ರಾಜ್ಯಾದ್ಯಂತ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕಾರ್ಯಕರ್ತರು ಪಕ್ಷದ ಏಳಿಗೆಗಾಗಿ ದುಡಿಯುತ್ತಿದ್ದಾರೆ. ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಂದು ಅಧಿಕಾರಕ್ಕೆ ಬಂದಿದೆ: ಬಿ.ವೈ. ವಿಜಯೇಂದ್ರ
ಮೈಸೂರು(ಏ.22): ಉಚಿತ ಘೋಷಣೆಗಳ ಮೂಲಕ ಚುನಾವಣೆ ಗೆಲ್ಲಲು ಕಾಂಗ್ರೆಸ್ ಹೊರಟಿದೆ. ಆದರೆ ದೇಶದಲ್ಲಿ ಸುದೀರ್ಘ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ಬಡವರು ಬಡವರಾಗಿಯೇ ಇರಲಿ ಎಂದು ಬಯಸಿತ್ತು. ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರೇಳಿಕೊಂಡು ಓಡಾಡುವ ಕಾಂಗ್ರೆಸ್‌ನವರು ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಿದರು. ಅಂಬೇಡ್ಕರ್ ಸಾವನ್ನಪ್ಪಿದಾಗ ಅಂತ್ಯ ಸಂಸ್ಕಾರಕ್ಕೂ ಕಾಂಗ್ರೆಸ್‌ನವರು ಜಾಗ ಕೊಡಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ದೂರದೃಷ್ಟಿ ಇಟ್ಟುಕೊಂಡು ಅಧಿಕಾರ ನಡೆಸುತ್ತಿದ್ದಾರೆ. 2024ರ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಅಂತ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ನಿನ್ನೆ(ಶುಕ್ರವಾರ) ಮೈಸೂರಿನಲ್ಲಿ ನಡೆದ ಕೆಆರ್ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ಬಿಜೆಪಿಯನ್ನು ಅಲ್ಪಸಂಖ್ಯಾತ ವಿರೋಧಿ ಎನ್ನುವ ಕಾಂಗ್ರೆಸ್ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಏನು ಕೊಡುಗೆ ನೀಡಿಲ್ಲ. ಅಲ್ಪಸಂಖ್ಯಾತರನ್ನು ಓಟ್ ಬ್ಯಾಂಕ್ ಮಾಡಿಕೊಂಡಿತ್ತು. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮನೆಯ ಗೂಡು ಸೇರಿಕೊಳ್ಳುತ್ತಾರೆ ಎಂದುಕೊಂಡಿದ್ದರು. ಆದರೂ ವಿರಮಿಸದ ಯಡಿಯೂರಪ್ಪ ಅವರು ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯದ ಉದ್ಧಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರ ಉತ್ಸಾಹ ಪಕ್ಷದ ಕಾರ್ಯಕರ್ತರಲ್ಲೂ ಹುರುಪು ತಂದಿದೆ ಅಂತ ಹೇಳಿದ್ದಾರೆ.
undefined
ನನ್ನ ವೋಟು ನನ್ನ ಮಾತು: ಹುಣೂಸೂರು ಮತದಾರರು ಹೇಳೋದೇನು?
ರಾಜ್ಯಾದ್ಯಂತ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕಾರ್ಯಕರ್ತರು ಪಕ್ಷದ ಏಳಿಗೆಗಾಗಿ ದುಡಿಯುತ್ತಿದ್ದಾರೆ. ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಂದು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಜೆಡಿಎಸ್ ನವರು ಏನೇ ಬೊಬ್ಬೆ ಹೊಡೆದರೂ ರಾಜ್ಯದ ಜನರು ಅತಂತ್ರ ವಿಧಾನಸಭೆಗೆ ಅವಕಾಶ ಮಾಡಿಕೊಡುವುದಿಲ್ಲ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವಿದೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದ್ದರೆ ಒಳಿತು, ಡಬಲ್ ಇಂಜಿನ್ ಸರ್ಕಾರ ಬೇಕೆಂದು ಜನರು ಬಯಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಅಂತ ತಿಳಿಸಿದ್ದಾರೆ.
ಪಕ್ಷ ಬಿಟ್ಟವರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ
ಯಾರು ಪಕ್ಷ ಬಿಟ್ಟು ಹೋಗಿದ್ದರೂ ಚಿಂತಿಸುವ ಅಗತ್ಯವಿಲ್ಲ. ಬಿಜೆಪಿ ಲಕ್ಷಾಂತರ ಕಾರ್ಯಕರ್ತರನ್ನು ಆಧರಿಸಿರುವ ಪಕ್ಷವಾಗಿದೆ. ಹೀಗಾಗಿ ಕೆಲ ನಾಯಕರು ಪಕ್ಷ ಬಿಟ್ಟು ಹೋಗಿದ್ದರೂ ಸಹ ಯಾರು ಕೂಡ ಭಯಪಡುವ ಅಗತ್ಯವಿಲ್ಲ.. ಹಳೇ ಮೈಸೂರು ಭಾಗವನ್ನು ಗಂಭೀರವಾಗಿ ಪರಿಗಣಿಸಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮೈಸೂರು, ಚಾಮರಾಜನಗರ ಜಿಲ್ಲೆಗಳ 15 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ ಅಂತ ಹೇಳಿದ್ದಾರೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.