೇಕೆರೂರ ತಾಲೂಕಿನಿಂದ ಅತಿ ಹೆಚ್ಚು ಮಹಿಳಾ ಸದಸ್ಯರನ್ನಾಗಿ ಮಾಡಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ರಾಷ್ಟ್ರದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ 2024ರ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಅವಳಿ ತಾಲೂಕಿನ ಮಹಿಳಾ ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಸಂಪರ್ಕಿಸಿ ಸದಸ್ಯತ್ವ ಮಾಡಿಸುವಂತೆ ಅರಿವು ಮೂಡಿಸಿ, ಹೆಚ್ಚೆಚ್ಚು ಮಹಿಳೆಯರು ರಾಜಕಾರಣದಲ್ಲಿ ಸಕ್ರೀಯಗೋಳಿಸುವ ನಿಟ್ಟಿನಲ್ಲಿ ಕಾರ್ಯವಾಗಬೇಕಿದೆ ಎಂದರು.
ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ರಟ್ಟೀಹಳ್ಳಿ ಹಿರೇಕೆರೂರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಗೆ ಅತಿ ಹೆಚ್ಚು ಮತ ನೀಡುವ ಮೂಲಕ ಬಿಜೆಪಿ ಅಭ್ಯರ್ಥಿ ಭರ್ಜರಿ ಜಯಭೇರಿ ಸಾಧಿಸಿದೆ. ಕಾರಣ ಮುಂಬರುವ ಎಲ್ಲ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ತಳ ಮಟ್ಟದಿಂದ ಕಾರ್ಯಕರ್ತರನ್ನು ಸದಸ್ಯರನ್ನಾಗಿ ಮಾಡುವಂತೆ ಮನವಿ ಮಾಡಿದರು. ಹಾವೇರಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಠಿ ಪಾಟೀಲ್ ಮಾತನಾಡಿ, ರಟ್ಟೀಹಳ್ಳಿ ಹಿರೇಕೆರೂರ ವಿಧಾನಸಭಾ ಕ್ಷೇತ್ರದಿಂದ 1 ಲಕ್ಷಕ್ಕೂ ಅಧಿಕ ಮಹಿಳಾ ಸದಸ್ಯರನ್ನು ಮಾಡಿಸುವ ಗುರಿ ಹೊಂದಿದ್ದು ಆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.
ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಮಹಿಳೆಯರು ರಾಜಕಾರಣದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಮಹಿಳೆಯರು ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದುವರೆಯಲು ಸಾಧ್ಯವಾಗುವುದು. ಸದಸ್ಯತ್ವ ಅಭಿಯಾನದ ಜೊತೆ ಕೇಂದ್ರ ಸರಕಾರದ ಸಾಧನೆ ದೇಶದ ಭದ್ರತೆಯ ಬಗ್ಗೆ ತಳ ಮಟ್ಟದಿಂದ ಜಾಗೃತರಾದರೆ ಸದಸ್ಯತ್ವ ಅಭಿಯಾನ ಯಶಸ್ವಿಯಾಗುವುದು ಎಂದರು. ಇದೇ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ದೇವರಾಜ ನಾಗಣ್ಣನವರ, ಪ್ರಧಾನ ಕಾರ್ಯದರ್ಶಿ ಸುಶೀಲ್ ನಾಡಿಗೇರ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಲಿತಾ ಗುಂಡೇನಹಳ್ಳಿ, ವಿದ್ಯಾ ಶೆಟ್ಟಿ, ಭಾರತಿ ಕರ್ಜಗಿ, ಯಶೋಧಾ ಪಾಟೀಲ್, ರಟ್ಟೀಹಳ್ಳಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕಾವ್ಯ ಪಾಟೀಲ್ ಹಾಗೂ ಸದಸ್ಯರು ಇದ್ದರು.