
ಮದ್ದೂರು (ಆ.12): 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ಹಾಗೂ ಬಿ.ಎಸ್.ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭವಿಷ್ಯ ನುಡಿದಿದ್ದಾರೆ.
ತಾಲೂಕಿನ ಶಿವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರಿಗೆ ಟೀಕಿಸುವುದು, ವಿರೋಧ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ. ಮುಂದಿನ ಚುನಾವಣೆಯಲ್ಲಿ ವಿಪಕ್ಷ ನಾಯಕನ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಈ ಬಾರಿಯೂ ಸರಳ ದಸರಾ ಆಚರಣೆಗೆ ಚಿಂತನೆ: ಎಸ್.ಟಿ. ಸೋಮಶೇಖರ್
ಆನಂದ್‌ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನೂ ಕೊಟ್ಟಿಲ್ಲ, ಸಿಎಂಗ ಲಕೋಟೆ ಮೂಲಕವೂ ತಲುಪಿಸಿಲ್ಲ. ಎಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.