ಇದು ಜನಸಂಕಲ್ಪ ಅಲ್ಲ, ವಿಜಯದ ಸಂಕಲ್ಪ ಯಾತ್ರೆ, ಸಿಎಂ ಆಗುವ ಸಿದ್ದು ಕನಸು ನನಸಾಗಲ್ಲ, ಸಿದ್ದರಾಮಯ್ಯಗೆ ಯಡಿಯೂರಪ್ಪ ತಿರುಗೇಟು
ರಾಯಚೂರು(ಅ.12): ರಾಜ್ಯದಲ್ಲಿ ಬಿಜೆಪಿ ಕೈಗೊಂಡಿರುವ ಯಾತ್ರೆ ಜನಸಂಕಲ್ಪ ಅಲ್ಲ, ವಿಜಯದ ಸಂಕಲ್ಪ ಯಾತ್ರೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ. ತಾಲೂಕಿನ ಗಿಲ್ಲೆಸುಗೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಬಿಜೆಪಿ ಜನಸಂಕಲ್ಪ ಯಾತ್ರೆ’ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಅವರು, ರಾಘವೇಂದ್ರ ಸ್ವಾಮಿಗಳು ನಡೆದಾಡಿದ ಪ್ರದೇಶದಿಂದಲೇ ಯಾತ್ರೆಗೆ ಚಾಲನೆ ನೀಡಲಾಗಿದೆ. ಅವರ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನಗಳಲ್ಲಿ ಗೆಲುವು ನಿಶ್ಚಿತವಾಗಿದ್ದು, ಇದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದರು.
ದೇಶದಲ್ಲಿ ಶೇ.73ರಷ್ಟು ಜನರು ಮೋದಿ ಪರವಾಗಿದ್ದಾರೆ ಎನ್ನುವುದು ಸಮೀಕ್ಷೆಯಿಂದ ಗೊತ್ತಾಗಿದೆ. ಇಡೀ ಜಗತ್ತೇ ಮೋದಿ ಅವರನ್ನು ವಿಶ್ವ ನಾಯಕರು ಎಂದು ಒಪ್ಪಿಕೊಂಡಿದೆ. ಆದರೆ, ಕಾಂಗ್ರೆಸ್ಸಿಗರು ಹಗುರವಾಗಿ ಮಾತನಾಡುವುದನ್ನು ಬಿಡಬೇಕು. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಆದರೆ, ಅವರ ಕನಸು ನನಸಾಗುವುದಿಲ್ಲ. ಮೋದಿ ಅವರ ಕಾಲಿನಡಿ ಕುಳಿತುಕೊಳ್ಳುವ ಯೋಗ್ಯತೆ ಕೂಡ ಅವರಿಗಿಲ್ಲ ಎಂದರು.
undefined
ರಾಯಚೂರಿನಿಂದ ರಾಮನಗರವರೆಗೆ ಬಿಜೆಪಿ Jana Sankalpa Yatre ಶುರು
5 ಸ್ಥಾನ ಗೆಲ್ಲಿಸಿ ಕೊಡಿ:
ರಾಯಚೂರಿನಂತಹ ಪ್ರದೇಶಕ್ಕೆ ಏಮ್ಸ್ ಅಗತ್ಯವಿದೆ. ಜಿಲ್ಲೆಯ ಜನ ಚುನಾವಣೆಯಲ್ಲಿ ಬಿಜೆಪಿಗೆ ಐದು ಸ್ಥಾನಗಳನ್ನು ಗೆಲ್ಲಿಸಿಕೊಟ್ಟರೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಏಮ್ಸ್ ಮಂಜೂರು ಮಾಡಿಸಿಕೊಡುತ್ತಾರೆ ಎಂದು ಭರವಸೆ ನೀಡಿದರು.
ಸಿಎಂ ಬಸವರಾಜ ಬೊಮ್ಮಾಯಿ, ನೀರಾವರಿ ಸಚಿವ ಗೋವಿಂದ ಕಾರಜೋಳ, ಸಾರಿಗೆ ಸಚಿವ ಬಿ.ಶ್ರೀರಾಮುಲು, ಬಿಜೆಪಿ ರಾಜ್ಯ ಉಸ್ತುವಾರಿ ಡಿ.ಕೆ.ಅರುಣಾ, ಶಾಸಕ ಕೆ.ಶಿವನಗೌಡ ನಾಯಕ, ಮಾಜಿ ಶಾಸಕ ತಿಪ್ಪರಾಜು ಹವಲ್ದಾರ್, ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹಾಗೂ ಇತರರು ಉಪಸ್ಥಿತರಿದ್ದರು.