
ತುಮಕೂರು (ಅ.28): ಐವರು ಕಾಂಗ್ರೆಸ್ ಶಾಸಕರು ಬಿಜೆಪಿ ಬರುತ್ತಾರೆಂಬ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಹೇಳಿಕೆಯನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿ ಅವರಿಗೆ ಈ ಬಗ್ಗೆ ಮಾಹಿತಿ ಇರುತ್ತದೆ ಎಂದರು.
ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಬಿಜೆಪಿ ಪಕ್ಷ ಸವಾಲಾಗಿ ಸ್ವೀಕರಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಹಲವು ಬಾರಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಅವರು ಗೆಲುವು ಸಾಧಿಸಿದ್ದರೂ ಅಭಿವೃದ್ಧಿ ಎಂಬುದು ಕುಂಠಿತವಾಗಿದೆ ಎಂದು ಹೇಳಿದರು.
'ಯತ್ನಾಳ್ ತಿರುಕನ ಕನಸು ಕಾಣಬೇಡಿ, ಸವಾಲ್ ಹಾಕ್ತೇನೆ, ನೀವು ಸಿಎಂ ಆಗೋದಿಲ್ಲ' ..
ಕುಡಿಯುವ ನೀರು, ರಸ್ತೆಯಂತಹ ಮೂಲಭೂತ ಸೌಕರ್ಯಗಳು ಇಂದಿಗೂ ಮರೀಚಿಕೆಯಾಗಿವೆ. ಹಾಗಾಗಿ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜೇಶಗೌಡ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.