ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ, ಅಲ್ಲಿವರೆಗೂ ಮನೆ ಸೇರಲ್ಲ: ಬಿ.ವೈ.ವಿಜಯೇಂದ್ರ

By Kannadaprabha NewsFirst Published Dec 25, 2023, 11:04 AM IST
Highlights

ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಜೊತೆಗೆ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವವರೆಗೂ ಮನೆ ಸೇರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಣೆ ಮಾಡಿದ್ದಾರೆ. 

ದಾವಣಗೆರೆ (ಡಿ.25): ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಜೊತೆಗೆ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವವರೆಗೂ ಮನೆ ಸೇರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ದಾವಣಗೆರೆಗೆ ಆಗಮಿಸಿದ ವೇಳೆ ಪಕ್ಷದ ಯುವ ಮುಖಂಡರು, ಕಾರ್ಯಕರ್ತರು ಅಭಿಮಾನದಿಂದ ದೊಡ್ಡ ಹಾರ ಹಾಕಿ ಸ್ವಾಗತಿಸಿದ ನಂತರ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದರು.

ಶೀಘ್ರದಲ್ಲೇ ದಾವಣಗೆರೆಯಲ್ಲಿ ಲಕ್ಷಾಂತರ ಜನರನ್ನು ಸೇರಿಸಿ, ಬೃಹತ್ ಸಮಾವೇಶ ಆಯೋಜಿಸೋಣ. 28 ಕ್ಷೇತ್ರಗಳನ್ನೂ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈಗಳನ್ನು ಮತ್ತಷ್ಟು ಬಲಪಡಿಸೋಣ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು, ರಾಜ್ಯ ಪ್ರವಾಸ ಮಾಡಿ, ಪಕ್ಷ ಸಂಘಟಿಸಿದಂತೆ ನಾವು ಪಕ್ಷ ಸಂಘಟಿಸುವ ಮೂಲಕ ಅಧಿಕಾರಕ್ಕೆ ತರುವ ಕೆಲಸ ಮಾಡೋಣ ಎಂದು ಅವರು ಕರೆ ನೀಡಿದರು. ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿ. ರಾಜ್ಯಾಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ದಾವಣಗೆರೆಗೆ ಬರುತ್ತಿದ್ದು, ಇದೇ ಪ್ರೀತಿ, ವಿಶ್ವಾಸ ಸದಾ ಇರಲಿ. 

ಈಗಿನ ಪರಿಸ್ಥಿತಿಯಲ್ಲಿ ಅವಧಿಗೆ ಮುನ್ನವೇ ಕಾಂಗ್ರೆಸ್​ ಸರ್ಕಾರ ಢಮಾರ್: ಮುರುಗೇಶ್ ನಿರಾಣಿ ಭವಿಷ್ಯ

ಕಳೆದ 6 ತಿಂಗಳಿನಿಂದ ಬಡವರು, ರೈತರು, ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸಲು ಜನತೆ ಸಂಕಲ್ಪ ಮಾಡಿದ್ದಾರೆ. ಇದಕ್ಕಾಗಿ ಲೋಕಸಭೆ ಚುನಾವಣೆ ಎದುರು ನೋಡುತ್ತಿದ್ದಾರೆ ಎಂದರು. ತಿಳಿಸಿದರು. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಯೋಧರಂತೆ ಸಜ್ಜಾಗಬೇಕು. ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ರಾಜ್ಯದ ಎಲ್ಲಾ 28 ಕ್ಷೇತ್ರದಲ್ಲೂ ಗೆಲ್ಲಿಸುವ ಮೂಲಕ ಮತ್ತೆ ಕೇಂದ್ರದಲ್ಲಿ ಬಿಜೆಪಿಯನ್ನು ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು. ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಮನೆಗೆ ಕಳಿಸಿ, ಬಹುಬಲದೊಂದಿಗೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ನಾವು, ನೀವೆಲ್ಲರೂ ಸೇರಿ ಶ್ರಮಿಸೋಣ ಎಂದು ವಿಜಯೇಂದ್ರ ಕರೆ ನೀಡಿದರು.

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಟಿ.ಗುರುಸಿದ್ದನಗೌಡ, ಯುವ ಮುಖಂಡರಾದ ಲೋಕಿಕೆರೆ ನಾಗರಾಜ, ಮಾಡಾಳ್ ಮಲ್ಲಿಕಾರ್ಜುನ, ಡಾ.ಟಿ.ಜಿ.ರವಿಕುಮಾರ, ಪಿ.ಸಿ.ಶ್ರೀನಿವಾಸ ಭಟ್‌, ಹರಿಹರದ ಚಂದ್ರಶೇಖರ ಪೂಜಾರ, ಎನ್.ರಾಜಶೇಖರ, ಎಸ್‌.ಟಿ.ವೀರೇಶ, ಬಿ.ಟಿ.ಸಿದ್ದಪ್ಪ, ಜಿ.ಎಸ್‌.ಶ್ಯಾಮ್ ಮಾಯಕೊಂಡ, ಗೌತಮ್ ಜೈನ್, ಪ್ರವೀಣ ಜಾಧವ್‌, ಶಿವನಗೌಡ ಪಾಟೀಲ್, ಟಿಂಕರ್ ಮಂಜಣ್ಣ, ಎಸ್.ಟಿ.ಯೋಗೇಶ್ವರ, ನವೀನ, ಸುರೇಶ ಗಂಡಗಾಳೆ, ಜಗದೀಶ ಕುಮಾರ ಪಿಸೆ, ಅಣಜಿ ಬಸವರಾಜ ಇತರರು ಇದ್ದರು.

ದತ್ತಮಾಲಾಧಾರಿ ಸಿ.ಟಿ.ರವಿಯಿಂದ ಕಾಫಿನಾಡಿನ ಮನೆಗಳಲ್ಲಿ ಭಿಕ್ಷಾಟನೆ!

ರಾಜ್ಯಾಧ್ಯಕ್ಷರಾಗಿ ಮೊದಲ ದಾವಣಗೆರೆ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ದಾವಣಗೆರೆಗೆ ಆಗಮಿಸಿದ ಬಿ.ವೈ.ವಿಜಯೇಂದ್ರಕ್ಕೆ ಪಕ್ಷದ ಹಿರಿಯರು, ಕಿರಿಯ ಮುಖಂಡರು, ಕಾರ್ಯಕರ್ತರು ದೊಡ್ಡ ದೊಡ್ಡ ಹೂವಿನ ಹಾರಗಳನ್ನು ಹಾಕುವ ಮೂಲಕ ನಗರಕ್ಕೆ ಸ್ವಾಗತಿಸಿದರು. ನಗರದ ಹೊರ ವಲಯದಲ್ಲಿ ಪೊಲೀಸ್ ಬೆಂಗಾವಲಿನಲ್ಲಿ ಆಗಮಿಸಿದ ವಿಜಯೇಂದ್ರ ವಾಹನ ಆಗಮಿಸುತ್ತಿದ್ದ ಮರಿ ರಾಜಾಹುಲಿಗೆ ಜೈ ಎಂಬ ಘೋಷಣೆ ಕೂಗುತ್ತಾ ಕಾರ್ಯಕರ್ತರು ಅಭಿಮಾನದಿಂದ ಸ್ವಾಗತಿಸಿ, ಹಸ್ತಲಾಘ‍ವ ಮಾಡುವ ಮೂಲಕ ಸಂಭ್ರಮಿಸಿದರು.

click me!