'2023ಕ್ಕೆ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ : ಬಿಜೆಪಿಗೆ ಅಧಿಕಾರ ಖಚಿತ'

Kannadaprabha News   | Asianet News
Published : Aug 16, 2021, 04:01 PM IST
'2023ಕ್ಕೆ  ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ : ಬಿಜೆಪಿಗೆ ಅಧಿಕಾರ ಖಚಿತ'

ಸಾರಾಂಶ

2023ರಲ್ಲಿ ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ  ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವ  BJP ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿಕೆ  

ಚಿಕ್ಕಬಳ್ಳಾಪುರ (ಆ.16): ಮುಂದಿನ 2023ರಲ್ಲಿ ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ  ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ  ಬಿಜೆಪಿ ಚುನಾವಣೆ ಎದುರಿಸಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದರು. 

ನಗರದಲ್ಲಿ ಭಾನುವಾರ ನಡೆದ 75ನೇ ಸ್ವಾತಂತ್ರ್ಯೋತ್ಸವದಲ್ಲಿ ಮಾತನಾಡಿದ ಅವರು ಸರ್ಕಾರ ಹೆಚ್ಚು ಕಾಲ ಉಳಿಯಲ್ಲ ಎಂಬ ವಿಪಕ್ಷ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದರು. 

ಬೊಮ್ಮಾಯಿ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನಗೊಳ್ಳಬಹುದು: ಹೀಗೊಂದು ಭವಿಷ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದಾಗಲೇ ವಿರೋಧ ಪಕ್ಷಗಳಿಗೆ ಬೊಮ್ಮಾಯಿ ದಕ್ಷ, ಅಧ್ಯಯನಶೀಲ, ರಾಜಕಾರಣಿ ಎನ್ನುವುದು ಗೊತ್ತಾಗಿದೆ ಎಂದು ಹೇಳಿದರು. 

ಶೀಘ್ರದಲ್ಲೇ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪತನವಾಗಲಿದೆ. ಹಲವು ಮುಖಂಡರು ಸಚಿವ ಸ್ಥಾನಕ್ಕಾಗಿ ಮುನಿಸಿಕೊಂಡರೆ ಇನ್ನು ಹಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಇದರಿಂದ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೀಗ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?