ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ: ಯಡಿಯೂರಪ್ಪ ವಿಶ್ವಾಸ

Published : Mar 09, 2023, 11:00 PM IST
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ: ಯಡಿಯೂರಪ್ಪ ವಿಶ್ವಾಸ

ಸಾರಾಂಶ

ಕಾಂಗ್ರೆಸ್‌ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದ್ದು, ಜನರಿಗೆ ಮೋಸ ಮಾಡುತ್ತಿದೆ, ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಬಿಜೆಪಿ ಆಡಳಿತ ಜನಪರ ಆಡಳಿತ ನೀಡಿದ್ದು, ಜನ ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ಕೊಡಲಿದ್ದಾರೆ ಎಂದ ಬಿಎಸ್‌ವೈ

ಶಹಾಬಾದ(ಮಾ.09): ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಅವರು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯ ಶಹಾಬಾದ ನಗರದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್‌ ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದ್ದು, ಜನರಿಗೆ ಮೋಸ ಮಾಡುತ್ತಿದೆ, ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಬಿಜೆಪಿ ಆಡಳಿತ ಜನಪರ ಆಡಳಿತ ನೀಡಿದ್ದು, ಜನ ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ಕೊಡಲಿದ್ದಾರೆ ಎಂದರು.

ಕರ್ನಾಟಕದಲ್ಲಿ 140ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಜಯ: ಬಿ.ಎಸ್‌.ಯಡಿಯೂರಪ್ಪ

ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ಕಲಬುರಗಿ ಗ್ರಾಮೀಣ ಮತಕ್ಷೇತ್ರದಲ್ಲಿ ಸುಮಾರು .1500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕೈಗೊಂಡಿದ್ದು, ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ, ಜನರ ಸೇವೆಗೆ ಯಾವುದೇ ಸಂದರ್ಭದಲ್ಲಿ ಸ್ಪಂದಿಸಿದ್ದು, ಈ ಬಾರಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದಲ್ಲಿ ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಡಾ.ಉಮೇಶ ಜಾಧವ, ವಿಧಾನ ಪರಿಷತ, ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ ನಮೋಶಿ, ಸುನೀಲ ವಲ್ಯಾಪುರೆ, ಅರವಿಂದ ಲಿಂಬಾವಳಿ, ರಘುನಾಥ ಮಲ್ಕಾಪುರೆ, ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಜಿಲ್ಲಾ ಅಧ್ಯಕ್ಷ ರದ್ದೇವಾಡಗಿ, ಸಂಗಮೇಶ ವಾಲಿ, ಅರವಿಂದ ಚವ್ಹಾಣ, ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಮಾರುತಿರಾವ ಮೂಲೆ ಸೇರಿದಂತೆ ಇತರರ ಮುಖಂಡರು ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಉ.ಕರ್ನಾಟಕ ಬಗ್ಗೆ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ: ವಿಜಯೇಂದ್ರ
ಆರ್‌ಟಿಒ ಕಚೇರಿಗಳಲ್ಲಿ ಬ್ರೋಕರ್‌ ಹಾವಳಿ ತಡೆಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ