ವಿಧಾನಸಭಾ ಚುನಾವಣೆಗೆ ಇನ್ನು ದಿನಾಂಕ ಘೋಷಣೆ ಆಗಿಲ್ಲ, ಆದ್ರೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದ್ದು ಚುನಾವಣೆ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೊಡೆದಾಟ ಪ್ರಕರಣ ವರದಿಯಾಗುತ್ತಿದೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಫೆ.06): ವಿಧಾನಸಭಾ ಚುನಾವಣೆಗೆ ಇನ್ನು ದಿನಾಂಕ ಘೋಷಣೆ ಆಗಿಲ್ಲ, ಆದ್ರೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದ್ದು ಚುನಾವಣೆ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೊಡೆದಾಟ ಪ್ರಕರಣ ವರದಿಯಾಗುತ್ತಿದೆ. ಹಾಲಿ-ಮಾಜಿ ಶಾಸಕ ಬೆಂಬಲಿಗರ ಹೊಡೆದಾಟದ ಪ್ರರಕಣಗಳು ನಡೆಯುತ್ತಿದ್ದು ಕ್ಷೇತ್ರದಲ್ಲಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
undefined
ಶೃಂಗೇರಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ: ಒಂದೇ ವಾರದ ಅವಧಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎನ್.ಆರ್.ಪುರ ಹಾಗೂ ಕಡಬಗೆರೆ ಗ್ರಾಮದಲ್ಲಿ ನಡೆದಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಪರ ಕೆಲಸ ಮಾಡುತ್ತಿರುವ ಕಡಬಗೆರೆ ಸಮೀಪದ ಅಂಡುವಾನೆ ಗ್ರಾಮದ ಹಾರ್ಥೇಶ್ ಎಂಬ ಯುವಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಯುವಕರು ನೌಕರಿ ಕೇಳಿದ್ರೆ ಮೋದಿಯವರು ಪಕೋಡಾ ಮಾರಿ ಅಂತಾರೆ: ಸಿದ್ದರಾಮಯ್ಯ
ಭಾನುವಾರ ಸಂಜೆ ಬೈಕಿನಲ್ಲಿ ಮನೆಗೆ ಹೋಗುತ್ತಿದ್ದ ಹಾರ್ಥೇಶ್ ಮೇಲೆ ಏಳೆಂಟು ಕಾಂಗ್ರೆಸ್ ಕಾರ್ಯಕರ್ತರು ಸುಖಾಸುಮ್ಮನೆ ಕೆಣಕಿಕೊಂಡು ಬಿಜೆಪಿಯ ಪರ ಕೆಲಸ ಮಾಡುತ್ತೀಯಾ ಎಂದು ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿಗರು ಆರೋಪಿಸಿದ್ದಾರೆ. ಶೃಂಗೇರಿಯ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ ಆಪ್ತ ಸತೀಶ್ ಹಾಗೂ ಆತನ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿಗರು ಆರೋಪಿಸಿದ್ದಾರೆ.
ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಆಗಾಗ್ಗೆ ಮಾರಾಮಾರಿ: ಜಿಲ್ಲೆಯಲ್ಲಿ ಅದರಲ್ಲೂ ಪ್ರಮುಖವಾಗಿ ಎನ್.ಆರ್.ಪುರ, ಕೊಪ್ಪ ಹಾಗೂ ಶೃಂಗೇರಿ ಮೂರು ತಾಲೂಕುಗಳನ್ನ ಒಳಗೊಂಡು ಒಂದು ವಿಧಾನಸಭಾ ಕ್ಷೇತ್ರವಾಗಿರುವ ಶೃಂಗೇಯಲ್ಲಿ ಇತ್ತೀಚೆಗೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಆಗಾಗ್ಗೆ ಮಾರಾಮಾರಿ ನಡೆಯುತ್ತಿದೆ. ಚುನಾವಣೆ ಸಮೀಸುತ್ತಿದ್ದಂತೆ ಹಾಲಿ ಹಾಗೂ ಮಾಜಿ ಶಾಸಕರ ಬೆಂಬಲಿಗರು ಮೇಲಿಂದ ಮೇಲೆ ಹೊಡೆದಾಡುತ್ತಿದ್ದಾರೆ.
ಪ್ರಲ್ಹಾದ್ ಜೋಶಿ ಸಿಎಂ ಹೇಳಿಕೆ, ದಿಕ್ಕು ತಪ್ಪಿಸುವ ತಂತ್ರ: ಸಚಿವ ಶ್ರೀರಾಮುಲು
ಕಳೆದ ವಾರವಷ್ಟೆ ಎನ್.ಆರ್.ಪುರ ತಾಲೂಕಿನ ಶಿವು ಎಂಬ ಯುವಕ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಆತನ ಮೇಲೂ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿ ಆತನ ಕೈ ಮುರಿದಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಒಂದೇ ವಾರದ ಅವಧಿಯಲ್ಲಿ ಮತ್ತೊಂದು ಪ್ರಕರಣ ನಡೆದಿದ್ದು, ಮನೆಗೆ ಹೋಗುತ್ತಿದ್ದ ಯುವಕನ ಮೇಲೆ ಬಿಜೆಪಿಯ ಜೀವರಾಜ್ ಪರ ಕೆಲಸ ಮಾಡುತ್ತಿದ್ದೀಯಾ ಎಂದು ಹಲ್ಲೆ ಮಾಡಿದ್ದಾರಂತೆ. ಓರ್ವ ಯುವಕನ ಮೇಲೆ ಏಳೆಂಟು ಜನ ಹಲ್ಲೆ ಮಾಡಿದ್ದು ರಸ್ತೆಯಲ್ಲೇ ಬೀಳುವಂತೆ ಹೊಡೆದಿದ್ದಾರೆ. ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.